ಕಲುಷಿತ ನೀರು ಸೇವನೆ | ಕವಾಡಿಗರಹಟ್ಟಿ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ: ಸಚಿವ ಡಿ ಸುಧಾಕರ್

Date:

  • 2.5 ಲಕ್ಷ ಲೀಟರ್ ಸಾಮರ್ಥ್ಯದ ನೂತನ ಓವರ್ ಹೆಡ್ ಟ್ಯಾಂಕ್
  • ಪ್ರತಿ ಮನೆಗೂ ಹೊಸ ನಳ (ನಲ್ಲಿ) ಸಂಪರ್ಕ ಕಲ್ಪಿಸಲು ತೀರ್ಮಾನ

ಕಲುಷಿತ ನೀರು ಸೇವನೆಯಿಂದ ದುರಂತ ಸಂಭವಿಸಿದ ಚಿತ್ರದುರ್ಗ ನಗರದ 17ನೇ ವಾರ್ಡ್ ವ್ಯಾಪ್ತಿಯ ಕವಾಡಿಗರಹಟ್ಟಿಗೆ ಮೂಲಸೌಲಭ್ಯ ಕಲ್ಪಿಸಲು ನಗರಾಭಿವೃದ್ಧಿ ಇಲಾಖೆಯಿಂದ 4 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದರು.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “2.5 ಲಕ್ಷ ಲೀಟರ್ ಸಾಮರ್ಥ್ಯದ ನೂತನ ಓವರ್ ಹೆಡ್ ಟ್ಯಾಂಕ್, ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗುತ್ತದೆ. ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಸೇರಿ ಹಲವು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ” ಎಂದು ಹೇಳಿದರು.

“ಪ್ರತಿ ಮನೆಗೂ ಹೊಸ ನಳ (ನಲ್ಲಿ) ಸಂಪರ್ಕ ಕಲ್ಪಿಸಲು ತೀರ್ಮಾನಿಸಲಾಗಿದೆ. ಪರಿಶಿಷ್ಟ ಜಾತಿ ಸಮುದಾಯ ಹೆಚ್ಚಾಗಿರುವ ಬಡಾವಣೆಯ ಅಭಿವೃದ್ಧಿಗೆ ಸಮಾಜ ಕಲ್ಯಾಣ ಇಲಾಖೆ ಕೂಡ ಯೋಜನೆ ರೂಪಿಸುತ್ತಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

“ವಸತಿ ರಹಿತರಿಗೆ ಮನೆ ಕಟ್ಟಿಸಿಕೊಡುವ ನಿಟ್ಟಿನಲ್ಲಿ ಚಿಂತನೆ ನಡೆಯುತ್ತಿದೆ. ಬಹಿರ್ದೆಸೆ ಮುಕ್ತಗೊಳಿಸಲು ವೈಯಕ್ತಿಕ ಹಾಗೂ ಸಾಮೂಹಿಕ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗುವುದು” ಎಂದು ವಿವರಿಸಿದರು.

ಕಾಲರಾ ಬ್ಯಾಕ್ಟಿರಿಯ ಪತ್ತೆ

ಕವಾಡಿಗರಹಟ್ಟಿಯ ಚರಂಡಿಯಲ್ಲಿ ವಿಬ್ರಿಯೊ ಕಾಲರಾ ಬ್ಯಾಕ್ಟಿರಿಯಾ ಪತ್ತೆಯಾಗಿದೆ. ಚರಂಡಿ ಮೂಲಕ ಬ್ಯಾಕ್ಟಿರಿಯಾ ಕುಡಿಯುವ ನೀರಿನ ಪೈಪ್‌ಲೈನ್ ಸೇರಿರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಮಾಹಿತಿ ಇದೇ ವೇಳೆ ಮಾಹಿತಿ ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಸಿಎಂ ಸಿದ್ದರಾಮಯ್ಯ ಪರ ಜಿಟಿಡಿ ಅಬ್ಬರ; ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ

ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ...

ಮೈಸೂರು ದಸರಾದಲ್ಲೂ ಕೋಮು ದ್ವೇಷ; ದೀಪಾಲಂಕಾರಕ್ಕೂ ಬಿಜೆಪಿ ಅಪಸ್ವರ

ಮೈಸೂರು ದಸರಾ ಸಮಯದಲ್ಲಿ ಬಿಜೆಪಿ ನಿರಂತರವಾಗಿ ವಿವಾದ ಹುಟ್ಟುಹಾಕುತ್ತಲೇ ಇದೆ. ಈ...

50 ಕೋಟಿ ರೂ.ಗಾಗಿ ಜೀವ ಬೆದರಿಕೆ: ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್‌ ನಾಯಕ ದೂರು

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ...