ಮಧ್ಯಪ್ರದೇಶ | ಮತದಾರರ ಪಟ್ಟಿಯಿಂದ 42.74 ಲಕ್ಷ ಮತದಾರರ ಹೆಸರು ಡಿಲೀಟ್

Date:

ಮಧ್ಯಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಮೊದಲ ಹಂತವು ಮಂಗಳವಾರ ಪೂರ್ಣಗೊಂಡಿದ್ದು, 230 ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯಿಂದ 42.74 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ.

- Advertisement -

2003ರ ಮತದಾರರ ಪಟ್ಟಿಯಲ್ಲಿ ಪೋಷಕರು ಅಥವಾ ಅಜ್ಜ-ಅಜ್ಜಿಯರ ವಿವರಗಳು ಕಂಡುಬಂದಿಲ್ಲವಾದ್ದರಿಂದ ಒಟ್ಟು 8,65,832 ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳಲಾಗಿದೆ. ಪಟ್ಟಿಯಿಂದ ತೆಗೆದುಹಾಕಲಾದ 42.74 ಲಕ್ಷಕ್ಕೂ ಹೆಚ್ಚು ಮತದಾರರಲ್ಲಿ 19.19 ಲಕ್ಷ ಪುರುಷರು ಮತ್ತು 23.64 ಲಕ್ಷ ಮಹಿಳೆಯರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? Breaking News | ಆಳಂದ ಮತದಾರರ ಪಟ್ಟಿ ಅಕ್ರಮ; ತನಿಖೆಗೆ ಎಸ್‌ಐಟಿ ರಚನೆ ಸಾಧ್ಯತೆ

ಹೆಸರು ನೋಂದಾಯಿಸದ 8.65 ಲಕ್ಷಕ್ಕೂ ಹೆಚ್ಚು ಮತದಾರರಿಗೆ ನೋಟಿಸ್ ನೀಡಲಾಗುವುದು. 2026ರ ಫೆಬ್ರವರಿ 21ರಂದು ಪ್ರಕಟವಾಗುವ ಅಂತಿಮ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಸೇರಿಸಲು ಮತ್ತು 13 ದಾಖಲೆಗಳಲ್ಲಿ ಯಾವುದಾದರೂ ಒಂದರೊಂದಿಗೆ ವೈಯಕ್ತಿಕವಾಗಿ ಹಾಜರಾಗಲು ಅವರಿಗೆ ಒಂದು ವಾರದ ಸಮಯವನ್ನು ನೀಡಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಇನ್ನು ಈ ಬಗ್ಗೆ ಮಾತನಾಡಿದ ಮಧ್ಯಪ್ರದೇಶದ ಸಿಇಒ ಎಸ್‌ಕೆ ಝಾ, “31.51 ಲಕ್ಷ ಅಥವಾ 73% ಮತದಾರರು ಸ್ಥಳಾಂತರಗೊಂಡಿದ್ದಾರೆ, 8.46 ಲಕ್ಷ ಅಥವಾ 20% ಜನರು ಸಾವನ್ನಪ್ಪಿದ್ದಾರೆ ಮತ್ತು 2.77 ಲಕ್ಷ ಅಥವಾ 6% ಜನರು ನಕಲಿ ಮತದಾರರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಚುನಾವಣೆಗೂ ಮುನ್ನವೇ ಬಿಹಾರದಲ್ಲಿ ತರಾತುರಿಯಲ್ಲಿ ನಡೆಸಲಾದ ಸದ್ಯ 12 ರಾಜ್ಯಗಳಲ್ಲಿ ನಡೆಸಲಾಗುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ವಿರುದ್ಧ ಈಗಾಗಲೇ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದೆ. ಈ ಪ್ರಕ್ರಿಯೆಯ ಮೂಲಕ ದೊಡ್ಡ ಮಟ್ಟದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ದೂರಿದೆ. ಅದೂ ಮುಖ್ಯವಾಗಿ ಎಲ್ಲ ದಾಖಲೆಗಳು ಇರದ ದಲಿತರು, ಮಹಿಳೆಯರು ಮತ್ತು ವಲಸೆ ಕಾರ್ಮಿಕರಿಂದ ಮತದಾನದ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...