ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಹೆಚ್ಚುವರಿ ಸೇವೆಗಳಿಗೆ ರಾಜ್ಯ ಸರ್ಕಾರದಿಂದ ಚಾಲನೆ

Date:

  • ಅಟಲ್‌ಜಿ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸೇವೆಗಳು ಇನ್ಮುಂದೆ ಬಾಪೂಜಿ ಸೇವಾಕೇಂದ್ರಗಳಲ್ಲಿ
  • ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಗಳ ಮೂಲಕವೇ ಸೇವೆ : ಸಚಿವ ಪ್ರಿಯಾಂಕ್‌ ಖರ್ಗೆ

ಗ್ರಾಮೀಣ ಜನತೆಗೆ ಅವಶ್ಯವಿರುವ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು 2016ರಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಆರಂಭಿಸಿದ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಈಗಾಗಲೆ ಒದಗಿಸುತ್ತಿರುವ 28 ಸೇವೆಗಳ ಜೊತೆಗೆ ನಾಡಕಚೇರಿಗಳ ಅಟಲ್‌ಜಿ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ ಇನ್ನೂ 44 ಸೇವೆಗಳನ್ನು ಪಡೆದುಕೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಅನುವು ಮಾಡಿಕೊಟ್ಟಿದ್ದು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಈ ಸೇವೆಗಳನ್ನು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದ್ದಾರೆ.

- Advertisement -

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನುಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳನ್ನು ಪಡೆಯಬಹುದಿದ್ದು, ಆಧಾರ್‌ ಸೇವೆಗಳ ಸೌಲಭ್ಯವನ್ನು ಹೊಂದಬಹುದಾಗಿದೆ. ಪ್ರತಿಯೊಂದು ಹೋಬಳಿಯು 6-7 ಗ್ರಾಮ ಪಂಚಾಯತಿಗಳನ್ನು ಹೊಂದಿದ್ದು, ಈ ವ್ಯಾಪ್ತಿಯ 20-50 ಸಾವಿರ ಜನರು ವಿವಿಧ ಸರ್ಕಾರಿ ಸೇವೆಗಳನ್ನು ಪಡೆಯಲು ಹೋಬಳಿ ಕೇಂದ್ರಕ್ಕೆ ಹೋಗಬೇಕಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...
BAPUJI CENTER

ಈ ಸಮಸ್ಯೆಗೆ ಪರಿಹಾರವಾಗಿ ನಾಡಕಚೇರಿಗಳ ಅಟಲ್‌ಜಿ ಜನಸ್ನೇಹಿ ನಿರ್ದೇಶನಾಲಯದಡಿ ಸಿಗುತ್ತಿದ್ದ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸ ಸ್ಥಳ ಪ್ರಮಾಣ ಪತ್ರ ಗಳಂತಹ ಪ್ರಮುಖ ಸೇವೆಗಳನ್ನು ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಗಳ ಮೂಲಕವೇ ನೀಡಲು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೂತನವಾಗಿ ಒದಗಿಸಲು ಸರ್ಕಾರವು ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಬಾಪೂಜಿ ಸೇವಾ ಕೇಂದ್ರಗಳಲ್ಲಿ ಲಭ್ಯವಿರುವ ಸೇವೆಗಳು
ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಪ್ರವರ್ಗ-ಎ), ಜಾತಿ ಪ್ರಮಾಣ ಪತ್ರ (ಅ.ಜಾ/ಅ.ಪಂ), ಹಿಂದುಳಿದ ವರ್ಗ ಪ್ರ.ಪತ್ರ (ಕೇ.ಸ), ವಾಸ ಸ್ಥಳ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಗೇಣಿರಹಿತ ದೃಢೀಕರಣ ಪತ್ರ, ವಿಧವೆ ದೃಢೀಕರಣ ಪತ್ರ, ಜೀವಂತ ದೃಡೀಕರಣ ಪತ್ರ, ವ್ಯವಸಾಯಗಾರರ ಕುಟುಂಬದ ದೃಡೀಕರಣ ಪತ್ರ, ಮರುವಿವಾಹವಾಗದಿರುವ ಬಗ್ಗೆ ದೃಡೀಕರಣ ಪತ್ರ, ಜಮೀನು ಇಲ್ಲದಿರುವ ಬಗ್ಗೆ ದೃಡೀಕರಣ ಪತ್ರ, ಮೃತರ ಕುಟುಂಬ ಸದಸ್ಯರ ದೃಡೀಕರಣ ಪತ್ರ, ನಿರುದ್ಯೋಗಿ ದೃಢಿಕರಣ ಪತ್ರ, ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ, ವ್ಯವಸಾಯಗಾರ ದೃಡಿಕರಣ ಪತ್ರ, ಸಣ್ಣ /ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಮೇಲುಸ್ಥರಕ್ಕೆ ಸೇರಿಲ್ಲವೆಂದು ದೃಢಿಕರಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ, ಬೋನಫೈಡ್ ದೃಡಿಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಆದಾಯ ದೃಢಿಕರಣ ಪತ್ರ (ಉದ್ಯೋಗದ ಸಲುವಾಗಿ ಮಾತ್ರ), ಆದಾಯ ದೃಢಿಕರಣ ಪತ್ರ (ಅನುಕಂಪದ ಆದಾರದ ನೇಮಕಾತಿಗೆ), ಕುಟುಂಬ ವಂಶವೃಕ್ಷ ದೃಢಿಕರಣ ಪತ್ರ, ಹೈದ್ರಾಬಾದ್-ಕರ್ನಾಟಕ ವಿಭಾಗ/ವಲಯದ ವಾಸಸ್ಥಳ ದೃಢೀಕರಣ ಪತ್ರ, ಬೆಳೆ ದೃಡೀಕರಣ ಪತ್ರ, ಅಲ್ಪಸಂಖ್ಯಾತ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಆರ್ಯ ವೈಶ್ಯ), ಆದಾಯ ಹಾಗೂ ಆಸ್ತಿ ಪ್ರಮಾಣಪತ್ರ (EWS), ಜಾತಿ ಪ್ರಮಾಣಪತ್ರ (SC/ST-Migrant), ಅಂಗವಿಕಲ ಪೋಷಣಾ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ರಾಷ್ಟ್ರೀಯ ಕುಟುಂಬ ಕ್ಷೇಮ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಮೈತ್ರಿ, ಮನಸ್ವಿನಿ, ಅಂತ್ಯ ಸಂಸ್ಕಾರ ಯೋಜನೆ, ಆಸಿಡ್ ದಾಳಿಗೊಳಗಾದ ಮಹಿಳೆಯ ವೇತನ, ರೈತರ ವಿಧವಾ ವೇತನ ಮತ್ತು ಎಂಡೋಸಲ್ಫಾನ್ ವಿಕ್ಟಿಮ್ ಪೆನ್ಷನ್.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರ್ಮಿಕರನ್ನು ಮರೆತ ಡೆಮಾಕ್ರಟ್ ಪಾರ್ಟಿ: ಮೂಲಭೂತ ಬದಲಾವಣೆಗೆ ಬರ್ನಿ ಸ್ಯಾಂಡರ್ಸ್ ಖಡಕ್ ತಾಕೀತು

ಅಮೆರಿಕದ ಮಧ್ಯಂತರ ಚುನಾವಣೆಗಳಲ್ಲಿ ಡೆಮಾಕ್ರಟ್ ಪಕ್ಷ ಭಾರೀ ಜಯ ಗಳಿಸಿದೆಯಾದರೂ ಆತ್ಮನಿರೀಕ್ಷಣೆ...

ಹಾಲು, ಬಸ್ ದರ ಏರಿಕೆ; ಕಾಂಗ್ರೆಸ್ ಸರ್ಕಾರದ ಸರಣಿ ಎಡವಟ್ಟು!

ರಾಜ್ಯದಲ್ಲಿ ನವೆಂಬರ್ ತಿಂಗಳು ಜನಸಾಮಾನ್ಯರ ದೈನಂದಿನ ಬದುಕಿನ ಮೇಲಿನ ಭಾರೀ ಆರ್ಥಿಕ...

2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯತ್ತ ನಮ್ಮ ರಾಜ್ಯ ಸಾಗುತ್ತಿದೆ: ಡಿ ಕೆ ಶಿವಕುಮಾರ್

"ಕರ್ನಾಟಕವು 2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯತ್ತ ಸಾಗುತ್ತಿದೆ....

ಮಣಿಪುರ | ಗುಂಪುಗಳ ನಡುವೆ ಭಾರಿ ಗುಂಡಿನ ಚಕಮಕಿ: ಮೂವರು ಸಾವು

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಮತ್ತೆ ಮೂವರು ಸಾವನ್ನಪ್ಪಿದ್ದಾರೆ. ನೋನಿ ಜಿಲ್ಲೆಯಲ್ಲಿ ಪೈಪೋಟಿ...