- ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ನೇತೃತ್ವದ ಸಮಾವೇಶದಲ್ಲಿ ಘೋಷಣೆ
- ನಮ್ಮ ಸರ್ಕಾರ ಬಂದರೆ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ: ಎಚ್‌ಡಿಕೆ
ಜೆಡಿಎಸ್ ಸರ್ಕಾರ ರಾಜ್ಯದಲ್ಲಿ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಸಹಾಯ ಧನ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಘೋಷಿಸಿದರು.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರ ನೇತೃತ್ವದಲ್ಲಿ ಶಿನಿಗೇನಹಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, “ರೈತ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಕೊಡುತ್ತಿಲ್ಲ. ಹೀಗಾಗಿ ರೈತ ಮಕ್ಕಳನ್ನು ಮದುವೆಯಾಗುದನ್ನು ಪ್ರೋತ್ಸಾಹಿಸಲು ನಾವು ಬದ್ಧರಾಗಿದ್ದೇವೆ” ಎಂದರು.
“ಹಾಗೆಯೇ ನಾವು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತೇವೆ. ಯರಗೋಳ್ ನೀರಾವರಿ ಯೋಜನೆಗೆ ವಿಷಯುಕ್ತ ಕೆಸಿ ವ್ಯಾಲಿ ನೀರಾವರಿ ಯೋಜನೆ ನೀರನ್ನು ಸೇರಿಸಲು ಹೊರಟಿದ್ದಾರೆ. ನಮ್ಮ ಸರ್ಕಾರ ಬಂದರೆ ಶುದ್ಧೀಕರಿಸಿ ಕು ಡಿಯುವ ನೀರು ಕೊಡುತ್ತೇವೆ” ಎಂದರು.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಇದೇ ವೇಳೆ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, “ಕೆಸಿ ವ್ಯಾಲಿ ಯೋಜನೆ ಹೆಸರಿನಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಜೇಬು ತುಂಬಿಸಿಕೊಂಡಿದ್ದಾರೆ. ಆ ಹಣದಿಂದಲೇ ಅವರು ಚುನಾವಣೆಗೆ ಹೋಗುತ್ತಿದ್ದಾರೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೆಸ್ಸೆಸ್ ಆಸೆ ಮತ್ತು ಬಿಜೆಪಿಯ ಭ್ರಮೆ
ಮೀಸಲಾತಿ ವಿಚಾರದಲ್ಲಿ ಬಿಜೆಪಿ ಟೀಕಿಸಿದ ಕುಮಾರಸ್ವಾಮಿ, “ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಹುಡುಗಾಟ ಮಾಡುತ್ತಿದೆ. ನಾವು ಅಧಿಕಾರಕ್ಕೆ ಬಂದರೆ ಮೀಸಲಾತಿ ಗೊಂದಲ ಸರಿಪಡಿಸುತ್ತೇವೆ. ಮುಸ್ಲಿಮರ ಮೀಸಲಾತಿಯನ್ನೂ ಕೂಡ ಸರಿಪಡಿಸುತ್ತೇವೆ” ಎಂದು ಭರವಸೆ ನೀಡಿದರು.
ಬೈಕ್ಗಳಿಗೆ ಉಚಿತ ಪೆಟ್ರೋಲ್
ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ನೇತೃತ್ವದಲ್ಲಿ ಶಿನಿಗೇನಹಳ್ಳಿಯಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ಆಗಮಿಸುವ ಜನರ ಬೈಕ್ಗಳಿಗೆ ಉಚಿತ ಪೆಟ್ರೋಲ್ ವ್ಯವಕಸ್ಥೆ ಕಲ್ಪಿಸಲಾಗಿತ್ತು. ಶಿನಿಗೇನಹಳ್ಳಿ ಬಳಿ ಇರುವ ರೇಣುಕಾ ಯಲ್ಲಮ್ಮ ನಯಾರ ಪೆಟ್ರೋಲ್ ಬಂಕ್ನಲ್ಲಿ ಪ್ರತಿ ಬೈಕ್ಗೆ 100 ರೂ. ಪೆಟ್ರೋಲ್ ಉಚಿತವಾಗಿ ಹಾಕುವ ಮೂಲಕ ಸಮಾವೇಶಕ್ಕೆ ಜನರನ್ನು ಸೆಳೆಯುವ ಪ್ರಯತ್ನ ಮಾಡಲಾಯಿತು.