4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ : ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

2023-24ನೇ ಸಾಲಿನಲ್ಲಿ 4000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕಂಠೀರವ ಒಳಾoಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಇಂದು ವಿಶ್ವ ವಿಕಲಚೇತನರ ದಿನ. 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ 13,24,205 ವಿಕಲಚೇತನರಿದ್ದಾರೆ. ವಿಕಲಚೇತನರು ಸಮಾಜಕ್ಕೆ ಹೊರೆ ಅಲ್ಲ. ಅವರೂ ಕೂಡ ಬೇರೆಯವರಂತೆ ಈ ಸಮಾಜದಲ್ಲಿ ಎಲ್ಲ ಅವಕಾಶಗಳನ್ನು ಪಡೆದು ಉದ್ಯೋಗ, ಬದುಕಿಗೆ ಹಕ್ಕುಗಳನ್ನು ಪಡೆದಿದ್ದಾರೆ. ವಿಕಲಚೇತನರಿಗೆ ಶಿಕ್ಷಣ ಉದ್ಯೋಗಗಳಲ್ಲಿ ಸಮಾನ ಅವಕಾಶ ದೊರಕಿಸುವುದು ಸರ್ಕಾರದ ಕರ್ತವ್ಯ’ ಎಂದರು.

Advertisements

WhatsApp Image 2023 12 03 at 2.03.42 PM

‘ಇತ್ತೀಚೆಗೆ ನಡೆಸಲಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿದ್ದರು. ಉದ್ಯೋಗ, ಶಿಕ್ಷಣ ಹಾಗೂ ವಾಹನ ಖರೀದಿಗೆ ನೆರವು ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಂಧಪಟ್ಟ ಇಲಾಖೆಯು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

‘ಪ್ರಸಕ್ತ ಸಾಲಿನಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು 2 ಕೋಟಿ ವೆಚ್ಚದಲ್ಲಿ ಏಳು ಜಿಲ್ಲೆಗಳಲ್ಲಿ ನಿರ್ಮಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ವಿಕಲಚೇತನರ ಶೈಕ್ಷಣಿಕ, ವೈದ್ಯಕೀಯ, ಪುನರ್ವಸತಿ, ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿಗಾಗಿ 284.27ಕೋಟಿ ರೂ. ಇಡಲಾಗಿದೆ. ಮರಣ ಹೊಂದಿದ ವಿಕಲಚೇತನರಿಗೆ ಪರಿಹಾರವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ವಿಕಲಚೇತನರು ಕ್ರೀಡೆಯೂ ಸೇರಿದಂತೆ ಎಲ್ಲ ರಂಗಗಳಲ್ಲಿ ಅಪ್ರತಿಮ ಸಾಧನೆ ತೋರುತ್ತಿದ್ದಾರೆ. ಆದ್ದರಿಂದ ವಿಕಲಚೇತನರು ಸಮಾಜಕ್ಕೆ ಹೊರೆ ಎನ್ನುವ ಸಮಾಜದಲ್ಲಿರುವ ಭಾವನೆಯನ್ನು ದೂರ ಮಾಡಬೇಕಿದೆ’ ಎಂದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್. ಸಿದ್ದೇಶ್ವರ ಉಪಸ್ಥಿತರಿದ್ದರು.

WhatsApp Image 2023 12 03 at 12.41.57 PM

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X