40 ಪರ್ಸೆಂಟ್​ ಕಮಿಷನ್, ಕೋವಿಡ್‌ ಹಗರಣ | ತನಿಖೆಗೆ ಪ್ರತ್ಯೇಕ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ

Date:

Advertisements
  • ನಿವೃತ್ತ ನ್ಯಾ. ಜಾನ್‌ ಮೈಕಲ್‌ ಕುನ್ಹಾ ನೇತೃತ್ವದಲ್ಲಿ ಕೋವಿಡ್‌ ಹಗರಣ ತನಿಖೆ
  • ನಿವೃತ್ತ ನ್ಯಾ. ನಾಗಮೋಹನ್‌ದಾಸ್‌ ನೇತೃತ್ವದಲ್ಲಿ 40 ಪರ್ಸೆಂಟ್‌ ಕಮಿಷನ್‌ ತನಿಖೆ

ಬಿಜೆಪಿ ಸರ್ಕಾರದ ಅವಧಿಯಲ್ಲಿ ದೊಡ್ಡ ಸದ್ದು ಮಾಡಿದ್ದ 40 ಪರ್ಸೆಂಟ್​ ಕಮಿಷನ್ ಆರೋಪ ಮತ್ತು ಕೋವಿಡ್‌ ಹಗರಣಕ್ಕೆ ಸಂಬಂಧಿಸಿದಂತೆ ಎರಡೂ ಪ್ರಕರಣಕ್ಕೆ ಪ್ರತ್ಯೇಕವಾಗಿ ವಿಚಾರಣಾ ಆಯೋಗ ರಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕೋವಿಡ್‌ ರೋಗದ ನಿವಾರಣೆ ಮತ್ತು ತಡೆಗಟ್ಟುವಿಕೆಯ ಹೆಸರಿನಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದೆ.

ಹಾಗೆಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕಾಮಗಾರಿಗಳ ಟೆಂಡರ್‌, ಪ್ಯಾಕೇಜ್ ಪದ್ಧತಿ, ಪುನರ್‌ ಅಂದಾಜು, ಬಾಕಿ ಮೊತ್ತ ಬಿಡುಗಡೆ ಮತ್ತಿತರ ವಿಷಯಗಳಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಮಾಡಿದ್ದ ಆರೋಪದ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್. ನಾಗಮೋಹನ್‌ದಾಸ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಅಗಸ್ಟ್ 17ರಂದು ಹೊರಡಿಸಿದ್ದ ಅದೇಶ ರದ್ದುಪಡಿಸಿ, ಅದರ ಬದಲು ನಾಗಮೋಹನ್‌ ದಾಸ್ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲಾಗಿದೆ.

Advertisements

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 40 ಪರ್ಸೆಂಟ್‌ ಕಮಿಷನ್‌ ಮತ್ತು ಕೋವಿಡ್‌ ಹಗರಣ ವಿಷವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಬಿಜೆಪಿ ವಿರುದ್ಧ ಹೋರಾಟ ನಡೆಸಿತ್ತು. ನ್ಯಾಯಾಂಗ ತನಿಖೆ ಆಗಬೇಕು ಎಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸಿತ್ತು. ಈಗ ಅಧಿಕಾರದ ಗದ್ದುಗೆಯಲ್ಲಿರುವ ಕಾಂಗ್ರೆಸ್‌ ತನ್ನ ಆಗ್ರಹದಂತೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣ ಆಯೋಗ ರಚಿಸಿದೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಆರ್‌ಟಿಇ ದಾಖಲಾತಿ ಕುಸಿತ; 2018ರ ತಿದ್ದುಪಡಿ ರದ್ದತಿ ಅತ್ಯವಶ್ಯ

ಮೂರು ತಿಂಗಳಲ್ಲಿ ವರದಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನಿರ್ವಹಣೆ, ತಡೆಗಟ್ಟಲು ಔಷಧ, ಉಪಕರಣಗಳು ಹಾಗೂ ಸಾಮಾಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ಕುರಿತು ತನಿಖೆ ನಡೆಸಿ, ಮೂರು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.

“2021ರ ಜುಲೈ-ಆಗಸ್ಟ್ ನಲ್ಲಿ ನಡೆದ ‘ಸಾರ್ವಜನಿಕ ಲೆಕ್ಕಪತ್ರ ಸಮಿತಿ’ ನೀಡಿರುವ ವರದಿಯಲ್ಲಿನ ಗಂಭೀರ ಆರೋಪಗಳ ಕುರಿತು ತನಿಖಾ ಆಯೋಗ ರಚನೆ ಮಾಡಲಾಗಿದೆ. ಈ ಆಯೋಗಕ್ಕೆ ಸಂಬಂಧಪಟ್ಟಂತೆ ಆಯಾ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ ತನಿಖೆಗಾಗಿ ಅಪೇಕ್ಷಿಸುವ ಎಲ್ಲ ಕಡತಗಳು/ದಾಖಲಾತಿಗಳು/ಇತ್ಯಾದಿಗಳನ್ನು ಒದಗಿಸತಕ್ಕದ್ದು” ಎಂದು ಆದೇಶದಲ್ಲಿ ಹೇಳಲಾಗಿದೆ.

ತನಿಖೆಗೆ ಸಮಗ್ರ ಮಾಹಿತಿ ಒದಗಿಸಿ

“ತನಿಖೆಗೆ ಸಮಗ್ರ ಮಾಹಿತಿ, ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗಳು ಸಲ್ಲಿಸಬೇಕು. ಆಯೋಗದ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲು ಅನುಕೂಲ ಆಗುವಂತೆ ಆಯೋಗದ ನ್ಯಾಯಮೂರ್ತಿ, ಕಾರ್ಯದರ್ಶಿ ಹಾಗೂ ಅಧಿಕಾರಿ, ಸಿಬ್ಬಂದಿಗೆ ವಾಹನ, ಪೀಠೋಪಕರಣ ಮತ್ತಿತರ ಸೌಲಭ್ಯವನ್ನು ಆರೋಗ್ಯ ಇಲಾಖೆಯ ಆಯುಕ್ತರು ಒದಗಿಸಬೇಕು” ಎಂದು ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X