ಉತ್ತರಾಖಂಡ ಸಹಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ 

Date:

ಉತ್ತರಾಖಂಡದ ಸಹಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ33ರಷ್ಟು ಮೀಸಲಾತಿ ನೀಡುವ ಆದೇಶವನ್ನು ಅಲ್ಲಿನ  ಸರ್ಕಾರ ಶನಿವಾರ ಹೊರಡಿಸಿದೆ.

- Advertisement -

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಇದೀಗ, ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ಸಹಕಾರಿ ಸಂಸ್ಥೆಗಳಲ್ಲಿ ಪುರುಷರ ಪ್ರಾಬಲ್ಯವನ್ನು ಕೊನೆಗೊಳಿಸಲಿದೆ ಎಂದು ಸರ್ಕಾರವು ಅಧಿಕೃತ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸರ್ಕಾರದ ಆದೇಶವು ರಾಜ್ಯದ 10 ಜಿಲ್ಲಾ ಸಹಕಾರಿ ಬ್ಯಾಂಕ್‌ಗಳು, 670 ವಿವಿಧೋದ್ದೇಶ ಸಹಕಾರ ಸಂಘಗಳು ಮತ್ತು ಇತರ ಉನ್ನತ ಸಹಕಾರಿ ಸಂಸ್ಥೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಉತ್ತರಾಖಂಡ ರಾಜ್ಯ ಸಹಕಾರಿ ಬ್ಯಾಂಕ್, ರಾಜ್ಯ ಸಹಕಾರ ಮಹಾಮಂಡಳಿ, ಗೃಹ ನಿರ್ಮಾಣ ಮತ್ತು ನಿರ್ಮಾಣ ಸಹಕಾರ ಒಕ್ಕೂಟ, ಪ್ರಾದೇಶಿಕ ಸಹಕಾರ ಸಂಘ, ಗ್ರಾಹಕ ಸಹಕಾರ ಒಕ್ಕೂಟ, ರೇಷ್ಮೆ ಒಕ್ಕೂಟ ಮುಂತಾದವುಗಳಲ್ಲಿಯೂ ಮಹಿಳೆಯರಿಗೆ ಕೋಟಾ ಸಿಗಲಿದೆ ಎಂದು ಸರ್ಕಾರ ಹೇಳಿದೆ.

ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಉತ್ತರಾಖಂಡ ಸರ್ಕಾರ ಸಾಗುತ್ತಿದೆ ಎಂಬುದನ್ನು ಈ ಐತಿಹಾಸಿಕ ನಿರ್ಧಾರವು ಸಾಬೀತುಪಡಿಸುತ್ತದೆ ಎಂದು ರಾಜ್ಯ ಸಹಕಾರಿ ಸಚಿವ ಧನ್ ಸಿಂಗ್ ರಾವತ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...