ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಡಿ ರಾಜ್ಯದ ಬಡ ಕುಟುಂಬಗಳಿಗೆ ನಿರ್ಮಿಸಿಕೊಡುತ್ತಿರುವ ಮನೆಗಳ ಪೈಕಿ 36 ಸಾವಿರ ಮನೆ ಮುಂದಿನ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಆಯೋಜಿಸಿದ್ದ ಮನೆ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
“2.32 ಲಕ್ಷ ಮನೆಗಳನ್ನು ಈ ವರ್ಷದ ಅಂತ್ಯದೊಳಗೆ ಪೂರ್ಣಗೊಳಿಸಿ ಹಂಚಿಕೆ ಮಾಡುವ ಗುರಿ ಹೊಂದಿದ್ದು ಮೊದಲ ಹಂತದಲ್ಲಿ 36 ಸಾವಿರ ಮನೆ ಫೆಬ್ರವರಿ ತಿಂಗಳಲ್ಲಿ ಹಂಚಿಕೆ ಮಾಡಲಾಗುವುದು” ಎಂದು ಹೇಳಿದರು.
“ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಿಂದ 2013 ರಿಂದ ಇದುವರೆಗೆ 2.32 ಲಕ್ಷ ಮನೆ ನಿರ್ಮಿಸಲಾಗುತ್ತಿದ್ದು ಬಡ ಕುಟುಂಬಗಳು ಫಲಾನುಭವಿಗಳ ಪಾಲಿನ ವಂತಿಗೆ 8,200 ಕೋಟಿ ರೂ.ಸರ್ಕಾರವೇ ಭರಿಸಲಿದ್ದು, ಮೊದಲ ಕಂತು 500 ಕೋಟಿ ರೂ. ಬಿಡುಗಡೆಯಾಗಿದ್ದು ಮನೆಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಹಂಚಿಕೆ ಮಾಡಲಾಗುವುದು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ
ವಿನೂತನ ಕಾರ್ಯಕ್ರಮ
“ಡಿ.ಕೆ.ಶಿವಕುಮಾರ್ ಅವರು ಹಮ್ಮಿಕೊಂಡಿರುವ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ಇದುವರೆಗೂ ಯಾರೂ ಮಾಡಿಲ್ಲ. ಜನರ ಸಮಸ್ಯೆಗೆ ಅಧಿಕಾರಿಗಳ ಜತೆಗೂಡಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದು ಉತ್ತಮ ನಿರ್ಧಾರ. ಕಾಂಗ್ರೆಸ್ ಸರ್ಕಾರದ ಜನಪರ ಕಾಳಜಿಗೆ ಇದು ಸಾಕ್ಷಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.