2002ರ ಗುಜರಾತ್ ಗಲಭೆ | ಬೆಸ್ಟ್ ಬೇಕರಿ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಖುಲಾಸೆ

Date:

2002ರ ಗುಜರಾತ್ ಕೋಮುಗಲಭೆಗೆ ಸಂಬಂಧಿಸಿದ ‘ಬೆಸ್ಟ್ ಬೇಕರಿ ಪ್ರಕರಣ’ದಲ್ಲಿ ಬಂಧಿತರಾಗಿದ್ದ ಹರ್ಷದ್ ಸೋಲಂಕಿ ಮತ್ತು ಮಫತ್ ಗೋಹಿಲ್ ಎಂಬಿಬ್ಬರನ್ನು ಮುಂಬೈನ ವಿಶೇಷ ನ್ಯಾಯಾಲಯ ಮಂಗಳವಾರ ಖುಲಾಸೆಗೊಳಿಸಿದೆ.

- Advertisement -

ವಿಶೇಷ ಕೇಂದ್ರ ತನಿಖಾ ದಳದ (ಸಿಬಿಐ) ನ್ಯಾಯಾಧೀಶ ಎಂ.ಜಿ ದೇಶಪಾಂಡೆ ಅವರು ಇಬ್ಬರು ಆರೋಪಿಗಳು ತಪ್ಪಿತಸ್ಥರಲ್ಲ ಎಂದು ಘೋಷಿಸಿದ್ದಾರೆ. ಅವರಿಬ್ಬರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ವಡೋದರಾದಲ್ಲಿ ಬೇಕರಿಯೊಂದನ್ನು ಗುಂಪೊಂದು ಸುಟ್ಟುಹಾಕಿತ್ತು. ಬೇಕರಿ ಮತ್ತು ಅದರ ಬಳಿಯಿದ್ದ 14 ಮಂದಿ ಸಾವವನ್ನಪ್ಪಿದ್ದರು. ಘಟನೆ ಸಂಬಂಧ 21 ಮಂದಿ ವಿರುದ್ಧ ಬೇಕರಿ ಮಾಲೀಕನ ಪುತ್ರಿ ಜಹೀರಾ ಶೇಖ್ ದೂರು ದಾಖಲಿಸಿದ್ದಾರೆ.

ಸ್ಥಳೀಯ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದದ್ದರು. ಪ್ರಕರಣವನ್ನು ವಡೋದರದ ತ್ವರಿತ ನ್ಯಾಯಾಲಯವು ವಿಚಾರಣೆ ನಡೆಸಿತ್ತು. ಜೂನ್ 2003ರಲ್ಲಿ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದ 19 ಆರೋಪಿಗಳನ್ನು ಖುಲಾಸೆಗೊಳಿಸಲಾಗಿತ್ತು. ಇಬ್ಬರು ಆರೋಪಿಗಳಾದ ಸೋಲಂಕಿ ಮತ್ತು ಗೋಹಿಲ್ ಅವರನ್ನು ಬಿಡುಗಡೆ ಮಾಡಲಾಗಿತ್ತು.

ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ಜಹೀರಾ ಶೇಖ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. 2004ರಲ್ಲಿ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌, ಪ್ರಕರಣವದ ಮರು ವಿಚಾರನೆಗೆ ನಿರ್ದೇಶನ ನೀಡಿತ್ತು. ಅಲ್ಲದೆ, ನ್ಯಾಯವನ್ನು ಖಾತ್ರಿಪಡಿಸುವ ಉದ್ದೇಶದಿಂದ ಪ್ರಕರಣದ ವಿಚಾರಣೆಯನ್ನು ಮುಂಬೈಗೆ ವರ್ಗಾಯಿಸಿತ್ತು.

ಇತರ ಆರೋಪಿಗಳ ವಿಚಾರಣೆ ನಡೆಯುತ್ತಿರುವಾಗಲೇ, ಅಜ್ಮೀರ್ ಸ್ಫೋಟ ಪ್ರಕರಣದಲ್ಲಿ ಸೋಲಂಕಿ ಮತ್ತು ಗೋಹಿಲ್ ಅವರನ್ನು ಬಂಧಿಸಲಾಗಿತ್ತು. ಆ ಇಬ್ಬರನ್ನೂ ಬೆಸ್ಟ್‌ ಬೇಕರಿ ಪ್ರಕರಣದ ಅಡಿಯಲ್ಲಿ 2013ರ ಡಿಸೆಂಬರ್ 13ರಂದು ಮುಂಬೈ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದರು. ಕಳೆದ 10 ವರ್ಷಗಳಿಂದ ಇಬ್ಬರೂ ಮುಂಬೈ ಜೈಲಿನಲ್ಲಿದ್ದರು.

ಈ ಸುದ್ದಿ ಓದಿದ್ದೀರಾ?: ನನ್ನಂತಹ ಬಿಜೆಪಿ ಮುಖಂಡನಿಗೇ ರಕ್ಷಣೆ ಇಲ್ಲ, ಮತ್ತಾರು ಸುರಕ್ಷಿತರು: ಬಿಜೆಪಿಯ ಮುಸ್ಲಿಂ ನಾಯಕ

ಈ ಮೊದಲು ಖುಲಾಸೆಗೊಂಡಿದ್ದ 19 ಆರೋಪಿಗಳ ವಿರುದ್ಧ ಮುಂಬೈನಲ್ಲಿ ನಡೆದ ವಿಚಾರಣೆಯಲ್ಲಿ 9 ಆರೋಪಿಗಳಿಗೆ ಶಿಕ್ಷೆಯಾಗಿದೆ. ಆದರೆ, ಸೋಲಂಕಿ ಮತ್ತು ಗೋಹಿಲ್ ಅವರ ಅಪರಾಧವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಕೇವಲ 10 ಸಾಕ್ಷಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಅದರಲ್ಲೂ, ಪ್ರಕರಣದ ತನಿಖೆ ನಡೆಸುತ್ತಿದ್ದ ಕೆಲ ಅಧಿಕಾರಿಗಳೂ ಸಾವನ್ನಪ್ಪಿದ್ದರು.

ಸಾಕ್ಷಿ ನುಡಿದ 10 ಮಂದಿಯಲ್ಲಿ ಹೆಚ್ಚಿನ ಪ್ರತ್ಯಕ್ಷದರ್ಶಿಗಳು ಸೋಲಂಕಿಯನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಒಬ್ಬರು ಮಾತ್ರ ಗೋಹಿಲ್ ಅನ್ನು ಗುರುತಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ, ಈ ಇಬ್ಬರನ್ನೂ ಅಪರಾಧಿಗಳು ಎಂದು ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ಗೆ ಸಾಧ್ಯವಾಗಲಿಲ್ಲ. ಪರಿಣಾಮ, ಸಾಕ್ಷಾಧಾರಗಳ ಕೊರತೆಯಿಂದ ಈ ಇಬ್ಬರನ್ನೂ ಪ್ರಕರಣದಿಂದ ಖುಲಾಸೆಗೊಳಿಸಿ ಕೋರ್ಟ್‌ ತೀರ್ಪು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...