40% ಕಮಿಷನ್ | ನ್ಯಾ. ನಾಗಮೋಹನ ದಾಸ್ ವಿಚಾರಣಾ ಆಯೋಗದಿಂದ ಸಿಎಂಗೆ ವರದಿ ಸಲ್ಲಿಕೆ

Date:

Advertisements

ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳ ತನಿಖಾ ವರದಿ ಮತ್ತು ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 01 ರಿಂದ 18 ರವರೆಗಿನ ಉಪ/ಸೀಳು ಕಾಲುವೆಗಳ ಆಧುನೀಕರಣ ಅಂದಾಜು ಪಟ್ಟಿ ತನಿಖಾ ವರದಿಯನ್ನು ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ವಿಚಾರಣಾ ಆಯೋಗ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್ ಕಾಮಗಾರಿಗಳಲ್ಲಿ ಶೇ.40 ಕಮಿಷನ್‌ ಇದೆ ಎಂದು ರಾಜ್ಯ ಗುತ್ತಿಗೆದಾರರ ಸಂಘವು ಗಂಭೀರವಾಗಿ ಆರೋಪಿಸಿತ್ತು. ರಾಜ್ಯ ರಾಜಕಾರಣದಲ್ಲೂ ಈ ಆರೋಪ ತೀವ್ರ ಸಂಚಲನ ಮೂಡಿಸಿ ಚುನಾವಣೆಗೆ ಕಾಂಗ್ರೆಸ್‌ ಇದನ್ನು ಅಸ್ತ್ರವನ್ನಾಗಿ ಮಾಡಿಕೊಂಡು 40% ಕಮಿಷನ್‌ ಬಗ್ಗೆ ದೊಡ್ಡ ಅಭಿಯಾನವನ್ನೇ ಮಾಡಿತ್ತು.

ಚುನಾವಣೆಯಲ್ಲಿ ಸೋತ ಮೇಲೆ 40% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎಂದು ಸಿಎಂ ಸಿದ್ಧರಾಮಯ್ಯ ಮೇಲೆ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಆಗ್ರಹಿಸಿದ್ದರು. ಈ ಬಗ್ಗೆ ತನಿಖೆ ನಡೆಸಲು ಸರ್ಕಾರ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ನೇತೃತ್ವದಲ್ಲಿ ವಿಚಾರಣ ಆಯೋಗ ರಚಿಸಿತ್ತು. ಈಗ ಆಯೋಗ ಸರ್ಕಾರಕ್ಕೆ ವರದಿನ ಸಲ್ಲಿಸಿದ್ದು, 40% ಕಮಿಷನ್ ಆರೋಪ ನಿಜವೇ ಎಂಬುದು ಇನ್ನಷ್ಟೇ ಬಯಲಾಗಬೇಕಿದೆ. ಕೇವಲ ವರದಿ ತಯಾರಿಸುವ ಬಗೆಯನ್ನು ಬಗ್ಗೆ ಮಾತ್ರ ಹೆಚ್.ಎನ್. ನಾಗಮೋಹನ ದಾಸ್ ವಿಚಾರಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ಗುತ್ತಿಗೆದಾರರ ಸಂಘದ ಆರೋಪ ವರದಿ

ರಾಜ್ಯ ಗುತ್ತಿಗೆದಾರರ ಸಂಘವು ಸರ್ಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇ.40 ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿತ್ತು. ಇದಲ್ಲದೆ ಪ್ಯಾಕೇಜ್ ಪದ್ಧತಿ ಕೈಬಿಡುವುದು, ಎಸ್.ಆರ್. ದರಪಟ್ಟಿ ನಿಗದಿ, ಸ್ಟಾರ್ ರೇಟ್ ಪದ್ಧತಿಯ ಜಾರಿ. ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಿಕೆ, ಸೀನಿಯಾರಿಟಿ ಮೇಲೆ ಬಿಲ್ ಪಾವತಿ, ಕೆ.ಆರ್.ಐ.ಡಿ.ಎಲ್. ನಿಂದ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳ ನೀಡಿಕೆ ತಪ್ಪಿಸುವುದು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಲು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು.. ಈ ಸಂಬಂಧ ವಿಚಾರಣಾ ಆಯೋಗವು ಈ ಎಲ್ಲ ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ವಿವರವಾದ ಅಧ್ಯಯನ ಮಾಡಿ ತನಿಖೆ ನಡೆಸಿ ಪ್ರಸ್ತುತ ವರದಿಯನ್ನು ಸಲ್ಲಿಸಿದೆ ಎಂದು ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ಆಯೋಗ ತಿಳಿಸಿದೆ.

“ಇದೊಂದು ಸಾರ್ವಜನಿಕ ಕಾಮಗಾರಿಗಳಿಗೆ ಸಂಬಂಧಿಸಿದ ಆರೋಪವಾಗಿರುವುದರಿಂದ ಸಾರ್ವಜನಿಕರ ಹೇಳಿಕೆಗಳು ಮತ್ತು ವಿವರಗಳು ಬಹು ಮುಖ್ಯ ಎಂಬುದನ್ನು ಮನಗಂಡು ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆಯೂ ಆಯೋಗವು ಕೂಲಂಕಷವಾಗಿ ತನಿಖೆ ನಡೆಸಿ ಸಲಹೆ ಮತ್ತು ಅಭಿಪ್ರಾಯಗಳೊಂದಿಗೆ ವರದಿ ತಯಾರಿಸಲಾಗಿದೆ. ಗುತ್ತಿಗೆದಾರರ ಸಂಘದ ಆರೋಪಗಳ ತನಿಖೆ ನಡೆಸುತ್ತಿದ್ದ ಜೊತೆ ಜೊತೆಯಲ್ಲಿಯೇ ಸರ್ಕಾರವು ರಾಜ್ಯದ ಪ್ರಮುಖ ಐದು ಇಲಾಖೆಗಳಲ್ಲಿ ದಿನಾಂಕ:26.07.2019 ರಿಂದ 31.03.2023ರ ಅವಧಿಯಲ್ಲಿ ನಡೆದಿರುವ ಎಲ್ಲ ಕಾಮಗಾರಿಗಳ ತನಿಖೆ ನಡೆಸಿ ವರದಿಯನ್ನು ನೀಡಬೇಕೆಂದು ತಿಳಿಸಿತು. ಇದನ್ನು ಗಮನದಲ್ಲಿಟ್ಟುಕೊಂಡು ಆಯೋಗವು ವೈಜ್ಞಾನಿಕವಾಗಿ ರ್‍ಯಾಂಡಮ್ ಮಾದರಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ತನಿಖೆಗೆ ಆಯ್ಕೆ ಮಾಡಿಕೊಂಡಿದೆ. ಈ ಆಯ್ಕೆಯಲ್ಲಿ ಎಲ್ಲಾ ಇಲಾಖೆಗಳು, ಎಲ್ಲ ಜಿಲ್ಲೆಗಳು, ಎಲ್ಲಾ ಮಾದರಿಯ ಕಾಮಗಾರಿಗಳು ಮತ್ತು ಎಲ್ಲಾ ಮೊತ್ತದ ಕಾಮಗಾರಿಗಳನ್ನು ಪರಿಗಣಿಸಲಾಗಿದೆ” ಎಂದು ತಿಳಿಸಲಾಗಿದೆ.

“ಕಾಮಗಾರಿಗಳ ತನಿಖೆಯು ಕಡತಗಳ ಪರಿಶೀಲನೆ, ಸ್ಥಳ ಪರಿಶೀಲನೆ ಮತ್ತು ಲೆಕ್ಕಪತ್ರಗಳ ಪರಿಶೀಲನೆ ಅಂಶಗಳನ್ನು ಒಳಗೊಂಡಿರುತ್ತದೆ. ತನಿಖಾ ವರದಿಯು ಅನುಬಂಧಗಳೊಂದಿಗೆ ಸುಮಾರು ಇಪ್ಪತ್ತು ಸಾವಿರ ಪುಟಗಳನ್ನು ಹೊಂದಿದೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಎರಡನೇ ತನಿಖಾ ವರದಿ

ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 01 ರಿಂದ 18 ರವರೆಗಿನ ಉಪ/ಸೀಳು ಕಾಲುವೆಯ ಆಧುನೀಕರಣ ಪ್ಯಾಕೇಜ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಂಜೂರಾದ ಅಂದಾಜು ಪತ್ರಿಕೆಗಳಲ್ಲಿ ಅಳವಡಿಸಿಕೊಂಡಿರುವ ಹಾಗೂ ಸದರಿ ಅಂದಾಜು ಪತ್ರಿಕೆಗಳನ್ನು ಪರಿಶೀಲಿಸಿ ಪ್ರಸಕ್ತ ನಿಗಮದ ಅಂದಾಜು ಪರಿಶೀಲನಾ ಸಮಿತಿಯು ಗಮನಿಸಿರುವ ತಾಂತ್ರಿಕ ನ್ಯೂನತೆಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ನಿವೃತ್ತ ಸರ್ಕಾರದ ಕಾರ್ಯದರ್ಶಿಗಳಾದ ಸಿದ್ದಗಂಗಪ್ಪರವರ ಅಧ್ಯಕ್ಷತೆಯಲ್ಲಿ ರಚಿಸಿದ ತಾಂತ್ರಿಕ ತಜ್ಞರ ಸಮಿತಿಯನ್ನು ವಿಸರ್ಜಿಸಿ ವಿಚಾರಣಾ ಆಯೋಗಕ್ಕೆ ಹೆಚ್ಚುವರಿಯಾಗಿ ವಹಿಸಿರುವ ತನಿಖೆಯನ್ನು ಆಯೋಗವು ನಡೆಸಿ ತನಿಖಾ ವರದಿಯನ್ನು ಸಲ್ಲಿಸಿದೆ. ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಸುಮಾರು ಸಾವಿರದ ಎಂಟುನೂರು ಪುಟಗಳನ್ನು ಹೊಂದಿದೆ ಎಂದು ಆಯೋಗ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X