ನಿಮ್ಮ ಪಕ್ಷದಲ್ಲಿ 261 ರೌಡಿಗಳಿದ್ದಾರೆ; ಪ್ರಧಾನಿ ಮೋದಿಗೆ ಎಂಕೆ ಸ್ಟಾಲಿನ್ ತಿರುಗೇಟು

Date:

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ “ನಿಮ್ಮ ಪಕ್ಷದಲ್ಲಿ 261 ರೌಡಿಗಳಿದ್ದಾರೆ” ಎಂದು ಹೇಳಿದರು.

ಸೇಲಂನಲ್ಲಿ ಸೇಲಂ ಡಿಎಂಕೆ ಅಭ್ಯರ್ಥಿ ಟಿಎಂ ಸೆಲ್ವಗಣಪತಿ ಮತ್ತು ಕಲ್ಲಕುರಿಚಿ ಡಿಎಂಕೆ ಅಭ್ಯರ್ಥಿ ಡಿ ಮಲೈಯರಸನ್ ಪರ ಪ್ರಚಾರ ನಡೆಸುತ್ತಿದ್ದ ಸಿಎಂ ಸ್ಟಾಲಿನ್ ಮೋದಿ ಹೇಳಿಕೆಗೆ ತಿರುಗೇಟು ನೀಡಿದರು.

ತಮಿಳುನಾಡಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರಧಾನಿ ಮೋದಿ ಈ ಹಿಂದೆ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸ್ಟಾಲಿನ್ “ಬಿಜೆಪಿಯ 261 ನಾಯಕರುಗಳು ಹಿಸ್ಟರಿ ಶೀಟರ್‌ಗಳು ಮತ್ತು ಕ್ರಿಮಿನಲ್ ದಾಖಲೆಗಳನ್ನು ಹೊಂದಿರುವವರು ಆಗಿದ್ದಾರೆ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| ರಾಹುಲ್ ಗಾಂಧಿ ವಿರುದ್ಧದ ಬಿಜೆಪಿ ಅಭ್ಯರ್ಥಿ ಮೇಲಿದೆ 242 ಪ್ರಕರಣಗಳು!

“ರೌಡಿಗಳು ತಮ್ಮ ಪಕ್ಷದೊಳಗೆ ಇರುವಾಗ ನಮ್ಮ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಮಾತನಾಡುವ ಹಕ್ಕು ಪ್ರಧಾನಿ ಮೋದಿಯವರಿಗೆ ಇದೆಯೇ” ಎಂದು ಪ್ರಶ್ನಿಸಿದ ಎಂಕೆ ಸ್ಟಾಲಿನ್ ಅವರು, “ಎಲ್ಲಾ ರೌಡಿಗಳು ನಿಮ್ಮ (ಪಿಎಂ ಮೋದಿ) ಪಕ್ಷದಲ್ಲಿದ್ದಾರೆ. ಹಾಗಿದ್ದಾಗ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಮಾತನಾಡಲು ನಿಮಗೆ ಯಾವ ಹಕ್ಕಿದೆ? ಎಂದು ಕೇಳಿದರು. ಜೊತೆಗೆ ಬಿಜೆಪಿಯಲ್ಲಿರುವ ಹಿಸ್ಟರ್ ಶೀಟರ್‌ಗಳ ಹೆಸರು ಬರೆಯುತ್ತಾ ಹೋದರೆ 32 ಪುಟಗಳ ಪಟ್ಟಿ ಆಗುತ್ತದೆ ಎಂದು ಹೇಳಿದರು.

ಇನ್ನು “ಬಿಜೆಪಿಯಲ್ಲಿರುವ ಹಿಸ್ಟರ್ ಶೀಟ್‌ಗಳ ಪಟ್ಟಿಯಿದೆ. ತಮಿಳುನಾಡಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ನಿಮ್ಮ ಹೇಳಿಕೆಗೆ ಸರಿಯಾದ ಸಾಕ್ಷ್ಯ ನೀಡಿ” ಎಂದ ಎಂಕೆ ಸ್ಟಾಲಿನ್ ಅವರು “ಬಿಜೆಪಿ ನಾಯಕರ ವಿರುದ್ಧ ಒಟ್ಟು 1,977 ಪ್ರಕರಣಗಳಿವೆ” ಎಂದು ಬಹಿರಂಗಪಡಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

ಕೋಟಕ್ ಮಹೀಂದ್ರ ಬ್ಯಾಂಕ್‌ನ ಹೊಸ ಗ್ರಾಹಕರ ಸೇರ್ಪಡೆ, ಕ್ರೆಡಿಟ್ ಕಾರ್ಡ್‌ಗೆ ನಿಷೇಧವೇರಿದ ಆರ್‌ಬಿಐ

ಕೋಟಕ್‌ ಮಹೀಂದ್ರ ಬ್ಯಾಂಕ್‌ ನ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ಗಳ ಮೂಲಕ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...