ಸಚಿವ ಸಂಪುಟ‌ ಪುನಾರಚನೆಗೆ 31 ಶಾಸಕರ ಒತ್ತಾಯ

Date:

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಚರ್ಚೆಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಮಾಡಿ ಎಂದು ಆಗ್ರಹಿಸಿ 31 ಶಾಸಕರು ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದಾರೆ. ಮೊದಲ ಬಾರಿ ಆಯ್ಕೆಯಾಗಿರುವ ಶಾಸಕರು ಈ ಮನವಿ ಪತ್ರವನ್ನು ಬರೆದಿದ್ದು, ಆದಷ್ಟು ಬೇಗ ಸಂಪುಟ ಪುನಾರಚನೆ ಮಾಡಿ ಎಂದು ಆಗ್ರಹಿಸಿದ್ದಾರೆ.

- Advertisement -

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಈ ಪತ್ರವನ್ನು ಬರೆಯಲಾಗಿದೆ. ಪತ್ರದಲ್ಲಿ ದಿನಾಂಕ ಉಲ್ಲೇಖ ಮಾಡಿಲ್ಲ. ಆದರೆ 31 ಶಾಸಕರ ಸಹಿ ಇದೆ. ಈ ಪತ್ರ ಇದೀಗ ವೈರಲ್ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಾಂಗ್ರೆಸ್ ನಲ್ಲಿ 31 ಶಾಸಕರು‌ ಹೊಸದಾಗಿ ಗೆದ್ದಿದ್ದೇವೆ. ಬೇರೆ ರಾಜ್ಯಗಳಲ್ಲಿ ಮೊದಲ ಬಾರಿಗೆ ಗೆದ್ದವರು ಸಿಎಂ ಆಗಿದ್ದಾರೆ. ಮೊದಲ ಬಾರಿ ಗೆದ್ದ ಶಾಸಕರಿಗೂ ಸಚಿವ ಸ್ಥಾನ ನೀಡಿ ಅವಕಾಶ ಕೊಡಬೇಕು ಎಂದು ಮನವಿ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಶೋಯೆಬ್ ಖಾನ್ | ಬಿಹಾರದ ಕುಗ್ರಾಮದಿಂದ ಯುಎಇ ವಿಶ್ವಕಪ್ ತಂಡದವರೆಗೆ ರೋಚಕ ಪಯಣ

ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ ಆದವರಿಗೆ ಸಂಪುಟದಲ್ಲಿ ಅವಕಾಶ ನೀಡುವುದು ಅಗತ್ಯವಾಗಿದೆ. ಇದರಿಂದ ಯುವ ಮುಖಗಳಿಗೆ ಅವಕಾಶ ಸಿಕ್ಕಂತಾಗುತ್ತದೆ. ಹೀಗಾಗಿ ಈ ಬಾರಿ ಸಂಪುಟ ಪುನಾರಚನೆ ಆದಲ್ಲಿ ಕನಿಷ್ಠ ಪಕ್ಷ ಐದು ಮಂದಿಗೆ ಅವಕಾಶ ನೀಡಬೇಕು. ನಾವು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಕ್ಕೆ ಬದ್ಧರಾಗಿದ್ದೇವೆ. 2028 ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತಕ್ಕೆ ಬರಬೇಕಾಗಿದೆ. ಹಾಗಾಗಿ ಸಂಪುಟದಲ್ಲಿ ಯುವ ಮುಖಗಳಿಗೆ ಅವಕಾಶ ನೀಡಬೇಕು ಎಂದು ಉಲ್ಲೇಖ ಮಾಡಲಾಗಿದೆ.

ನಾಯಕತ್ವ ಬದಲಾವಣೆ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಕೆ ಎನ್ ರಾಜಣ್ಣ ದೆಹಲಿಗೆ ತೆರಳಿದ್ದರು. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಈ ನಡುವೆ ಶಾಸಕರು ಹೈಕಮಾಂಡ್ ನಾಯಕರಿಗೆ ಪತ್ರಬರೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...