ಸಂಸತ್ ಭದ್ರತಾ ಲೋಪ ಪ್ರಕರಣದ ಬಗ್ಗೆ ಪ್ರಧಾನಿ ಹಾಗೂ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಲೋಕಸಭೆಯಿಂದ ಕಾಂಗ್ರೆಸ್ ಸೇರಿ ವಿವಿಧ ಪ್ರತಿಪಕ್ಷಗಳ 47 ಸಂಸದರನ್ನು ಅಮಾನತುಗೊಳಿಸಿರುವ ಬೆನ್ನಲ್ಲೇ, ರಾಜ್ಯಸಭೆಯಿಂದಲೂ 33 ಸಂಸದರನ್ನು ಅಮಾನತುಗೊಳಿಸಲಾಗಿದೆ.
#WATCH | Several Rajya Sabha MPs, including Congress’ Jairam Ramesh, Randeep Surjewala and KC Venugopal, suspended for the remainder of the Winter Session of the Parliament. pic.twitter.com/cJi3ZkscuE
— ANI (@ANI) December 18, 2023
ಕಾಂಗ್ರೆಸ್‌ನ ಜೈರಾಮ್ ರಮೇಶ್, ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಕೆಸಿ ವೇಣುಗೋಪಾಲ್ ಸೇರಿದಂತೆ ಒಟ್ಟು 33 ರಾಜ್ಯಸಭಾ ಸದಸ್ಯರನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ.
ಕಳೆದ ಡಿ.13ರಂದು ಸಂಸತ್ತಿನಲ್ಲಿ ನಡೆದ ಭಾರೀ ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ಸದನದಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿದೆ.