ಬಿಜೆಪಿಯ 40 ಹಾಲಿ ಶಾಸಕರು ಅಪರಾಧದ ಹಿನ್ನೆಲೆ ಉಳ್ಳವರು: ರಮೇಶ್ ಬಾಬು ಆರೋಪ

Date:

  • ಎಲ್ಲ ಪಕ್ಷಗಳಿಂದ ಶೇ. 35ರಷ್ಟು ಶಾಸಕರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ
  • ಅಪರಾಧ ಹಿನ್ನೆಲೆ ಹೊಂದಿರುವ ರೌಡಿ ಶೀಟರ್‌ಗಳನ್ನು ಬಿಜೆಪಿ ಸೇರಿಸಿಕೊಳ್ಳುತ್ತಿದೆ

ಚುನಾಯಿತ ಶಾಸಕರ ಕ್ರಿಮಿನಲ್ ಪ್ರಕರಣ ಕುರಿತು ಇತ್ತೀಚೆಗೆ ವರದಿ ಬಂದಿದ್ದು, ಆ ಪ್ರಕಾರ ಆಡಳಿತ ಬಿಜೆಪಿಯ 40 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿವೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಟ್ಟಾರೆ ಎಲ್ಲ ಪಕ್ಷಗಳಿಂದ 2018ರಲ್ಲಿ ಚುನಾಯಿತರಾಗಿರುವವರಲ್ಲಿ ಶೇ. 35ರಷ್ಟು ಶಾಸಕರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ ಎಂದು ತಿಳಿಸಿದರು.

ಆಡಳಿತ ಪಕ್ಷದವರು ಇತರರಿಗೆ ಮಾದರಿ ಆಗಿ ನಡೆದುಕೊಳ್ಳಬೇಕು. ಆದರೆ, ಆಡಳಿತ ಬಿಜೆಪಿ ಕ್ರಿಮಿನಲ್ ಅಪರಾಧ ಇರುವ ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. ಸೈಲೆಂಟ್ ಸುನೀಲ್ ಮತ್ತು ಫೈಟರ್ ರವಿ ಅವರ ಪಕ್ಷ ಸೇರ್ಪಡೆ ವಿಚಾರವಾಗಿ ಸಾಕಷ್ಟು ಸುದ್ದಿ ಆಗಿದೆ ಎಂದರು.

ಚುನಾವಣೆ ಹಿನ್ನೆಲೆ ಕಳೆದ ಕೆಲವು ತಿಂಗಳಿನಿಂದ ಅಪರಾಧ ಪ್ರಕರಣ ತೆರವು ಮಾಡಿ ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಆದೇಶದ ಮೇರೆಗೆ ಚುನಾವಣಾ ಆಯೋಗ ಕಠಿಣ ನಿಯಮ ಜಾರಿ ಮಾಡಿದೆ. ನಾಮಪತ್ರ ಸಲ್ಲಿಕೆ ಮಾಡುವಾಗ ಕ್ರಿಮಿನಲ್ ಪ್ರಕರಣದ ಮಾಹಿತಿಯನ್ನು ಕಡ್ಡಾಯವಾಗಿ ದಾಖಲಿಸಬೇಕು. ಈ ವಿಚಾರವಾಗಿ ಮಾಹಿತಿ ನೀಡದೇ ಇರುವುದು, ಮುಚ್ಚಿಡುವುದು ಮಾಡಿದರೆ ನಾಮಪತ್ರ ತಿರಸ್ಕರಿಸುವ ಅಧಿಕಾರ ನೀಡಲಾಗಿದೆ ಎಂದು ವಿವರಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಶ್ರೀಧರ್ ರೆಡ್ಡಿ ಎಂಬುವವರು ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಎಂದು ಹೇಳಿಕೊಂಡಿದ್ದು, ಇದಕ್ಕೆ ಇಂಬು ಕೊಡುವಂತೆ ಬಿಜೆಪಿ ನಾಯಕರು ಇವರ ಹೆಸರು ಪ್ರಸ್ತಾಪ ಮಾಡಿದ್ದಾರೆ. ಇವರು ಬೆಂಗಳೂರು ನಗರ ಪದಾಧಿಕಾರಿಯಾಗಿ ಕೆಲಸ ಮಾಡಿದ್ದು, ದುರಂತ ಎಂದರೆ ಇವರ ವಿರುದ್ಧ 12 ಕ್ರಿಮಿನಲ್ ಪ್ರಕರಣ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. 1997ರಲ್ಲಿ ಜಮೀನು ಪ್ರಕರಣದಲ್ಲಿ ಅನೇಕ ಕೇಸು ದಾಖಲಾಗಿವೆ ಎಂದು ಹೇಳಿದರು.

ಆನೇಕಲ್ ತಾಲೂಕಿನ ಜಿಗಣಿ ಹೋಬಳಿ ಮಾಲಗೊಂಡನಹಳ್ಳಿ ಗ್ರಾಮದ ಸರ್ವೆ ನಂ. 76, 79ರಲ್ಲಿ 9 ಎಕರೆಯಲ್ಲಿ 450ಕ್ಕೂ ಹೆಚ್ಚು ಕಂದಾಯ ನಿವೇಶನ ನಿರ್ಮಾಣ ಮಾಡಿ ಮಾರಾಟ ಮಾಡಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಮಾಡಿದ್ದಾರೆ. ಇವರ ವಿರುದ್ಧ ಅನೇಕ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ದಾಖಲಾಗಿರುವ ದೂರು ಪೂರ್ಣ ಪ್ರಮಾಣದಲ್ಲಿ ತನಿಖೆ ಆಗಿಲ್ಲ. ಹೀಗಾಗಿ ಕಾಂಗ್ರೆಸ್ ಪರವಾಗಿ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು ಈ ಹಗರಣ ಸಿಐಡಿ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿದ್ದೇವೆ ಎಂದರು.

ಈ ಸುದ್ದಿ ಓದಿದ್ದೀರಾ ? ಈ ದಿನ ಸಂಪಾದಕೀಯ | ಸೋಲಿನ ಭಯದಿಂದ ಸಿನಿಮಾ ತಾರೆಯರ ಹಿಂದೆ ಬಿದ್ದಿದೆಯೇ ಬಿಜೆಪಿ?

ಜನರ ಗಮನ ಬೇರೆಡೆ ಸೆಳೆಯಲು ದೇವೇಗೌಡರ ಹೇಳಿಕೆ

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರು ದೆಹಲಿಯಲ್ಲಿ ಹೇಳಿಕೆ ನೀಡಿ, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರ ಸಂಬಂಧ ಚೆನ್ನಾಗಿದೆ. ವರುಣಾದಲ್ಲಿ ವಿಜಯೇಂದ್ರ ಅವರ ಸ್ಪರ್ಧೆಗೆ ಯಡಿಯೂರಪ್ಪ ಅವರು ಒಪ್ಪುತ್ತಿಲ್ಲ ಎಂಬ ಕಾರಣಕ್ಕೆ ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ದೇವೇಗೌಡರ ಮೇಲೆ ಅಪಾರ ಗೌರವ ಹೊಂದಿದ್ದು, ಅವರ ಬಾಯಲ್ಲಿ ಇಂತಹ ಹೇಳಿಕೆ ಬರಬಾರದು. ಅವರು ಹಾಸನ ಟಿಕೆಟ್ ವಿಚಾರವಾಗಿ ಇರುವ ಗೊಂದಲದ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಈ ಹೇಳಿಕೆ ನೀಡಿದ್ದಾರೆ. ಇದರಲ್ಲಿ ಯಾವುದೇ ತಿರುಳು ಇಲ್ಲ. ರಾಜ್ಯ ಚುನಾವಣೆಯ ಪ್ರತಿ ಹಂತದಲ್ಲಿ ಜೆಡಿಎಸ್ ಬಿಜೆಪಿ ಬಿ ಟೀಮ್ ಆಗಿದೆ. ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ. ಹೊಂದಾಣಿಕೆ ಅಗತ್ಯ ಇರುವುದು ಜೆಡಿಎಸ್ ಪಕ್ಷಕ್ಕೆ. ಈ ಬಗ್ಗೆ ಸಿ ಪಿ ಯೋಗೇಶ್ವರ್ ಅವರೇ ಹೇಳಿದ್ದಾರೆ ಎಂದು ತಿರುಗೇಟು ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಯುಷ್ಮಾನ್ ಆರೋಗ್ಯ ಕಾರ್ಡ್‌ಗೆ ರಾಜ್ಯ ಸರ್ಕಾರದಿಂದ ಹೊಸ ರೂಪ; ಎಪಿಎಲ್ ಕುಟುಂಬಗಳಿಗೂ ಅವಕಾಶ

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್'ಗಳಿಗೆ ಆರೋಗ್ಯ ಇಲಾಖೆ...

Fact check | ಯತ್ನಾಳ್‌ ಹೇಳಿದ ಭಾರೀ ಸುಳ್ಳು: ಸಿಎಂ ವಿರುದ್ಧ ಆರೋಪ ಸುಳ್ಳೆಂಬುದಕ್ಕೆ ಇಲ್ಲಿದೆ ಸಾಕ್ಷಿ

ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು...

ಗಜೇಂದ್ರಗಡ | ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆ ಈಡೇರಿಸುವಂತೆ ಎಸ್ಎಫ್‌ಐ ಆಗ್ರಹ

ರಾಜ್ಯದಲ್ಲಿ 430ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು, ವಿವಿಧ ಬೇಡಿಕೆಗಳನ್ನು...

ಡಿಕೆಶಿ ವಿರುದ್ಧ ಸಿಬಿಐ ತನಿಖೆ ಅನುಮತಿ ಹಿಂಪಡೆದ ಸರ್ಕಾರ; ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ಯತ್ನಾಳ್

ಉಪಮುಖ್ಯಮಂತ್ರಿ‌ ಡಿಕೆ ಶಿವಕುಮಾರ್‌ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ‌...