ನೋಂದಣಿ ಇಲಾಖೆಗೆ 2,400 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ: ಸಿಎಂ ಸಿದ್ದರಾಮಯ್ಯ

Date:

ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು 2,400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ನೋಂದಣಿ ಮತ್ತು ಮುದ್ರಾಂಕ ಇಲಾಖೆ 2024-25ರ ಸಾಲಿನ ರಾಜಸ್ವ ಸಂಗ್ರಹಣೆ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024-25ರ ಸಾಲಿನಲ್ಲಿ 26000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹೊಂದಿದ್ದು, ಅಕ್ಟೋಬರ್ ತಿಂಗಳ ಅಂತ್ಯದವರೆಗೆ 13,724 ಕೋಟಿ ರೂ. ಸಂಗ್ರಹ ಆಗಿದೆ. ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು 2400 ಕೋಟಿ ರೂ. ರಾಜಸ್ವ ಸಂಗ್ರಹ ಗುರಿಯನ್ನು ಸಾಧಿಸಬೇಕು” ಎಂದರು.

“ನೋಂದಣಿಯೇತರ ದಾಸ್ತಾವೇಜುಗಳಿಗೆ ಸರಿಯಾದ ಮುದ್ರಾಂಕ ಶುಲ್ಕವನ್ನು ಪಾವತಿಸಿಕೊಂಡು ಹೆಚ್ಚಿನ ರಾಜಸ್ವ ಸಂಗ್ರಹಿಸಬೇಕು ಎನ್ನುವ ಸೂಚನೆ” ನೀಡಿದರು.

ಸಾರಿಗೆ ಇಲಾಖೆ ರಾಜಸ್ವ ಪರಿಶೀಲನಾ ಸಭೆ

“2024-25ನೇ ಸಾಲಿನಲ್ಲಿ ವಾರ್ಷಿಕ ರಾಜಸ್ವ ಸಂಗ್ರಹ ಗುರಿ 13000 ಕೋಟಿ ರೂ. ಆಗಿದ್ದು, ಸೆಪ್ಟೆಂಬರ್ ವರೆಗೆ 5569 ಕೋಟಿ ರೂ. ಸಂಗ್ರಹ ಮಾಡಲಾಗಿದೆ ಎಂದು ಹೇಳಿದರು.

“ಹಿಂದಿನ ಸಾಲಿಗಿಂತ ಈ ಅವಧಿಯಲ್ಲಿ 308.98 ಕೋಟಿ ರೂ. ಹೆಚ್ಚುವರಿ ರಾಜಸ್ವ ಸಂಗ್ರಹ ಆಗಿದೆ. ಮಾಸಿಕ ಗುರಿ ನಿಗದಿಪಡಿಸಿಕೊಂಡು ಮಾರ್ಚ್ ಅಂತ್ಯದ ಒಳಗಾಗಿ ನಿಗದಿತ ಗುರಿ ಸಾಧಿಸಬೇಕು” ಎಂದು ಸೂಚಿಸಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಅತೀಕ್, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...