ಹೊಸ ಐಷಾರಾಮಿ ಕಾರು ಪಡೆಯಲಿರುವ 33 ಸಚಿವರು: ₹9.90 ಕೋಟಿ ಹಣ ಬಿಡುಗಡೆ

Date:

  • ₹30 ಲಕ್ಷದ 33 ಕಾರು ಖರೀದಿಗೆ ಹಣ ಮಂಜೂರು ಮಾಡಿದ ರಾಜ್ಯ ಸರ್ಕಾರ
  • ಇನ್ನೋವಾ ಹೈಬ್ರಿಡ್ ಹೈಕ್ರಾಸ್​ ಮಾಡೆಲ್​ನ ಕಾರು ಖರೀದಿಗೆ ಹಣ

ಸಿದ್ದರಾಮಯ್ಯ ಸರ್ಕಾರವು ಸಂಪುಟದ 33 ಸಚಿವರಿಗಾಗಿ ಹೊಸ ಕಾರು ಖರೀದಿಸಲು ಆದೇಶ ನೀಡಿದ್ದು, ಪ್ರತಿಯೊಬ್ಬ ಸಚಿವರಿಗೂ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ ಹೈಬ್ರಿಡ್ ಕಾರು ಶೀಘ್ರದಲ್ಲೇ ಸಿಗಲಿದೆ.

ಹೊಸ ಕಾರು ಖರೀದಿಗಾಗಿ ಒಟ್ಟು ರೂ. 9.90 ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಹೊಸ ಕಾರುಗಳನ್ನು ಖರೀದಿಸಲು ಕರ್ನಾಟಕ ಸರ್ಕಾರವು 9.9 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಎಲ್ಲ 33 ಸಚಿವರು ಅತ್ಯಾಧುನಿಕ ಕಾರು ಪಡೆಯಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇತ್ತೀಚೆಗೆ ಬಿಡುಗಡೆಯಾದ ಟೊಯೋಟಾ ಕಂಪನಿಯ ಇನ್ನೋವಾ ಹೈಬ್ರಿಡ್ ಹೈಕ್ರಾಸ್​ ಮಾಡೆಲ್​ನ 33 ಕಾರುಗಳನ್ನು ಖರೀದಿಸಲು ಸರ್ಕಾರ ಮುಂದಾಗಿದೆ.

ಪ್ರತಿ ಸಚಿವರಿಗೆ ಒಂದರಂತೆ ಕಾರು ಖರೀದಿಸಲಾಗುತ್ತಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಬಿಡುಗಡೆ ಮಾಡಿರುವ ಆದೇಶದ ಪ್ರಕಾರ, ಪ್ರತಿ ಕಾರಿಗೆ ಸುಮಾರು 30 ಲಕ್ಷ ರೂಪಾಯಿ (ಜಿಎಸ್‌ಟಿ ಸೇರಿದಂತೆ ಎಕ್ಸ್ ಶೋರೂಂ ದರ) ವೆಚ್ಚವಾಗಲಿದೆ ಎಂದು ವರದಿಯಾಗಿದೆ.

ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿನ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಯ ಸೆಕ್ಷನ್ 4 (ಜಿ) ಅಡಿಯಲ್ಲಿ ಸರ್ಕಾರವು ನೇರವಾಗಿ ಟೊಯೋಟಾ ಕಿರ್ಲೋಸ್ಕರ್ ಬೆಂಗಳೂರು ಘಟಕದಿಂದ ಕಾರುಗಳನ್ನು ಖರೀದಿಸಲು ಮುಂದಾಗಿದ್ದು, ಈ ಕಾರುಗಳು ಆ.29 ರಂದು ಬಿಡುಗಡೆಯಾದ ವಿಶ್ವದ ಮೊದಲ ಸಂಪೂರ್ಣ ಎಥೆನಾಲ್ ಚಾಲಿತ ಫ್ಲೆಕ್ಸ್ ಇಂಧನ ಎಂಜಿನ್ ಹೊಂದಿವೆ.

ಈ ಕಾರು ಮಾರುಕಟ್ಟೆಗೆ ಬರುವಾಗ ಎಂಟು ವಿವಿಧ ರೀತಿಯ ಬೆಲೆಯಲ್ಲಿ ಬಿಡುಗಡೆಯಾಗಿತ್ತು. 18 ಲಕ್ಷದಿಂದ ಕಾರಿನ ಬೆಲೆ ಆರಂಭಗೊಳ್ಳುತ್ತದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೇಹಾ ಕೊಲೆ ಪ್ರಕರಣ | ಸಿಐಡಿಗೆ ನೀಡಿ, ವಿಶೇಷ ನ್ಯಾಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ...

ಮುಸ್ಲಿಂ ಬಾಂಧವರು ದೇಶ ಬಿಟ್ಟು ಓಡಿ ಹೋಗಬೇಕು ಹಾಗೇ ಬಿಜೆಪಿಯವರು ಚಿತ್ರಹಿಂಸೆ ಕೊಡುತ್ತಿದ್ದಾರೆ: ಡಿ ಕೆ ಶಿವಕುಮಾರ್‌

ಬಿಜೆಪಿಯವರು ಮುಸ್ಲಿಂ ಬಾಂಧವರಿಗೆ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಾರೆ. ದೇಶದಿಂದ ಓಡಿ ಹೋಗಬೇಕು...

ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್‌ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ...

ಚಿಕ್ಕಮಗಳೂರು | ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ

ಮಾಜಿ ಸಚಿವ ಮಾಧುಸ್ವಾಮಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು...