ಮುಸ್ಲಿಮರಿಗೆ ಶೇ.4 ಗುತ್ತಿಗೆ ಮೀಸಲು | ಜೆಡಿಎಸ್ ನಿಲುವು ಸ್ಪಷ್ಟಪಡಿಸಿದ ಹೆಚ್ ಡಿ ಕುಮಾರಸ್ವಾಮಿ

Date:

Advertisements

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ಬಗ್ಗೆ ಜೆಡಿಎಸ್ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, “ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು” ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ.ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ. ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ” ಎಂದು ತಿಳಿಸಿದ್ದಾರೆ.

“ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್‌ಡಿಎ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೆ ಶಾಸನಸಭೆಯಿಂದ ಅಪಮಾನ; ನೈತಿಕ ಹೊಣೆ ಯಾರದ್ದು?

“ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ” ಎಂದು ಆರೋಪ ಮಾಡಿದ್ದಾರೆ.

“ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X