ಸ್ವಚ್ಚ ಭಾರತ ಮಿಷನ್ ಯೋಜನೆ ಅನುಷ್ಠಾನಕ್ಕೆ 2,912 ಕೋಟಿ ರೂ. ಅನುದಾನ: ಸಚಿವ ಬೈರತಿ ಸುರೇಶ್

Date:

ಸ್ವಚ್ಛ ಭಾರತ ಮಿಷನ್-1.0 ಯೋಜನೆಗೆ 854 ಕೋಟಿ ರೂ. ಹಾಗೂ ಸ್ವಚ್ಛ ಭಾರತ ಮಿಷನ್-2.0 ಯೋಜನೆಗೆ 2058 ಕೋಟಿ ರೂ. ಸೇರಿ ಒಟ್ಟು 2,912 ಕೋಟಿ ರೂ. ಅನುದಾನವನ್ನು ಯೋಜನೆ ಅನುಷ್ಠಾನಕ್ಕೆ ಮೀಸಲು ಇರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.

ಶುಕ್ರವಾರ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಅವರು ಉತ್ತರಿಸಿ, ”
ಎಲ್ಲ ಸ್ಥಳೀಯ ನಗರಾಭಿವೃದ್ಧಿ ಸಂಸ್ಥೆಗಳಲ್ಲಿ ಸ್ವಚ್ಛಭಾರತ್ ಮಿಷನ್ ಅನುಷ್ಠಾನ ಮಾಡಲು ಪ್ರತ್ಯೇಕ ಐಎಎಸ್ ಅಧಿಕಾರಿ ನೇಮಿಸಲಾಗಿದೆ” ಎಂದು ತಿಳಿಸಿದರು.

“ಎಲ್ಲ ಮಹಾನಗರ ಪಾಲಿಕೆಗಳಲ್ಲಿ ಘನತ್ಯಾಜ್ಯ ವಸ್ತುಗಳ ಸಂಗ್ರಹಣೆ, ಸಾಗಣಿಕೆ, ಸಂಸ್ಕರಣೆ ಮತ್ತು ವಿಲೇವಾರಿಗೆ ಅಗತ್ಯ ಇರುವ ಯಂತ್ರೊಪಕರಣಗಳನ್ನು ಮತ್ತು ಸಿವಿಲ್ ಕಾಮಗಾರಿಗೆ ಕೈಗೊಳ್ಳಲು ವಿಸ್ತೃತ ಯೋಜನೆಗೆ ಅನುಮತಿ ನೀಡಿದ್ದು, 370 ಕೊಟಿ ರೂ. ಬಿಡುಗಡೆ ಮಾಡಲಾಗಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹುಬ್ಬಳ್ಳಿ ಧಾರವಾಡದಲ್ಲಿ 450 ಟಿ.ಪಿ.ಡಿ ಹಾಗೂ ತುಮಕೂರು ನಗರದಲ್ಲಿ 140 ಟಿ.ಪಿ.ಡಿ ಸಾಮಾರ್ಥ್ಯದ ತ್ಯಾಜ್ಯ ಸಂಸ್ಕರಣೆ ಸೌಲಭ್ಯ ಕಲ್ಪಿಸಲಾಗಿದೆ. ಈಗಾಗಲೇ ಬಹಳ ವರ್ಷಗಳಿಂದ ಶೇಖರಣೆಯಾಗಿರುವ ಹಳೆಯ ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸಲು ಬಯೋ ಮೈನಿಂಗ್ ಹಾಗೂ ಬಯೋ ರೆಮಡೇಷನ್ ಮಾಡಲು ಕ್ರಮ ವಹಿಸಲಾಗಿದೆ” ಎಂದರು.

“ಶಾಸಕ ಜ್ಯೋತಿ ಗಣೇಶ್ ಜೆ.ಬಿ ಹಾಗೂ ಇತರೆ ಶಾಸಕರು ಬಯೋ ಮೈನಿಂಗ್ ಹಾಗೂ ಬಯೋ ರೆಮಡೇಷನ್ ಕೈಗೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಪ್ರತಿ ಟನ್‌ಗೆ ನೀಡಿರುವ ದರವನೇ ರಾಜ್ಯದ ಇತರೆಡೆಯೂ ನೀಡಬೇಕು” ಎಂದು ಸಚಿವರಲ್ಲಿ ಕೋರಿದರು. ಇದಕ್ಕೆ ಸಕಾರತ್ಮವಾಗಿ ಸ್ಪಂದಿಸಿದ ಸಚಿವರು, ದರ ಪರಿಷ್ಕರಣೆ ಮಾಡುವುದಾಗಿ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಚಿಕ್ಕಮಗಳೂರು | ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ; ಜೆ.ಪಿ ಹೆಗ್ಡೆಗೆ ಜನ ಬೆಂಬಲ

ಚಿಕ್ಕಮಗಳೂರು ಹಾಗೂ ಉಡುಪಿ ಲೋಕಾಸಭಾ ಕ್ಷೇತ್ರವಾಗಿದೆ. ಎಂಟು ವಿಧಾನಸಭಾ ಕ್ಷೇತ್ರ ಒಳಗೊಂಡ...

ನೇಹಾ ಕೊಲೆ ಪ್ರಕರಣ | ಸಿಐಡಿ ತನಿಖೆ ಆರಂಭ; ಆರೋಪಿ ಫಯಾಜ್‌ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ...

ಅನ್ಯ ರಾಜ್ಯಗಳ 9 ನಾಯಕರನ್ನು ಲೋಕಸಭೆಗೆ ಚುನಾಯಿಸಿದ ಕರ್ನಾಟಕದ ಮತದಾರರು

ರಾಜ್ಯಸಭೆಗೆ ಯಾವುದೇ ರಾಜ್ಯದ ನಾಯಕರು, ಉದ್ಯಮಿಗಳು ಸ್ಥಳೀಯ ರಾಜಕೀಯ ಪಕ್ಷದ ಬೆಂಬಲದಿಂದ...