ಕಾಂಗ್ರೆಸ್ ಸೇರಿ 19 ವಿಪಕ್ಷಗಳಿಂದ ನೂತನ ಸಂಸತ್ ಭವನದ ಉದ್ಘಾಟನೆ ಬಹಿಷ್ಕಾರ

Date:

  • ಸಂವಿಧಾನದ ಆತ್ಮ ರಾಷ್ಟ್ರಪತಿಗಳನ್ನು ಆಹ್ವಾನಿಸದಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನ
  • ರಾಷ್ಟ್ರಪತಿಗಳಿಲ್ಲದೆ ಒಕ್ಕೂಟ ವ್ಯವಸ್ಥೆಯಿಲ್ಲ ಎಂಬುದನ್ನು ಮರೆತಿರುವ ಕೇಂದ್ರ ಸರ್ಕಾರ

ಕಾಂಗ್ರೆಸ್ ನೇತೃತ್ವದ ಹತ್ತೊಂಬತ್ತು ವಿರೋಧ ಪಕ್ಷಗಳು ಮೇ 28ರಂದು ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕಾರ ಮಾಡುವ ನಿರ್ಧಾರವನ್ನು ಬುಧವಾರ (ಮೇ 24) ಪ್ರಕಟಿಸಿವೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಃ ಸಂಸತ್‌ಭವನ ಉದ್ಘಾಟಿಸಲು ನಿರ್ಧರಿಸಿರುವುದು ದೇಶದ ಪ್ರಥಮ ಪ್ರಜೆಯಾದ ರಾಷ್ಟ್ರಪತಿಗಳನ್ನು ಅವಮಾನಿಸಿರುವುದರ ಜೊತೆಗೆ ಸಂವಿಧಾನದ ಮೂಲ ಆಶಯವನ್ನು ಉಲ್ಲಂಘಿಸಲಾಗಿದೆ ಎಂದು ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

“ಹೊಸ ಸಂಸತ್ ಭವನದ ಉದ್ಘಾಟನೆ ಒಂದು ಮಹತ್ವದ ಸಂದರ್ಭ. ಸರ್ಕಾರವು ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದೆ. ನಮ್ಮ ಭಿನ್ನಾಭಿಪ್ರಾಯ ಬದಿಗಿಟ್ಟು, ಈ ಸಂದರ್ಭವನ್ನು ಗುರುತಿಸಲು ನಾವು ಮುಕ್ತರಾಗಿದ್ದೇವೆ. ಆದಾಗ್ಯೂ, ರಾಷ್ಟ್ರಪತಿಗಳಾದ ಮುರ್ಮು ಅವರನ್ನು ಸಂಪೂರ್ಣವಾಗಿ ಹೊರಗಿಟ್ಟು ಹೊಸ ಸಂಸತ್ತಿನ ಕಟ್ಟಡವನ್ನು ಸ್ವತಃ ಉದ್ಘಾಟಿಸುವ ಪ್ರಧಾನಿ ಮೋದಿಯವರ ನಿರ್ಧಾರವು ಘೋರ ಅವಮಾನ ಮಾತ್ರವಲ್ಲ, ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ” ಎಂದು ವಿಪಕ್ಷಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಹೇಳಿಕೆಗೆ ಸಹಿ ಹಾಕಿದವರಲ್ಲಿ ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಜೆಡಿಯು, ಎಎಪಿ, ಎನ್‌ಸಿಪಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಸಿಪಿಐ(ಎಂ), ಎಸ್‌ಪಿ, ಆರ್‌ಜೆಡಿ, ಸಿಪಿಐ, ಮುಸ್ಲಿಂ ಲೀಗ್, ಜೆಎಂಎಂ, ನ್ಯಾಷನಲ್ ಕಾನ್ಫರೆನ್ಸ್, ಕೇರಳ ಕಾಂಗ್ರೆಸ್ (ಎಂ), ಕ್ರಾಂತಿಕಾರಿ ಸಮಾಜವಾದಿ ಪಕ್ಷ (ಆರ್‌ಎಸ್‌ಪಿ), ಎಂಡಿಎಂಕೆ, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮತ್ತು ಆರ್‌ಎಲ್‌ಡಿ ಸೇರಿವೆ.

ಈ ಸುದ್ದಿ ಓದಿದ್ದೀರಾ? ತಾಳಿ ಕಟ್ಟದೆ ಪರಾರಿಯಾಗಲು ಯತ್ನಿಸಿದ ವರ; 20 ಕಿಮೀ ಬೆನ್ನಟ್ಟಿ ಮಂಟಪಕ್ಕೆ ಕರೆತಂದ ವಧು

“ರಾಷ್ಟ್ರಪತಿ ಮತ್ತು ರಾಜ್ಯಗಳ ಪ್ರತಿನಿಧಿಗಳ ಸಭೆಯಾದ ಮೇಲ್ಮನೆ- ಜನಪ್ರತಿನಿಧಿಗಳಿರುವ ಕೆಳಮನೆ ಎಂಬ ಎರಡು ಸಭೆಗಳನ್ನು ಹೊಂದಿರುವ ಕೇಂದ್ರ ಸರ್ಕಾರಕ್ಕೆ ಒಂದು ಸಂಸತ್ತು ಇರಬೇಕು” ಎಂದು ಭಾರತ ಸಂವಿಧಾನದ 79ನೇ ವಿಧಿ ಹೇಳುತ್ತದೆ ಎಂದು ವಿಪಕ್ಷಗಳ ಹೇಳಿಕೆ ತಿಳಿಸಿದೆ. ಮುಂದುವರಿದು, “ರಾಷ್ಟ್ರಪತಿಗಳು ಭಾರತದಲ್ಲಿ ರಾಷ್ಟ್ರದ ಮುಖ್ಯಸ್ಥರು ಮಾತ್ರವಲ್ಲ, ಸಂಸತ್ತಿನ ಅವಿಭಾಜ್ಯ ಅಂಗವೂ ಹೌದು. ಅವರು ಸಂಸತ್‌ ಕಲಾಪ ನಡೆಸಲು ಆಹ್ವಾನಿಸಿ ಭಾಷಣ ಮಾಡುತ್ತಾರೆ. ಸಂಸತ್ತಿನ ಕಾಯಿದೆ ಜಾರಿಗೆ ಬರಲು ಅವರು ಒಪ್ಪಿಗೆ ನೀಡಬೇಕು. ಸಂಕ್ಷಿಪ್ತವಾಗಿ ಹೇಳುವುದಾದರೆ, ರಾಷ್ಟ್ರಪತಿ ಇಲ್ಲದೆ ಸಂಸತ್ತು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಇನ್ನು, ಅವರಿಲ್ಲದೇ ನೂತನ ಸಂಸತ್ ಭವನವನ್ನು ಉದ್ಘಾಟಿಸಲು ಪ್ರಧಾನಿ ನಿರ್ಧರಿಸಿದ್ದಾರೆ. ಇಂತಹ ನಡೆಯಿಂದ ಪ್ರಧಾನಿ ರಾಷ್ಟ್ರಪತಿಗಳ ಉನ್ನತ ಹುದ್ದೆಯನ್ನು ಅವಮಾನಿಸಿದ್ದಾರೆ” ಎಂದು ಬಹಿಷ್ಕಾರ ಸಂಬಂಧಿಸಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಭಾರತದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿದಾಗ ವಿಪಕ್ಷದ ಸಂಸದರನ್ನು ಅನರ್ಹಗೊಳಿಸಲಾಗಿದೆ, ಅಮಾನತುಗೊಳಿಸಲಾಗಿದೆ ಮತ್ತು ಸದನದಲ್ಲಿ ಅವರ ಧ್ವನಿಯನ್ನು ಅಡಗಿಸಲಾಗಿದೆ. ಮೂರು ಕೃಷಿ ಕಾನೂನುಗಳು ಸೇರಿದಂತೆ ಅನೇಕ ವಿವಾದಾತ್ಮಕ ಶಾಸನಗಳನ್ನು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ ಮತ್ತು ಸಂಸದೀಯ ಸಮಿತಿಗಳನ್ನು ಪ್ರಾಯೋಗಿಕವಾಗಿ ನಿಷ್ಕ್ರಿಯಗೊಳಿಸಲಾಗಿದೆ,” ಎಂದು ಹೇಳಿಕೆಯಲ್ಲಿ ಪ್ರಸ್ತಾಪಿಸಲಾಗಿದೆ.

“ಶತಮಾನದಲ್ಲಿ ಕಂಡು ಕೇಳರಿಯದ ಸಾಂಕ್ರಾಮಿಕ ಪಿಡುಗಿನ ಸಮಯದಲ್ಲಿ ಹೊಸ ಸಂಸತ್ತಿನ ಕಟ್ಟಡವನ್ನು ಭಾರತದ ಜನರು ಅಥವಾ ಸಂಸದರೊಂದಿಗೆ ಯಾವುದೇ ಸಮಾಲೋಚನೆಯಿಲ್ಲದೆ ಹೆಚ್ಚಿನ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಯಾರಿಗಾಗಿ ಇದನ್ನು ನಿರ್ಮಿಸಲಾಗುತ್ತಿದೆ. ಸಂಸತ್ತಿನಿಂದ ಪ್ರಜಾಪ್ರಭುತ್ವದ ಆತ್ಮವನ್ನು ಹೊರಹಾಕಿದಾಗ, ನಾವು ಹೊಸ ಕಟ್ಟಡದಲ್ಲಿ ಯಾವುದೇ ಮೌಲ್ಯವನ್ನು ಕಾಣುವುದಿಲ್ಲ. ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸುವ ನಮ್ಮ ಸಾಮೂಹಿಕ ನಿರ್ಧಾರವನ್ನು ಪ್ರಕಟಿಸುತ್ತೇವೆ. ಈ ನಿರಂಕುಶ ಪ್ರಧಾನ ಮಂತ್ರಿ ಮತ್ತು ಅವರ ಸರ್ಕಾರದ ವಿರುದ್ಧ ಹೋರಾಟ ನಡೆಸುವುದನ್ನು ನಾವು ಮುಂದುವರೆಸುತ್ತೇವೆ” ಎಂದು ವಿಪಕ್ಷಗಳ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೂರು ವರ್ಷಗಳ ನಂತರ ಮೆಹಬೂಬಾ ಮುಫ್ತಿಗೆ ಪಾಸ್‌ಪೋರ್ಟ್‌ ನೀಡಿಕೆ

ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದ ಮೆಹಬೂಬಾ ಮುಫ್ತಿ ಜಮ್ಮು- ಕಾಶ್ಮೀರ ಹೈಕೋರ್ಟ್‌ನಲ್ಲಿ ಮೆಹಬೂಬಾ...

ರೈತರಿಂದ ಖರೀದಿಸುವ ಹಾಲಿನ ನಿಗದಿ ದರ ಕಡಿತ ಮಾಡಬೇಡಿ; ಸಿಎಂ ಸೂಚನೆ

ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆ ಸಿಎಂ ಸೂಚನೆ ಹಾಲು...

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ನೆರವು ಕಾರ್ಮಿಕರ ನೆರವಿಗೆ...

ಒಡಿಶಾ ರೈಲು ದುರಂತ : ಘಟನಾ ಸ್ಥಳದ ಪಕ್ಕದಲ್ಲಿರುವುದು ಮಸೀದಿಯಲ್ಲ, ಮಂದಿರ

ಒಡಿಶಾದ ಬಾಲಾಸೋರ್‌ ಬಳಿ ನಡೆದ ರೈಲು ದುರಂತದಲ್ಲಿ 288 ಮಂದಿ ಸಾವನ್ನಪ್ಪಿದ್ದು,...