2023ರ ಸರ್ಕಾರಿ ಆದೇಶದಂತೆ ವಿದ್ಯಾರ್ಥಿಗಳಿಂದ 50 ರೂ. ಸಂಗ್ರಹ; ಶಾಲಾ ಪರೀಕ್ಷೆ-ಮೌಲ್ಯನಿರ್ಣಯ ಮಂಡಳಿ ಸ್ಪಷ್ಟನೆ

Date:

10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ಪರೀಕ್ಷೆಗೆ ತಗಲುವ ವೆಚ್ಚ 50 ರೂ.ಗಳನ್ನು ರಾಜ್ಯ ಕಾಂಗ್ರೆಸ್ ಪ್ರತಿ ವಿದ್ಯಾರ್ಥಿಯಿಂದ ಶಾಲಾ ಹಂತದಲ್ಲೇ ಸಂಗ್ರಹಿಸುತ್ತಿದೆ ಎಂಬ ಆಕ್ಷೇಪಣೆಗಳು ವ್ಯಕ್ತವಾದ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟೀಕರಣ ನೀಡಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, “ಫೆಬ್ರವರಿ 2023 ರಲ್ಲಿ ಈ ಆದೇಶವಾಗಿದ್ದು, ಅದೇ ರೀತಿ ಈ ಸಾಲಿನಲ್ಲಿಯೂ ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆಗೂ ಕೂಡ ಪ್ರತಿ ವಿದ್ಯಾರ್ಥಿಯಿಂದ 50 ರೂ.ಗಳನ್ನು ಶಾಲಾ ಹಂತದಲ್ಲಿ ಸಂಗ್ರಹ ಮಾಡಿ ಪರೀಕ್ಷಾ ವೆಚ್ಚ ಭರಿಸಲು ಕ್ರಮವಹಿಸಲಾಗುತ್ತಿದೆ” ಎಂದಿದೆ.

“26-02-2024 ರಿಂದ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ಪರೀಕ್ಷೆಗೆ ತಗಲುವ ವೆಚ್ಚದ 50 ರೂ.ಗಳನ್ನು ಪ್ರತಿ ವಿದ್ಯಾರ್ಥಿಯಿಂದ ಶಾಲಾ ಹಂತದಲ್ಲಿ ಸಂಗ್ರಹಿಸುತ್ತಿರುವ ಬಗ್ಗೆ ಆಕ್ಷೇಪಣೆಗಳು ವ್ಯಕ್ತವಾಗಿವೆ. ಆದರೆ, ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಕಳೆದ 4 ವರ್ಷಗಳಿಂದಲೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ ನಡೆಸಲಾಗುತ್ತಿದೆ. ಈ ಸಂಬಂಧ 2022-23ನೇ ಸಾಲಿನ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ಪ್ರತಿ ವಿದ್ಯಾರ್ಥಿಯಿಂದ 50 ರೂ. ಸಂಗ್ರಹಿಸಲು ಸರ್ಕಾರಿ ಆದೇಶ ಸಂಖ್ಯೆ:ಇಪಿ 197 ಎಸ್‌ಎಲ್‌ಬಿ 2021, ಬೆಂಗಳೂರು ದಿನಾಂಕ:17ನೇ ಫೆಬ್ರವರಿ 2023 ರಲ್ಲಿ ಆದೇಶವಾಗಿರುತ್ತದೆ. ಆ ಪ್ರಕಾರ ಸಂಗ್ರಹಿಸುತ್ತಿದ್ದೇವೆ” ಎಂದು ಸ್ಪಷ್ಟೀಕರಣ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ಕುಮಾರಸ್ವಾಮಿ ಟೀಕೆ

“ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ” ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದ್ದರು.

“ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ. ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್‌ ಸರಕಾರದ ಆಡಳಿತ ಅದೆಷ್ಟು ಅದಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ” ಎಂದಿದ್ದರು.

ಈ ಆದೇಶ ಫೆಬ್ರವರಿ 2023ರಲ್ಲಿಯೇ ಹೊರಬಿದ್ದಿತ್ತು. ಆಗ ಬಿಜೆಪಿ ಸರ್ಕಾರವಿತ್ತು ಎಂಬುದನ್ನು ಕುಮಾರಸ್ವಾಮಿಯವರು ಅರಿತು, ಮಾತನಾಡಿದ್ದರೆ ಅವರ ಮಾತಿಗೆ ತೂಕವಿರುತ್ತಿತ್ತು ಎಂಬುದು ಕೆಲ ಕಾಂಗ್ರೆಸ್ಸಿಗರ ವಾದ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮಾಜಿ ಜಾತ್ಯತೀತ ಮಾಜಿ ಮುಖ್ಯಮಂತ್ರಿ ಕುಮಾರಣ್ಣ ಬಹುಶಃ ದಿಲ್ಲಿ ಬಾಸ್ ನಿಂದ ಕರ್ನಾಟಕ ಮತ್ತು ಕರ್ನಾಟಕ ಸರ್ಕಾರದ ವಿರುದ್ಧ,, ಗುತ್ತಿಗೆ ಪಡೆದಿರುವಂತೆ ಸತ್ಯ ತಿಳಿಯದೆ ವರ್ತಿಸಿ ಅಪಹಾಸ್ಯಕ್ಕೆ ಗುರಿಯಾಗುವರು,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್,...

ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲು; ಕ್ಷಮೆ ಕೇಳಿದ ಶಫಿ

ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ನಡುವಿನ ಗಲಾಟೆ...

ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿಎಂ ಸಿದ್ದರಾಮಯ್ಯ

ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್...