40 ಪರ್ಸೆಂಟ್‌ ಕಮಿಷನ್ | ದಾಖಲೆ ನೀಡಿ ಕೆಂಪಣ್ಣ ಆರೋಪ ಮಾಡಲಿ: ಸಿದ್ದರಾಮಯ್ಯ

Date:

“40 ಪರ್ಸೆಂಟ್‌ ಕಮಿಷನ್ ವಿಚಾರವಾಗಿ ತನಿಖೆ ನಡೆಸಲು ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಮತ್ತೆ 40 ಪರ್ಸೆಂಟ್‌ ಕಮಿಷನ್ ಆರೋಪಿಸಿದ್ದಾರೆ. ಈ ಬಗ್ಗೆ ದಾಖಲೆ ನೀಡಲಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಭಗೀರಥ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “40% ಭ್ರಷ್ಟಾಚಾರ ಇದ್ದರೆ ದಾಖಲೆ ನೀಡಲಿ, ಅಲ್ಲದೆ ಅಧಿಕಾರಿಗಳು ಕೇಳುತ್ತಾರೆ ಎಂದಿದ್ದಾರೆ. ಅಂಥವರ ವಿರುದ್ದ ದೂರು ನೀಡಲಿ, ಕ್ರಮಕೈಗೊಳ್ಳುತ್ತೇವೆ” ಎಂದರು.

ಈಶ್ವರಪ್ಪ ವಿರುದ್ಧ ಕ್ರಮ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೇಶ ವಿಭಜನೆ ಹೇಳಿಕೆ ನೀಡುವವರನ್ನ ಕೊಲ್ಲುವ ಕಾನೂನು ತರಬೇಕು ಎನ್ನುವ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, “ಈಶ್ವರಪ್ಪನವರಿಗೆ ಕಡಿ, ಬಡಿ, ತರಿ ಇದು ಬಿಟ್ಟು ಬೇರೆ ಭಾಷೆ ಗೊತ್ತಿಲ್ಲ. ಈಶ್ವರಪ್ಪನ ವಿರುದ್ದ ಕ್ರಮ ತೆಗೆದುಕೊಳ್ಳುತ್ತೇವೆ. ಕಡಿ, ಬಡಿ, ಕೊಲ್ಲು, ಕತ್ತರಿಸು ಭಾಷೆ ಬಿಟ್ಟು ಬಿಜೆಪಿಗೆ ಏನು ಬರಲ್ಲ” ಎಂದರು.

“ನನಗೆ ಆರ್‌ಎಸ್‌ಎಸ್ ಟ್ರೈನಿಂಗ್ ಆಗಿದೆ ಎನ್ನುತ್ತಾರೆ. ಇದೇನಾ ಟ್ರೈನಿಂಗ್ ಆಗಿರುವುದು ಈಶ್ವರಪ್ಪ? ಈಶ್ವರಪ್ಪ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಡಿ ಕೆ ಸುರೇಶ್ ಅವರನ್ನು ಕೊಲ್ಲಬೇಕು ಎಂದರೆ ಒಬ್ಬ ರಾಜಕೀಯ ಪಕ್ಷದ ಮುಖಂಡರಾಗಿ ಹೇಳುವ ಭಾಷೆನಾ ಇದು? ಇವರಿಗೆಲ್ಲ ಆರ್‌ಎಸ್‌ಎಸ್ ಟ್ರೈನಿಂಗ್ ಕೊಟ್ಟಿರುವುದು ಇದೇನಾ?” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ಆಯೋಗಕ್ಕೆ ಅಧ್ಯಕ್ಷರಿಲ್ಲ; ಶೋಷಿತ ಹೆಣ್ಣುಮಕ್ಕಳ ನೋವು ಕೇಳುವವರಿಲ್ಲ

“ಅನುದಾನದ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಹೋಗುವ ಆಲೋಚನೆ ಇಲ್ಲ. ನಮಗೆ ಅನ್ಯಾಯ ಆಗಿರುವುದು ನಿಜ. ನಾವು 100 ರೂ.ತೆರಿಗೆ ಕೊಟ್ಟರೆ 12 ರೂ ಮಾತ್ರ. ಇನ್ನುಳಿದ 88 ರೂ. ಕೇಂದ್ರಕ್ಕೆ ಹೋಗುತ್ತದೆ. ಗುಜರಾತ್ ಸಿಎಂ ಆದಾಗ ತೆರಿಗೆ ನಮ್ಮ ರಾಜ್ಯದ್ದು, ನಾವೇ ವಸೂಲಿ ಮಾಡುತ್ತೇವೆ ಎಂದರು. ಇದನ್ನ ಹೇಳಿದ್ದು ಮಿಸ್ಟರ್ ಮೋದಿ. ಈಗ ದೇಶ ವಿಭಜನೆ ಎಂದು ಹೇಳುತ್ತಿದ್ದಾರೆ. ನಮ್ಮ ಪಾಲು ನಾವು ಕೇಳಿದ್ರೆ ದೇಶ ವಿಭಜನೆ ಎನ್ನುತ್ತಾರೆ”ಎಂದರು.

“ಭದ್ರ ಮೇಲ್ದಂಡೆ ವಿಚಾರದಲ್ಲಿ ನಿರ್ಮಲ ಸೀತಾರಾಮನ್ ಯೋಜನೆಗೆ 5300 ಕೋಟಿ ರೂ ಹೇಳಿದ್ದಾರೆ. ಬಜೆಟ್ ನಲ್ಲಿ ಹೇಳಿದ್ದಾರೆಯೇ ವಿನಃ ಒಂದು ರೂಪಾಯಿ ಕೂಡಾ ಕೊಟ್ಟಿಲ್ಲ. ನಾನು ಕೂಡಾ ನೀರಾವರಿ ಮಂತ್ರಿಗಳನ್ನ ಕೇಳಿದ್ದೇನೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ

“ಅಮೃತ್ ಭಾರತ ನಿಲ್ದಾಣ ಯೋಜನೆಯಡಿ ₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275...

ಮಾನನಷ್ಟ ಪ್ರಕರಣಗಳಲ್ಲಿ ಪಕ್ಷವನ್ನೂ ಆರೋಪಿಯಾಗಿ ಮಾಡಬಹುದು: ಕರ್ನಾಟಕ ಹೈಕೋರ್ಟ್

ಮಾನನಷ್ಟ ಮೊಕದ್ದಮೆಗಳಲ್ಲಿ ಒಬ್ಬ ವ್ಯಕ್ತಿ ಮಾತ್ರವಲ್ಲ, ರಾಜಕೀಯ ಪಕ್ಷಗಳಂತಹ ಸಂಸ್ಥೆಗಳು ಸೇರಿದಂತೆ...

ಆನೇಕಲ್ | ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆ

ಬೆಂಗಳೂರಿನ ಆನೇಕಲ್‌ ಬಳಿಯ ಕಾಳನಾಯಕನಹಳ್ಳಿ ಸಮೀಪದ ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ...

ಬೆಂಗಳೂರು | ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಅಪಹರಣ: ಆರೋಪಿಗಳ ಬಂಧನ

ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಭಾವಿಸಿ...