3 ಲಕ್ಷ ಮನೆಗಳು: ಸ್ವಿಗ್ಗಿ, ಜೊಮಾಟೋ ಕಾರ್ಮಿಕರಿಗೆ 4 ಲಕ್ಷ ರೂ. ವಿಮೆ

Date:

ಮುಖ್ಯಮಂತ್ರಿಯಾಗಿ 7ನೇ ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಅವರು ವಸತಿ ಹಾಗೂ ಕಾರ್ಮಿಕ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

- Advertisement -

ಮಾರ್ಚ್‌ 2023ಕ್ಕೆ ಬಾಕಿ ಉಳಿದಿರುವ 12 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಪೂರ್ಣಗೊಳಿಸಬೇಕಾದರೆ 17,815 ಕೋಟಿ ರೂ.ಗಳ ಅಗತ್ಯವಿರುತ್ತದೆ. ರಾಜ್ಯದಲ್ಲಿ ನಿರ್ಮಾಣ ಹಂತದಲ್ಲಿ ಮೂರು ಲಕ್ಷ ಮನೆಗಳಿದ್ದು, ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲು ಕ್ರಮವಹಿಸಲಾಗುವುದು. ಇದಕ್ಕಾಗಿ 2,450 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್‌ ಭಾಷಣದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಸುದ್ದಿ ಓದಿದ್ದೀರಾ? ಬಜೆಟ್‌ 23-24 : ಇಂಧನ, ಆರೋಗ್ಯ ಕ್ಷೇತ್ರಗಳಿಗೆ ನೀಡಿರುವ ಅನುದಾನ ಮತ್ತು ಕೊಡುಗೆಗಳು

ಕಾರ್ಮಿಕ ಇಲಾಖೆಗೆ ಹಲವು ಉತ್ತಮ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಸ್ವಿಗ್ಗಿ, ಜೊಮಾಟೋ, ಅಮೆಜಾನ್‌ ಮುಂತಾದ ಇ-ಕಾಮರ್ಸ್‌ ಸಂಸ್ಥೆಗಳಲ್ಲಿ ಪೂರ್ಣಕಾಲಿಕ/ಅರೆಕಾಲಿಕ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ ಎರಡು ಲಕ್ಷ ರೂ.ಗಳ ಜೀವವಿಮಾ ಸೌಲಭ್ಯ ಹಾಗೂ ಎರಡು ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿದಂತೆ ಒಟ್ಟು ನಾಲ್ಕು ಲಕ್ಷ ರೂ.ಗಳ ವಿಮಾ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಕಾರ್ಮಿಕ ಇಲಾಖೆಗೆ ಘೋಷಿಸಿರುವ ಇತರ ಯೋಜನೆಗಳು

  • ಆರು ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳಲ್ಲಿ 13 ಕೋಟಿ ರೂ. ವೆಚ್ಚದಲ್ಲಿ ಒಟ್ಟು 35 ಬೆಡ್‌ಗಳ ಸಾಮರ್ಥ್ಯದ ಐ.ಸಿ.ಯು/ಎಂ.ಐ.ಸಿ.ಯು
  • ಐದು ಕೋಟಿ ರೂ. ವೆಚ್ಚದಲ್ಲಿ ಆರು ಆಸ್ಪತ್ರೆಗಳಲ್ಲಿ 25 ಡಯಾಲಿಸಿಸ್‌ ಘಟಕಗಳು ಮತ್ತು 24 ಕೋಟಿ ರೂ. ವೆಚ್ಚದಲ್ಲಿ ಎರಡು ಆಸ್ಪತ್ರೆಗಳಲ್ಲಿ ಹೊಸ ಲೆವೆಲ್-‌2 ಟ್ರಾಮಾ ಕೇರ್‌ ಸೆಂಟರ್‌ಗಳ ನಿರ್ಮಾಣ
  • ಎಂಟು ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಆಸ್ಪತ್ರೆಗಳಲ್ಲಿ ಮಾಡ್ಯುಲಾರ್‌ ಓ.ಟಿ.ಗಳು ಮತ್ತು 35 ಕೋಟಿ ರೂ. ವೆಚ್ಚದಲ್ಲಿ ರೋಗ ಪತ್ತೆ ಹಚ್ಚುವ ಕೇಂದ್ರಗಳ ಉನ್ನತೀಕರಣ ಸೇರಿದಂತೆ ಒಟ್ಟು 85 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ
  • ಮೂರು ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿನ ಎಲ್ಲ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳಲ್ಲಿ ಆಯುರ್ವೇದ, ಹೋಮಿಯೋಪಥಿ ಮತ್ತು ಯೋಗ ಕೇಂದ್ರಗಳು ಒಳಗೊಂಡ ಆಯುಷ್‌ ವಿಭಾಗ ಸ್ಥಾಪನೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...