ಕ್ಯಾನ್ಸರ್, ಕಿಡ್ನಿ, ಹೃದಯ ಸೇರಿದಂತೆ ಆರೋಗ್ಯ ಸಮಸ್ಯೆಯಿಂದ ವೈದ್ಯಕೀಯ ವೆಚ್ಚ ಭರಿಸುವ ಮನವಿಗಳು ಹೆಚ್ಚು ಸ್ವೀಕೃತವಾಗಿವೆ. ನಾನು ಮುಖ್ಯಮಂತ್ರಿಯಾದ ನಂತರ ಜನರ ಆರೋಗ್ಯಸಮಸ್ಯೆಗಳ ಪರಿಹಾರಕ್ಕಾಗಿ ಸುಮಾರು 25 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ‘ಜನತಾ ಸ್ಪಂದನ’ ಕಾರ್ಯಕ್ರಮ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
“ಖಾಸಗಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಲಭಿಸುತ್ತದೆ ಎಂಬ ನಂಬಿಕೆಯಿಂದ ಜನರು ಸರ್ಕಾರಿ ಆಸ್ಪತ್ರೆ ಬಿಟ್ಟು, ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುವ ಕಾರಣ, ಅವರ ವೈದ್ಯಕೀಯ ವೆಚ್ಚಗಳೂ ಹೆಚ್ಚಾಗುತ್ತವೆ. ಆ ವೆಚ್ಚದಲ್ಲಿ ಸಣ್ಣಪ್ರಮಾಣವನ್ನು ಸರ್ಕಾರ ಈ ರೀತಿ ಭರಿಸಲು ಪ್ರಯತ್ನಿಸುತ್ತದೆ” ಎಂದರು.
ಅಂಜಲಿ ಕುಂಬಾರ ಎಂಬುವರ ಆರು ತಿಂಗಳ ಮಗು ಮೇಘಾಶ್ರೀ ಎರಡು ಕಾಲುಗಳ ಅಂಗವೈಕಲ್ಯ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಹೃದಯದಲ್ಲಿನ ರಂಧ್ರದ ಚಿಕಿತ್ಸೆಗೆ ನೆರವು ನೀಡುವಂತೆ ಜನತಾ ದರ್ಶನದಲ್ಲಿ ಮನವಿ ಸಲ್ಲಿಸಿದರು.
ಮಗುವಿನ ಪೋಷಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ @siddaramaiah ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ… pic.twitter.com/pIgBFtTNbs
— CM of Karnataka (@CMofKarnataka) November 27, 2023
‘ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದು, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ತಿಳಿಸಿದರು.
‘ಜನರ ಸಮಸ್ಯೆಗೆ ಪರಿಹಾರ ಒದಗಿಸುವ ಜನಸ್ಪಂದನೆ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರು. ಸುಮಾರು 3500 ಮನವಿಗಳು ಸ್ವೀಕೃತವಾಗಿದೆ. ನಾನು ಬೆಳಗ್ಗೆಯಿಂದಲೇ ಜನರ ಬಳಿಗೆ ತೆರಳಿ ಅವರ ಕುಂದುಕೊರತೆಗಳನ್ನು ಖುದ್ದು ಆಲಿಸಿದ್ದೇನೆ. ಸ್ವೀಕೃತವಾಗಿರುವ ಎಲ್ಲ ಅರ್ಜಿಗಳ ಬಗ್ಗೆ ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಜನತಾ ದರ್ಶನದ ವೇಳೆ ಸಿಎಂ ಸಿದ್ದರಾಮಯ್ಯನವರಿಗೆ ಹಿರಿಯರೋರ್ವರು ಆಶೀರ್ವಾದ ಮಾಡಿದ ಕ್ಷಣ@siddaramaiah @CMofKarnataka @INCKarnataka @BJP4Karnataka @JanataDal_S @hd_kumaraswamy @DKShivakumar pic.twitter.com/Fn2vYTZrAV
— eedina.com (@eedinanews) November 27, 2023
ಸಚಿವರು ಜನತಾ ದರ್ಶನ ಸಮರ್ಪಕವಾಗಿ ಮಾಡುತ್ತಿಲ್ಲವೇಕೆ? ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಎಲ್ಲ ಸಚಿವರೂ ಜನತಾ ದರ್ಶನ ಮಾಡಿದ್ದು, ಕಾರ್ಯಕ್ರಮ ನಡೆಸಿದ ಬಗ್ಗೆ ಕೆಲವರು ವರದಿ ನೀಡಿಲ್ಲ. ಅದರ ವರದಿ ನೀಡುವಂತೆ ತಿಳಿಸಿದ್ದೇನೆ ಎಂದರು.
ಮುಖ್ಯಮಂತ್ರಿ @siddaramaiah ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ, ಜನರ ಅಹವಾಲು ಆಲಿಸಿ ನಂತರ ಮಾಧ್ಯಮದವರ ಜೊತೆ ಮಾತನಾಡಿದರು.
ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ… pic.twitter.com/XaEbppZ4i1
— CM of Karnataka (@CMofKarnataka) November 27, 2023
ಮಕ್ಕಳ ಪೌಷ್ಟಿಕಾಂಶ ಸಮಸ್ಯೆಗಳ ಬಗ್ಗೆ ಇಂದು ಅಹವಾಲುಗಳ ಬಂದಿರುವ ಬಗ್ಗೆ ಉತ್ತರಿಸಿ, “ಮಕ್ಕಳ ಪೌಷ್ಟಿಕಾಂಶ ವೃದ್ಧಿಸುವ ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ ₹185 ಕೋಟಿ ರೂಗಳನ್ನು ನಿಗದಿಪಡಿಸಲಾಗಿದೆ. ಅನೀಮಿಯಾ ಇರುವ ಮಕ್ಕಳಿಗೆ ಔಷಧಿ, ಶಾಲಾಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ , ಪ್ರತಿದಿನವು ಹಾಲು, ಬಿಸಿಯೂಟಗಳನ್ನು ನೀಡಲಾಗುತ್ತಿದೆ” ಎಂದು ತಿಳಿಸಿದರು.
ಹೆಣ್ಣು ಭ್ರೂಣಹತ್ಯೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ‘ಭ್ರೂಣಹತ್ಯೆ ಬಗ್ಗೆ ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಿ, ಈ ದುಷ್ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಯಾದಗಿರಿಯಲ್ಲಿ ಪಡಿತರ ಅಕ್ಕಿ ಕಳವು ಹಗರಣ ನಡೆಯುತ್ತಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ‘ಜಿಲ್ಲೆಯಲ್ಲಿ ಅಕ್ಕಿ ಕಳವು ನಡೆದಿದ್ದರೆ, ಸೂಕ್ತ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಹೆಚ್ಚುವರಿ ಬಸ್‌ಗಳಿಗೆ ವ್ಯವಸ್ಥೆ
ಶಕ್ತಿ ಯೋಜನೆ ಯಶಸ್ವಿಯಾದರೂ, ಬಸ್ ಕೊರತೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ 971 ಬಸ್‌ಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಅಗತ್ಯವಿರುವ ಕಡೆ ಹೆಚ್ಚು ಬಸ್‌ಗಳನ್ನು ಹಾಕಲು ತಿಳಿಸಲಾಗಿದೆ ಎಂದರು.