43 ಕೇಸ್‌ ವಿತ್‌ಡ್ರಾ, ಇವೆಲ್ಲ ಅಲ್ಪಸಂಖ್ಯಾತರಿಗೆ ಸೇರಿದ ಪ್ರಕರಣಗಳೇ: ಬಿಜೆಪಿಗೆ ಪರಮೇಶ್ವರ್‌ ಪ್ರಶ್ನೆ

Date:

Advertisements

ಹುಬ್ಬಳ್ಳಿ ಪ್ರಕರಣವನ್ನು ಮಾತ್ರ ಹಿಂಪಡೆದಿಲ್ಲ. ರೈತರು, ವಿದ್ಯಾರ್ಥಿಗಳು, ಸಾಮಾನ್ಯ ಜನರು ಕೈಗೊಂಡಿದ್ದ ಪ್ರತಿಭಟನೆಯ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾನೂನಿನ ಚೌಕಟ್ಟಿನಲ್ಲಿ ಹಿಂಪಡೆಯುವ ಪ್ರಕ್ರಿಯೆಯನ್ನು ಮಾಡಿದ್ದೇವೆ. ಕೋರ್ಟ್ ಒಪ್ಪಿದರೆ ವಾಪಸ್ ಆಗುತ್ತದೆ. ಇಲ್ಲವಾದರೆ ಕೇಸ್‌ಗಳು ಮುಂದುವರಿಯುತ್ತವೆ” ಎಂದರು.

“ನಮ್ಮ ಮುಂದೆ 56 ಕೇಸ್‌ಗಳು ಬಂದಿದ್ದವು. 43 ಕೇಸ್‌ಗಳನ್ನು ವಿತ್‌ಡ್ರಾ ಮಾಡಿದ್ದೇವೆ. ಇದರಲ್ಲಿ ಬರೀ ಅಲ್ಪಸಂಖ್ಯಾತರಿಗೆ ಸೇರಿದ ಪ್ರಕರಣಗಳಿವೆಯೇ? ರೈತರು, ವಿದ್ಯಾರ್ಥಿಗಳು, ಸಾಮಾನ್ಯ ಜನರು ಬೇರೆ ಬೇರೆ ಸಂದರ್ಭಗಳಲ್ಲಿ ಪ್ರತಿಭಟನೆ ಮಾಡಿರುವ ಪ್ರಕರಣಗಳಿವೆ. ಅವೆಲ್ಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಹುಬ್ಬಳ್ಳಿ ಪ್ರಕರಣವನ್ನು ಮಾತ್ರ ಹಿಂಪಡೆದಿದ್ದರೆ ಅಥವಾ 43 ಪ್ರಕರಣಗಳು ಅಲ್ಪಸಂಖ್ಯಾತರಿಗೆ ಸೇರಿರುವ ಪ್ರಕರಣಗಳಾಗಿದ್ದರೆ ಬಿಜೆಪಿಯವರ ಆರೋಪವನ್ನು ಒಪ್ಪಿಕೊಳ್ಳಬಹುದಿತ್ತು. ಆ ರೀತಿ ಮಾಡಲು ಬರುವುದಿಲ್ಲ. ಎಲ್ಲವನ್ನು ಸಮಾನ ದೃಷ್ಟಿಯಿಂದ ನೋಡಬೇಕಾಗುತ್ತದೆ” ಎಂದು ಹೇಳಿದರು.

Advertisements

“ಯಾವುದೇ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲು ಪ್ರಕ್ರಿಯೆ ಇದೆ. ಸುಳ್ಳು ಕೇಸ್ ದಾಖಲಿಸಿದ್ದಾರೆ, ಪೂರಕವಾದ ಸೆಕ್ಷನ್‌ಗಳನ್ನು ಹಾಕಿಲ್ಲ, ನಡೆದಿರುವ ಘಟನೆಯೇ ಬೇರೆ ಕೇಸ್ ದಾಖಲಿಸಿರುವುದೇ ಬೇರೆ ಎಂದು ಆರೋಪಿಸಿ ಮನವಿ ಕೊಟ್ಟಿರುತ್ತಾರೆ. ಇದನ್ನು ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿ ರಚಿಸಿರುತ್ತಾರೆ. ಸಾಮಾನ್ಯವಾಗಿ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಮಾಡಿರುತ್ತಾರೆ. ನಮಗೆ ಬರುವ ಮನವಿಗಳನ್ನು ಇಲಾಖೆಗೆ ಕಳುಹಿಸುತ್ತೇವೆ‌. ಅವರು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಸಾಕ್ಷ್ಯ ಸಂಗ್ರಹಣೆಯಲ್ಲಿ ಆದ‌ ಲೋಪದೋಷಗಳನ್ನು ಪರಿಶೀಲಿಸಿ ಸಚಿವ ಸಂಪುಟ ಉಪಸಮಿತಿ ಮುಂದೆ ತರುತ್ತಾರೆ‌” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಚ್‌ಡಿಕೆ V/s ಎಡಿಜಿಪಿ ಚಂದ್ರಶೇಖರ್‌- ಇದು ಸಾಮಾನ್ಯ ವಿದ್ಯಮಾನವಲ್ಲ

“ಕ್ಯಾಬಿನೆಟ್ ಉಪಸಮಿತಿಯಲ್ಲಿ ಕೇಸ್‌ಗಳ ಬಗ್ಗೆ ಚರ್ಚಿಸಲಾಗುತ್ತಿದೆ. ಹುಬ್ಬಳ್ಳಿ ಕೇಸ್‌ನಲ್ಲಿಯೂ ಮನವಿ ಕೊಟ್ಟಿದ್ದರು. ಅಷ್ಟೊಂದು ಜನರ ಮೇಲೆ ಕೇಸ್ ದಾಖಲಿಸುವ ಅಗತ್ಯ ಇಲ್ಲ‌ ಎಂಬುದು ಚರ್ಚೆಯಾಗಿದೆ. ಕ್ಯಾಬಿನೆಟ್‌ನಲ್ಲಿ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದನ್ನು ಕೋರ್ಟ್‌ಗೆ ತಿಳಿಸಬೇಕು. ಕೋರ್ಟ್ ಒಪ್ಪಿದರೆ ಕೇಸ್ ವಾಪಸ್ ತೆಗೆದುಕೊಳ್ಳಲು ಸಾಧ್ಯ, ಇಲ್ಲವಾದರೆ ಇಲ್ಲ. ಈ ಎಲ್ಲ ಹಂತದಲ್ಲೂ ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಯಾರೋ ಸಮೋಟೋ ಹೇಳಿದ್ರು ಅಂತ ವಾಪಸ್ ಪಡೆಯಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಬಿಜೆಪಿಯವರು ಆಡಳಿತದಲ್ಲಿದ್ದಾಗಲೂ ಸಹ ಇಂತಹ ಪ್ರಕರಣಗಳಲ್ಲಿ ಬೇಕಾದಷ್ಟು ಮಾಡಿದ್ದಾರೆ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿಯೂ ಮಾಡಿದ್ದಾರೆ‌.‌ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿನಾಥ್ ಅವರ ವಿರುದ್ಧ ಕೇಸ್‌ಗಳಿದ್ದವು. ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡೇ ಕೇಸ್‌ಗಳನ್ನು ವಾಪಸ್ ಪಡೆದಿದ್ದಾರೆ. ಬಿಜೆಪಿಯವರು ಯಾರ ಮೇಲೆ ಆಪಾದನೆ ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದರು.

“ನಮಗೆ ಬರುವ ಮನವಿಗಳನ್ನು ಕಣ್ಮುಚ್ಚಿಕೊಂಡು ವಿತ್‌ಡ್ರಾ ಅಂತ ಫೈಲ್‌ ಮೇಲೆ ಬರೆದುಕೊಡಲಾಗುವುದಿಲ್ಲ. ನಾನೊಬ್ಬನೇ ಆಗಲಿ ಅಥವಾ ಮುಖ್ಯಮಂತ್ರಿಯವರಾಗಲಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಬಿಜೆಪಿಯವರು ಎಲ್ಲದರಲ್ಲೂ ರಾಜಕೀಯ ಮಾಡಲು ಹೊರಟಿದ್ದು, ಇದು ಸರಿಯಲ್ಲ. ವಿಪಕ್ಷದವರು ಆಡಳಿತದ ವಿಚಾರವಾಗಿ ಸಕರಾತ್ಮಕವಾಗಿ ವಿರೋಧಿಸಿದರೆ ಒಪ್ಪಿಕೊಳ್ಳುತ್ತೇವೆ. ನಾವು ವಿಪಕ್ಷದಲ್ಲಿದ್ದಾಗ ಸಹ ಅನೇಕ ಸಲಹೆಗಳನ್ನು ಕೊಟ್ಟಿದ್ದೇವೆ. ಅವರು ನಮಗೆ ಸಲಹೆಗಳನ್ನು ನೀಡಲಿ‌” ಎಂದರು.

ರಾಹುಲ್ ಖರ್ಗೆ ಅವರು ಸಿದ್ಧಾರ್ಥ ಟ್ರಸ್ಟ್‌‌ ನಿವೇಶನವನ್ನು ವಾಪಸ್ ನೀಡಿರುವ ಕುರಿತ ಪ್ರತಿಕ್ರಿಯಿಸಿ, “ಯಾವುದೇ ಕಾನೂನು ಉಲ್ಲಂಘನೆ ಮಾಡದೆ ನಿವೇಶನ‌ ತೆಗೆದುಕೊಂಡಿದ್ದೇವೆ. ಆಪಾದನೆ ಮಾಡುತ್ತಿರುವುದರಿಂದ ಬೇಡ ಎಂದು ನಿವೇಶ ವಾಪಸ್ ನೀಡಿದ್ದಾರೆ. ಕಾಮಾಲೆ ಕಣ್ಣಿಗೆ ಕಾಣಿಸುವುದೆಲ್ಲ ಹಳದಿ ಎಂಬಂತೆ, ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ಎಲ್ಲವನ್ನು ನೋಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು‌.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X