ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದರು.
ನೂತನ ಸಂಸತ್ ಭವನ ಸೆಂಟ್ರಲ್ ವಿಸ್ಟಾದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಶ್ರೀ ಭರ್ತೃಹರಿ ಮಹತಾಬ್ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡಲ್ಲಿ ಪ್ರಮಾಣ ಸ್ವೀಕರಿಸಿದೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ.
ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ… pic.twitter.com/uH4sDqutDM
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 24, 2024
ಈ ವೇಳೆ ನಾಲ್ವರು ಸಂಸದರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಬಾರಿಗೆ ಸಂಸತ್ ಪ್ರವೇಶಿಸುತ್ತಿರುವ ಸೋಮಣ್ಣ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಸಂಸತ್ ಪ್ರವೇಶಿಸಿದರು.
It’s a privilege to take oath as a Member of Parliament in the 18th Lok Sabha.
I reaffirm my commitment to work towards a strong and Viksit Bharat, under the able leadership of Hon’ble PM Shri @narendramodi ji.
📍Lok Sabha, New Delhi pic.twitter.com/cJmL9DmrCb
— V. Somanna (@VSOMANNA_BJP) June 24, 2024
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಗಳಿಸಿದ್ದ ಹೆಚ್ ಡಿ ಕುಮಾರಸ್ವಾಮಿಯವರಿಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ, ಧಾರವಾಡ ಕ್ಷೇತ್ರದಿಂದ ಆಯ್ಕೆಯಾಗಿರುವ ಪ್ರಲ್ಹಾದ್ ಜೋಶಿಯವರಿಗೆ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಸ್ಥಾನ ನೀಡಲಾಗಿದೆ.
Proud moment being sworn in for the 5th consecutive term as an Member of Parliament.
ಸತತ 5ನೇ ಬಾರಿ ಸಂಸದನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೆಮ್ಮೆಯ ಕ್ಷಣ pic.twitter.com/V2boqiJ59C
— Pralhad Joshi (@JoshiPralhad) June 24, 2024
ತುಮಕೂರಿನಿಂದ ಸ್ಪರ್ಧಿಸಿ ಗೆದ್ದಿರುವ ವಿ.ಸೋಮಣ್ಣ ಅವರಿಗೆ ಕಲ್ಲಿದ್ದಲು ಮತ್ತು ಗಣಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸ್ಥಾನ ನೀಡಿದ್ದರೆ, ಬೆಂಗಳೂರು ಉತ್ತರದಿಂದ ಗೆದ್ದಿರುವ ಶೋಭಾ ಕರಂದ್ಲಾಜೆಯವರಿಗೆ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
18 ನೇ ಲೋಕಸಭೆಯ ಪ್ರಥಮ ಅಧಿವೇಶನದಲ್ಲಿ ಇಂದು, ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ಅಭೂತಪೂರ್ವ ಕ್ಷಣ.
ನಮ್ಮೆಲ್ಲರ ನಾಯಕ, ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ದಕ್ಷ ನೇತೃತ್ವದೊಂದಿಗೆ, ದೇಶದ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಾ, ನಿರಂತರ ಜನಸೇವೆಗೈಯ್ಯಲು ಬದ್ಧಳಾಗಿದ್ದೇನೆ.#ParliamentSession pic.twitter.com/PxFB3EkDLb
— Shobha Karandlaje (@ShobhaBJP) June 24, 2024
