ಚಾರ್‌ ಸೋ ಪಾರ್| ಗೆಲ್ಲುವ ಕ್ಷೇತ್ರಗಳ ಸಂಖ್ಯೆಯಲ್ಲ, ಪೆಟ್ರೋಲ್ ದರದ ಬಗ್ಗೆ ಮಾತನಾಡುತ್ತಿದ್ದಾರೆ: ಕನ್ಹಯ್ಯ ವ್ಯಂಗ್ಯ

Date:

ಲೋಕಸಭೆ ಚುನಾವಣೆಯ ಆರನೇ ಹಂತದ ಚುನಾವಣೆಯಲ್ಲಿ ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕನ್ಹಯ್ಯ ಕುಮಾರ್ ಬಿಜೆಪಿಯ ಚಾರ್‌ ಸೋ ಪಾರ್‌ (400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು) ಘೋಷಣೆಯನ್ನು ಲೇವಡಿ ಮಾಡಿದ್ದಾರೆ.

- Advertisement -

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕನ್ಹಯ್ಯ ಕುಮಾರ್, “ಬಿಜೆಪಿಗರು ಚಾರ್‌ ಸೋ ಪಾರ್ ಎಂದು ಹೇಳುವುದು ಅವರು ಗೆಲ್ಲುವ ಕ್ಷೇತ್ರಗಳ ಸಂಖ್ಯೆಯಲ್ಲ, ಅವರು ಪೆಟ್ರೋಲ್ ದರದ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇನ್ನು ಮತದಾನದ ಬಗ್ಗೆ ಮಾತನಾಡಿದ ಕನ್ಹಯ್ಯ “ಮತದಾನ ಆರಂಭವಾದ ಒಂದು ಗಂಟೆಯಲ್ಲೇ ಉತ್ತಮ ಉತ್ಸಾಹ ಕಂಡುಬರುತ್ತಿದೆ. ಭಾರೀ ಪ್ರಮಾಣದಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ. ಈ ಕ್ಷೇತ್ರದಲ್ಲಿ ಜನರು ಬದಲಾವಣೆಯನ್ನು ಬಯಸುತ್ತಾರೆ ಎಂಬುವುದರ ಪ್ರತೀಕ ಮತದಾನ ಪ್ರಮಾಣವಾಗಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| 58 ಕ್ಷೇತ್ರಗಳಲ್ಲಿ ಆರನೇ ಹಂತದ ಮತದಾನ ಆರಂಭ: ಕನ್ಹಯ್ಯ, ಸಂಬಿತ್ ಪಾತ್ರ ಕಣದಲ್ಲಿ

“ಆರಂಭದಲ್ಲಿ ಕೆಲವೆಡೆ ಇವಿಎಂ ಸಮಸ್ಯೆ ಕಾಣಿಸಿಕೊಂಡಿದೆ. ಕೆಲವು ಇವಿಎಂ ಮೆಷಿನ್‌ಗಳು ಕಾರ್ಯ ನಿರ್ವಹಿಸುತ್ತಿರಲಿಲ್ಲ. ಈ ಸಮಸ್ಯೆಯನ್ನು ಚುನಾವಣಾ ಆಯೋಗ ಶೀಘ್ರವೇ ಬಗೆಹರಿಸಲಿದೆ ಎಂಬ ಭರವಸೆಯಿದೆ” ಎಂದರು.

“ಪ್ರಜಾಪ್ರಭುತ್ವದ ಈ ಮಹಾಪರ್ವದಲ್ಲಿ ಜನರು ಅಧಿಕ ಸಂಖ್ಯೆಯಲ್ಲಿ ಭಾಗಿಯಾಗಲಿದ್ದಾರೆ ಮತ್ತು ಬದಲಾವಣೆಯಾಗಲಿದೆ ಎಂಬ ಭರವಸೆಯಿದೆ” ಎಂದರು.

ಇದನ್ನು ಓದಿದ್ದೀರಾ? ದೆಹಲಿ | ಬೆಂಬಲಿಗನ ನೆಪದಲ್ಲಿ ಬಂದು ಕನ್ಹಯ್ಯ ಕುಮಾರ್ ಮೇಲೆ ಹಲ್ಲೆಗೈದ ಬಿಜೆಪಿ ಕಾರ್ಯಕರ್ತ

ಇನ್ನು ಬಿಜೆಪಿ ಈಗಾಗಲೇ 300 ಕ್ಷೇತ್ರಗಳಲ್ಲಿ ಜಯ ಗಳಿಸಿದೆ ಎಂಬ ಬಿಜೆಪಿ ನಾಯಕರುಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ನಾಯಕ, “ಶುಭಾಶಯಗಳು, ಈಗಾಗಲೇ ಗೆದ್ದಿದ್ದರೆ ಮನೆಯಲ್ಲಿ ಕುಳಿತುಕೊಳ್ಳಲಿ. ಬೂತ್‌ಗಳ ಹೊರಗೆ ಟೇಬಲ್ ಹಾಕಿ ಸುಮ್ಮನೇ ಕೂರುವುದು ಯಾಕೆ” ಎಂದು ಲೇವಡಿ ಮಾಡಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಎಎಪಿ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ರಾಜ್ಯಸಭೆ ಚುನಾವಣೆ | ಬಿಜೆಪಿಯ 8 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕೇಂದ್ರ ಸಚಿವ ಹರ್ದೀಪ್‌ ಪುರಿ ಔಟ್‌

ಮುಂದಿನ ಅಕ್ಟೋಬರ್ 16ರಂದು ನಡೆಯಲಿರುವ ಉತ್ತರ ಪ್ರದೇಶ ರಾಜ್ಯಸಭಾ ಚುನಾವಣೆಗೆ ಬಿಜೆಪಿ...

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...