ರಾಜ್ಯದಲ್ಲಿ 5.37 ಕೋಟಿ ಮತದಾರರು: ಅಂತಿಮ ಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

Date:

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ್ದು, ರಾಜ್ಯದಲ್ಲಿ 5.37 ಕೋಟಿ ಮತದಾರರು ಇರುವುದಾಗಿ ತಿಳಿಸಿದೆ.

ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ-2024 ಬಿಡುಗಡೆಯಾಗಿದ್ದು, 17,937 ಶತಯುಷಿಗಳು(ನೂರು ವರ್ಷ ತುಂಬಿರುವ) ಸೇರಿದಂತೆ ಬರೋಬ್ಬರಿ 5.37 ಕೋಟಿ ಮತದಾರರು ಇದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಬೆಂಗಳೂರಿನ ಶೇಷಾದ್ರಿ ರಸ್ತೆಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಬಿಡುಗಡೆಗೊಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, “ಕರಡು ಮತದಾರರ ಪಟ್ಟಿ -2024 ರ ಪ್ರಕಾರ, ಒಟ್ಟು ಸಾಮಾನ್ಯ ಮತದಾರರ ಸಂಖ್ಯೆ 5,33,77,162 ಆಗಿತ್ತು. ಇದರಲ್ಲಿ 2,68,02,838 ಪುರುಷ ಮತದಾರರು, 2,65,69,428 ಮಹಿಳಾ ಮತದಾರರು ಹಾಗೂ 4,896 ಮಂದಿ ಮತದಾರರು ಸೇರಿದ್ದರು. ಆದರೆ, ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು ಸಾಮಾನ್ಯ ಮತದಾರರ ಸಂಖ್ಯೆ 5,37,85,815 ಹೆಚ್ಚಳವಾಗಿದ್ದು, ಇದರಲ್ಲಿ 2,69,33,750 ಪುರುಷ ಮತದಾರರು, 2,68,47,145 ಮಹಿಳಾ ಮತದಾರರು ಮತ್ತು 4,920 ಇತರೆ ಮತದಾರರು ಸೇರಿದ್ದಾರೆ ಎಂದು ಮಾಹಿತಿ ನೀಡಿದರು.

“ಕರಡು ಪಟ್ಟಿಗೆ ಹೋಲಿಸಿದರೆ ಒಟ್ಟು ಮತದಾರರಲ್ಲಿ ನಿವ್ವಳ ಹೆಚ್ಚಳವು 4,08,653 ಆಗಿದ್ದು, ಈ ಪೈಕಿ ಮಹಿಳಾ ಮತದಾರರಲ್ಲಿ ಗಮನಾರ್ಹವಾಗಿ 2,77,717 ರಷ್ಟು ಮತದಾರರು ಸಂಖ್ಯೆ ಹೆಚ್ಚಳವಾಗಿದ್ದಾರೆ. ಪುರುಷ ಮತದಾರರಲ್ಲಿ 1,30,912 ಮತ್ತು ಇತರೆ ಮತದಾರರಲ್ಲಿ 24 ಮತದಾರರ ಸಂಖ್ಯೆ ಹೆಚ್ಚಳವಾಗಿದೆ” ಎಂದು ಮನೋಜ್ ಕುಮಾರ್ ಮೀನಾ ಮಾಹಿತಿ ಹಂಚಿಕೊಂಡರು.

ಇದನ್ನು ಓದಿದ್ದೀರಾ? ಮೈಸೂರು | ರಾಮಮಂದಿರ ಗುದ್ದಲಿ ಪೂಜೆಗೆ ಆಗಮಿಸಿದ್ದ ಪ್ರತಾಪ್ ಸಿಂಹಗೆ ದಲಿತರ ಘೇರಾವ್; ವಾಪಸ್ ತೆರಳಿದ ಸಂಸದ!

224 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವು ಅತಿ ಹೆಚ್ಚು ಅಂದರೆ 7,17,201 ಮತದಾರರನ್ನು ಹೊಂದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 1,67,556 ಮತದಾರರಿದ್ದಾರೆ ಎಂದು ಇದೇ ವೇಳೆ ಮುಖ್ಯ ಚುನಾವಣಾ ಆಯುಕ್ತರು ಉಲ್ಲೇಖಿಸಿದರು.

ರಾಜ್ಯದಲ್ಲಿರುವ ಒಟ್ಟು ಮತದಾರರ ವಿವರಗಳು ಹೀಗಿದೆ:

 • ಒಟ್ಟು ಮತದಾರರ ಸಂಖ್ಯೆ: 5,37,85,815
 • ಪುರುಷರ ಸಂಖ್ಯೆ: 2,69,33,750
 • ಮಹಿಳೆಯರ ಸಂಖ್ಯೆ: 2,68,47,145
 • ಇತರೆ: 4,920
 • ಸೇವಾ ಮತದಾರರ ಸಂಖ್ಯೆ: 46,501
 • ಯುವ ಮತದಾರರ ಸಂಖ್ಯೆ: 3,88,527
 • ವಿದೇಶದಲ್ಲಿರುವ ಮತದಾರರ ಸಂಖ್ಯೆ: 3,164
 • 80 ವರ್ಷ ದಾಟಿರುವ ಮತದಾರರ ಸಂಖ್ಯೆ: 12,71,862
 • ಶತಾಯುಷಿ ಅಂದರೆ 100ಕ್ಕೂ ಹೆಚ್ಚು ವರ್ಷ ತುಂಬಿರುವವರ ಸಂಖ್ಯೆ: 17,937
 • ವಿಕಲ ಚೇತನ ಮತದಾರರ ಸಂಖ್ಯೆ: 5,62,890
 • ಮತದಾನ ಕೇಂದ್ರಗಳ ಸಂಖ್ಯೆ: 58,834
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿ!

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂಬ ಸುದ್ದಿಗಳು ಬರುತ್ತಿರುವ ನಡುವೆಯೇ...

ಜಪ್ತಿಯಾದ 2 ಕೋಟಿ ರೂ. ಬಿಜೆಪಿಗೆ ವಾಪಸ್‌; ಅಧಿಕಾರಿಗಳ ಮೇಲೆ ಕೃಷ್ಣ ಬೈರೇಗೌಡ ಗರಂ

"ನಾವೂ ಹೀಗೆ ಹಣದ ಮೂಲಕ ವಹಿವಾಟು ನಡೆಸಿದರೆ ನಮ್ಮ ಎಲ್ಲಾ ವಹಿವಾಟನ್ನು...

ಬೆಂಗಳೂರು | ಬಿಜೆಪಿಗೆ ಸೇರಿದ 2 ಕೋಟಿ ಹಣವನ್ನು ವಶಪಡಿಸಿಕೊಂಡ ಚುನಾವಣಾಧಿಕಾರಿಗಳು: ಎಫ್‌ಐಆರ್

ಬಿಜೆಪಿಗೆ ಸೇರಿದ ಸುಮಾರು ಎರಡು ಕೋಟಿಯಷ್ಟು ನಗದನ್ನು ಕಾರೊಂದರಲ್ಲಿ ಸಾಗಿಸುತ್ತಿದ್ದ ವೇಳೆ...