ಸದನಕ್ಕೆ ಅಡ್ಡಿ | ಬಿಜೆಪಿಯ 18 ಸದಸ್ಯರು 6 ತಿಂಗಳು ಅವಧಿಗೆ ಅಮಾನತು, ಸಭಾಧ್ಯಕ್ಷರಿಂದ ರೂಲಿಂಗ್‌

Date:

ವಿಧಾನಸಭೆಯ ಅಧಿವೇಶನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಸಭಾಧ್ಯಕ್ಷ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ.

- Advertisement -

ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಮುತ್ತಿಗೆ ಹಾಕಿ, ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 18 ಶಾಸಕರನ್ನು ಅಮಾನತು ಮಾಡಲಾಗಿದ್ದು, ಈ ಶಾಸಕರು ಅರು ತಿಂಗಳೊಳಗೆ ನಡೆಯುವ ಯಾವುದೇ ಅಧಿವೇಶನದಲ್ಲಿ ಭಾಗಿಯಾಗುವಂತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗದು. ಪೀಠಕ್ಕೆ ಅಗೌರವ ತೋರಿದ್ದೀರಿ. ನಿಮ್ಮನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ” ಎಂದು ಸ್ಪೀಕರ್​ ಯುಟಿ ಖಾದರ್ ಅವರು ಒಬ್ಬೊಬ್ಬರ ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್ ಅವರು ಅವರನ್ನು ಎತ್ತಿಕೊಂಡು ಹೊರಹಾಕಿದರು.

ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಹನಿಟ್ರ್ಯಾಪ್ ಆರೋಪ ಮತ್ತೆ ಸದನದಲ್ಲಿ ಪ್ರತಿಧ್ವನಿಸಿತು. ಪ್ರತಿಪಕ್ಷದವರು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು. ಕಲಾಪ ನಡೆಸಲು ಅವಕಾಶ ಕೊಡಿ ಎಂದು ಖಾದರ್ ಅವರು ಮನವಿ ಮಾಡಿಕೊಂಡರೂ ಪಟ್ಟು ಬಿಡಲಿಲ್ಲ. ಗದ್ದಲ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕಲಾಪ ಮುಂದೂಡಲಾಗಿತ್ತು. ಮತ್ತೆ ಸಂಜೆ 4.10ಕ್ಕೆ ಕಲಾಪ ಆರಂಭವಾಯಿತು.

ಸಭಾಧ್ಯಕ್ಷರ ಪೀಠದ ಗೌರವಕ್ಕೆ 18 ಶಾಸಕರನ್ನು ಆರು ತಿಂಗಳ ಅವಧಿಗೆ ಸದನದಿಂದ ಅಮಾನತು ಮಾಡುವಂತೆ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಅವರು ಪ್ರಸ್ತಾವ ಮಂಡಿಸಿದರು. ಅದನ್ನು ಸ್ಪೀಕರ್ ಧ್ವನಿಮತಕ್ಕೆ ಹಾಕಿದರು. ಗದ್ದಲದ ಮಧ್ಯೆಯೇ ಧ್ವನಿಮತದ ಮೂಲಕ ನಿರ್ಣಯ ಅಂಗೀರಿಸಲಾಯಿತು.

ಅಮಾನತುಗೊಂಡ ಸದಸ್ಯರು

  1. ಡಾ. ಸಿ.ಎನ್. ಅಶ್ವಥನಾರಾಯಣ
  2. ಎಸ್.ಆರ್. ವಿಶ್ವನಾಥ್
  3. ದೊಡ್ಡನಗೌಡ ಪಾಟೀಲ
  4. ಶರಣು ಸರಲಗರ
  5. ಡಾ. ಚಂದ್ರು ಲಮಾಣಿ
  6. ಮುನಿರತ್ನ
  7. ಧೀರಜ್ ಮುನಿರಾಜು
  8. ಬಿ.ಎ. ಬಸವರಾಜ್
  9. ಎಂ. ಆರ್. ಪಾಟೀಲ್
  10. ಚನ್ನಬಸಪ್ಪ
  11. ಬಿ. ಸುರೇಶಗೌಡ
  12. ಉಮಾನಾಥ ಎ. ಕೋಟ್ಯಾನ್
  13. ಸಿ.ಕೆ. ರಾಮಮೂರ್ತಿ
  14. ಬಿ.ಬಿ ಹರೀಶ್
  15. ಡಾ. ವೈ. ಭರತ್ ಶೆಟ್ಟಿ
  16. ಬಸವರಾಜ ಮತ್ತಿಮೂಡ್
  17. ಡಾ. ಶೈಲೇಂದ್ರ ಬೆಲ್ದಾಳೆ
  18. ಯಶಪಾಲ್ ಎ. ಸುವರ್ಣ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....