50% ತೆರಿಗೆ | ಟ್ರಂಪ್‌ಗೆ ಸ್ವಿಟ್ಜರ್‌ಲ್ಯಾಂಡ್‌ ಜನರ ‘ಮಿಡ್ಲ್ ಫಿಂಗರ್ ಸೆಲ್ಯೂಟ್‌’; ಆದರೆ, ಭಾರತದಲ್ಲಿ…

Date:

ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು 50% ತೆರಿಗೆ ವಿಧಿಸಿದ್ದಾರೆ. ರಷ್ಯಾದ ತೈಲವನ್ನು ಭಾರತ ಖರೀದಿ ಮಾಡುತ್ತಿರುವ ಕಾರಣಕ್ಕಾಗಿ ಭಾರತದ ಮೇಲೆ ಭಾರೀ ತೆರಿಗೆ ವಿಧಿಸಿರುವುದಾಗಿ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್‌ ಹೇರಿರುವ ತೆರಿಗೆ ಮತ್ತು ಭಾರತದ ಮೌನದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೂ, ಟ್ರಂಪ್ ಕ್ರಮವನ್ನು ಪ್ರಧಾನಿ ಮೋದಿ ಖಂಡಿಸಿಲ್ಲ. ತೆರಿಗೆಯನ್ನು ಕಡಿತಗೊಳಿಸುವ ದ್ವಿಪಕ್ಷೀಯ ಮಾತುಕತೆಗೂ ಒತ್ತಾಯಿಸಿಲ್ಲ. ಇಂತಹ ಸಂದರ್ಭದಲ್ಲಿ, ಟ್ರಂಪ್ ಸುಂಕದ ವಿರುದ್ಧ ಭಾರೀ ಹೋರಾಟ ನಡೆಸಿದ್ದ ಸ್ವಿಟ್ಜರ್‌ಲ್ಯಾಂಡ್‌ ಜನರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

- Advertisement -

ಟ್ರಂಪ್ ಅವರು 2ನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಮಾರ್ಚ್‌ ತಿಂಗಳಿನಲ್ಲಿ ಮೊದಲ ತೆರಿಗೆ ಪಟ್ಟಿ ಬಿಡುಗಡೆ ಮಾಡಿದ್ದರು. ಅದರಲ್ಲಿ, ಸ್ವಿಟ್ಜರ್‌ಲ್ಯಾಂಡ್‌ ಮೇಲೆ 50% ತೆರಿಗೆ ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಸಹಿಹಾಕಿದ್ದರು. ಅಧಿಕ ಸುಂಕ ವಿಧಿಸುವ ಟ್ರಂಪ್ ಧೋರಣೆಯನ್ನು ವಿರೋಧಿಸಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು. ಅವುಗಳಲ್ಲಿ, ‘ಮಧ್ಯ ಬೆರಳು’ (ಮಿಡ್ಲ್‌ ಫಿಂಗಲ್‌) ಸೆಲ್ಯೂಟ್‌ ಪ್ರತಿಭಟನೆಯೂ ಒಂದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಈ ಲೇಖನ ಓದಿದ್ದೀರಾ?: ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ಸ್ವಿಟ್ಜರ್‌ಲ್ಯಾಂಡ್‌ನ ಬಾಸೆಲ್‌ನಲ್ಲಿ ಮಾರ್ಚ್‌ 14ರಂದು ನಡೆದಿದ್ದ ವಾರ್ಷಿಕ ಫಾಸ್ಟ್‌ನಾಚ್ಟ್ ಕಾರ್ನೀವಲ್ ಸಂದರ್ಭದಲ್ಲಿ ಟ್ರಂಪ್ ವಿರುದ್ಧ ಪ್ರತಿಭಟನಾ ಮೆರವಣಿಗೆಗಳು ನಡೆದಿದ್ದವು. ಆ ವೇಳೆ, ಜನರು ಮುಷ್ಠಿಹಿಡಿದ, ಮಧ್ಯದ ಬೆಳರನ್ನು ಮೇಲೆತ್ತಿರುವ ಕೈ ಆಧಾರದ ದೈತ್ಯ ಟೋಪಿಗಳನ್ನು ಧರಿಸಿ, ಕೊಳಲು ನುಡಿಸುತ್ತಾ, ಡ್ರಮ್ಮರ್‌ಗಳನ್ನು ಬಾರಿಸುತ್ತಾ ಮೆರವಣಿಗೆ ಸಾಗಿದ್ದರು. ಟ್ರಂಪ್ ಅವರನ್ನು ಅಪಹಾಸ್ಯ ಮಾಡಿದ್ದರು.

ಇದೀಗ, ಭಾರತದ ಮೇಲೂ ಟ್ರಂಪ್ 50% ಸುಂಕ ವಿಧಿಸಿದ್ದಾರೆ. ಪ್ರಧಾನಿ ಮೋದಿ ಅವರು ರೈತರ ಹಿತಾಸಕ್ತಿಯನ್ನು ಬಲಿಕೊಡುವುದಿಲ್ಲ ಎಂದಷ್ಟೇ ಹೇಳಿದ್ದಾರೆ. ಆದರೆ, ಟ್ರಂಪ್ ನೀತಿಯನ್ನು ಖಂಡಿಸಿಲ್ಲ, ಟೀಕಿಸಿಲ್ಲ, ವಿರೋಧಿಸಿಲ್ಲ. ಇನ್ನು, ಬಿಜೆಪಿಗರು ಮತ್ತು ಮೋದಿ ಭಕ್ತರು ಕೂಡ ಟ್ರಂಪ್‌ ಧೋರಣೆಯನ್ನು ಪ್ರಶ್ನಿಸುತ್ತಿಲ್ಲ. ಬದಲಾಗಿ, ಮೋದಿ ಅವರ ರೈತ ಹಿತಾಸಕ್ತಿಯ ಹೇಳಿಕೆಯೇ ಟ್ರಂಪ್‌ಗೆ ಭಾರೀ ತಿರುಗೇಟು ಎಂಬಂತೆ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಹಲವರು ಸ್ವಿಟ್ಜರ್‌ಲ್ಯಾಂಡ್‌ನ ವಿಡಿಯೋವನ್ನು ಹಂಚಿಕೊಂಡು, ಭಾರತೀಯರು ಟ್ರಂಪ್‌ ಅವರನ್ನು ವಿರೋಧಿಸುವುದು ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...