ಚುನಾವಣೆಗೂ ಮುನ್ನ ಕೆಸಿಆರ್‌ಗೆ ಆಘಾತ: ಮಾಜಿ ಸಚಿವರು, ಶಾಸಕರು ಸೇರಿ 35 ಮಂದಿ ‘ಕೈ’ ಸೇರ್ಪಡೆಗೆ ಸಜ್ಜು

Date:

ಡಿಸೆಂಬರ್‌ನಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ನೇತೃತ್ವದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಗೆ ದೊಡ್ಡ ಆಘಾತವುಂಟಾಗಿದೆ. ಮಾಜಿ ಸಚಿವರು, ಶಾಸಕರು, ಸಂಸದರು ಸೇರಿ ಸುಮಾರು 35ಕ್ಕೂ ಹೆಚ್ಚು ಪ್ರಮುಖ ನಾಯಕರು ಕಾಂಗ್ರೆಸ್‌ ಸೇರಲು ಸಜ್ಜಾಗಿದ್ದಾರೆ.

- Advertisement -

ಇದಕ್ಕೆ ಮುನ್ಸೂಚನೆಯೆಂಬಂತೆ ಈ ನಾಯಕರೆಲ್ಲರೂ ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ ಅವರನ್ನು ಭೇಟಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಭೇಟಿ ಮಾಡಿದ ಬಿಆರ್‌ಎಸ್ ನಾಯಕರಲ್ಲಿ ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ, ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕರಾದ ಪಣ್ಯಂ ವೆಂಕಟೇಶ್ವರಲು, ಕೋರಂ ಕನಕಯ್ಯ, ರಾಕೇಶ್ ರೆಡ್ಡಿ, ಕೋಟ ರಾಮ್ ಬಾಬು ಸೇರಿದಂತೆ  35ಕ್ಕೂ ಅಧಿಕ ನಾಯಕರು ಉಪಸ್ಥಿತರಿದ್ದರು. ಈ ನಾಯಕರೆಲ್ಲ ಬಿಆರ್‌ಎಸ್ ತ್ಯಜಿಸಿ ಕಾಂಗ್ರೆಸ್ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಜೀನಾಮೆ ನೀಡಿ ಕೆಲಸ ತೊರೆದಿದ್ದ ಮಹಿಳಾ ಬಸ್ ಚಾಲಕಿಗೆ ಕಾರು ಉಡುಗೊರೆ ನೀಡಿದ ಕಮಲ್ ಹಾಸನ್

ಜುಲೈ ಮೊದಲ ವಾರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಉಪಸ್ಥಿತಿಯೊಂದಿಗೆ ತೆಲಂಗಾಣದ ಕಮ್ಮಂನಲ್ಲಿ ಅದ್ಧೂರಿ ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಲಾಗಿದೆ. ಈ ಸಮಾರಂಭದಲ್ಲಿ ಬಿಆರ್‌ಎಸ್ ನಾಯಕರು ಮಾತ್ರವಲ್ಲದೆ ಬಿಜೆಪಿಯ ಕೆಲವು ನಾಯಕರು ಕೂಡ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...