ಕಾಂಗ್ರೆಸ್‌ ಶಾಸಕರಿಗೆ ₹50 ಕೋಟಿ ಆಮಿಷ | ರಾಜ್ಯದ ಜನತೆಗೆ ಸಿಎಂ ಸತ್ಯ ತಿಳಿಸಲಿ: ವಿಜಯೇಂದ್ರ ಆಗ್ರಹ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ. ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ. ನಿಮ್ಮ ಈ ಹೇಳಿಕೆ ಕಾಂಗ್ರೆಸ್‌ ಶಾಸಕರುಗಳನ್ನು ಅಂಕೆಯಲಿಟ್ಟುಕೊಳ್ಳಲು ಹಾಗೂ ನಿಮ್ಮನ್ನು ಸುತ್ತುವರೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ” ಎಂದಿದ್ದಾರೆ.

“ಸುಳ್ಳು, ಭಂಡತನ, ಕಪೋಲ ಕಲ್ಪಿತ ಸುದ್ದಿಗಳನ್ನು ಹರಿಬಿಡುವುದು ನಿಮ್ಮ ಹಾಗೂ ನಿಮ್ಮ ಪಕ್ಷದ ನಿತ್ಯ ಮಂತ್ರವಾಗಿದೆ. ನೀವು ನಡೆಸಿರುವ ಸರಣೀ ಹಗರಣಗಳ ಹಿನ್ನೆಲೆಯ ಉರುಳು ಬಿಗಿಯಾಗುತ್ತಿರುವಷ್ಟೂ ನಿದ್ದೆಗೆಡುತ್ತಿರುವ ನಿಮ್ಮ ಮನಸ್ಸು ಅಸ್ಥಿರಗೊಂಡಿದೆ ಈ ಹಿನ್ನಲೆಯಲ್ಲಿ ಪ್ರಚಲಿತ ಬೆಳವಣಿಗೆಯನ್ನು ವಿಚಲಿತಗೊಳಿಸುವುದು ಹೇಗೆ ಎಂಬುದರತ್ತಲೇ ನೀವು ನಿಗಾ ಇಟ್ಟಿರುವಂತೆ ಕಾಣುತ್ತಿದೆ” ಎಂದು ಕುಟುಕಿದ್ದಾರೆ.

Advertisements

“ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, ₹50 ಕೋಟಿ ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಪುಡಾರಿಗಳು ನೀಡುವ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೆ” ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನ 50 ಶಾಸಕರಿಗೆ ಬಿಜೆಪಿಯಿಂದ ತಲಾ 50 ಕೋಟಿ ರೂ. ಆಫರ್

“ಒಂದು ಕಡೆ ನಿಮ್ಮ ಪುತ್ರ ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಿಸುವ ಆರೋಪ ಮಾಡಿದರೆ, ಮತ್ತೊಂದೆಡೆ ನೀವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಹತಾಶೆಯಿಂದ ವರ್ತಿಸುತ್ತಿದ್ದೀರಿ. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಅಬ್ಬರಿಸುತ್ತಿದ್ದೀರಿ ಆದರೆ ವಾಸ್ತವ ಸಂಗತಿ ಏನೆಂದರೆ, ಕರ್ನಾಟಕದ ಜನತೆ ನಿಮ್ಮಂಥ ಭ್ರಷ್ಟ ಮುಖ್ಯಮಂತ್ರಿ ಇನ್ನೂ ಅಧಿಕಾರದಿಂದ ಕೆಳಗಿಳಿಯದೇ ಭಂಡತನ ಪ್ರದರ್ಶಿಸುತ್ತಿದ್ದಾರಲ್ಲ ಎಂದು ರಸ್ತೆಯಲ್ಲಿ ನಿಂತು ಮಾತನಾಡಿಕೊಳ್ಳುತ್ತಿದ್ದಾರೆ,
ನಿಮ್ಮ ಗುಪ್ತಚರ ಇಲಾಖೆ ಈ ವಿಷಯವನ್ನು ನಿಮಗೆ ಮುಟ್ಟಿಸಿರಲೇಬೇಕು. ಆದ್ದರಿಂದಲೇ ನೀವು ಇಷ್ಟೊಂದು ವಿಚಲಿತರಾದಂತೆ ಕಪೋಲ ಕಲ್ಪಿತ ಕಥೆಗಳನ್ನು ಸೃಷ್ಟಿಸಿಕೊಂಡು ಬಡ ಬಡಿಸುತ್ತಿದ್ದೀರಿ” ಎಂದು ವ್ಯಂಗ್ಯವಾಡಿದ್ದಾರೆ.

“ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು 50 ಕೋಟಿ ಆಮಿಷದ ಗಂಭೀರ ಆರೋಪ ಮಾಡಿರುವ ಹಿನ್ನಲೆಯಲ್ಲಿ ಸರ್ಕಾರ ಬೀಳಿಸಲು ಸಾವಿರಾರು ಕೋಟಿ ಬಂಡವಾಳ ಹೂಡಲು ತಯಾರಾಗಿರುವವರು ಯಾರು? ಎಂಬುದು ಬಹಿರಂಗವಾಗಬೇಕಿದೆ ಈ ನಿಟ್ಟಿನಲ್ಲಿ ಇ.ಡಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕೂಡಲೇ ತನಿಖೆ ನಡೆಸುವುದು ತುರ್ತು ಅಗತ್ಯವಿದೆ. ರಾಜ್ಯದ ಜನತೆಗೆ ಸತ್ಯ ತಿಳಿಯಬೇಕಿದೆ” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸಿದ್ದರಾಮಯ್ಯನವರು ಹೇಳುವುದು ಒಂದೆಡೆ ಇರಲಿ,, ನಿಮ್ಮ ಪಕ್ಷದ ಯತ್ನಾಳ್ ಸಹ ಹೇಳಿದ್ದಾರೆ,, ಸಿದ್ದರಾಮಯ್ಯ ಸರ್ಕಾರ ಬೀಳಿಸಲು ಒಂದು ಸಾವಿರ ಕೋಟಿ ರೇಡಿ ಇದೆಯಂದು,,ಇದ್ದರೂ ಇರಬಹುದು,, ಇಲೆಕ್ಟೋರಲ್ ಬಾಂಡ್ ಮುಖಾಂತರ ಸಾವಿರಾರು ಕೋಟಿ ದೇಣಿಗೆ ಬಂದಿದೆಯಲ್ವಾ,, ಅದನ್ನು ಇಂಥಾ ಪವಿತ್ರ ಕೆಲಸಕ್ಕೆ ಉಪಯೋಗಿಸಬಹುದು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X