ಲೋಕೋಪಯೋಗಿ ಇಲಾಖೆಯಲ್ಲಿ 500 ಕೋಟಿ ರೂ. ಹಗರಣ: ತನಿಖೆಗೆ ಆದೇಶ; ಮಾಜಿ ಸಚಿವರಿಗೆ ಸಂಕಷ್ಟ!

Date:

ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ 500 ಕೋಟಿ ರೂಪಾಯಿ ಹಗರಣವನ್ನು ಈಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನಿಖೆಗೆ ಆದೇಶಿಸಿದೆ.

- Advertisement -

ಮಾಜಿ ಸಚಿವ ಬಿ ಆರ್ ಯಾವಗಲ್ ನೀಡಿದ್ದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರವು, ಪಿಡಬ್ಲ್ಯೂಡಿಯ ಗುಣ ಭರವಸೆ ವಲಯದ ಬೆಂಗಳೂರಿನ ಮುಖ್ಯ ಇಂಜಿನಿಯರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಇದರಿಂದಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದ ಸಿಸಿ ಪಾಟೀಲ್​ಗೆ ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಳವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

BR YAVAGAL

ಮಾಜಿ ಸಚಿವ ಬಿ ಆರ್ ಯಾವಗಲ್

ತನಿಖೆಗೆ ಆದೇಶ ನೀಡಿರುವ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಮಾಜಿ ಸಚಿವ ಬಿ ಆರ್ ಯಾವಗಲ್, ‘ಕಳಪೆ ಕಾಮಗಾರಿ, ಅರ್ಹತೆ ಇಲ್ಲದ ಗುತ್ತಿಗೆದಾರರಿಗೆ ಕೋಟ್ಯಂತರ ರೂಪಾಯಿ ಮೊತ್ತದ ಟೆಂಡರ್ ನೀಡಲಾಗಿದೆ. ಅಲ್ಲದೇ, ಗುತ್ತಿಗೆದಾರರು. ನಕಲಿ ‘ವರ್ಕ್ ಡನ್’ ಸರ್ಟಿಫಿಕೇಟ್ ನೀಡಿ ಟೆಂಡರ್ ಪಡೆದುಕೊಂಡಿದ್ದಾರೆ. ಕಡಿಮೆ ಮೊತ್ತಕ್ಕೆ ಟೆಂಡರ್ ಹಾಕಿದವರನ್ನು ಬಿಟ್ಟು ಹೆಚ್ಚಿನ ದರಕ್ಕೆ ಹಾಕಿದವರಿಗೆ ಟೆಂಡರ್ ನೀಡಲಾಗಿದೆ. ಅಂದಿನ ಸಚಿವ ಸಿ ಸಿ ಪಾಟೀಲ್ ತಮಗೆ ಬೇಕಾದವರಿಗೆ ಕೆಲಸ ಕೊಡಿಸಿದ್ದಾರೆ. ತಮ್ಮ ಪ್ರಭಾವ ಬಳಸಿ ಸ್ವಜನಪಕ್ಷಪಾತ ನಡೆಸಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದರು.

“ಮಾಜಿ ಲೋಕೋಪಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ್ ಈ 500 ಕೋಟಿ ರೂ. ಹಗರಣದ ಪ್ರಮುಖ ರೂವಾರಿ. ಹಾಗಾಗಿ, ಈ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಕಳೆದ ಜೂ.30ರಂದು ದೂರು ನೀಡಿದ್ದೆ. ಈ ದೂರನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿದೆ. ಅಕ್ಟೋಬರ್ 11, 12 ರಂದು ತನಿಖೆ ನಡೆಸಲಿರುವ ಅಧಿಕಾರಿಗಳ ತಂಡ ನರಗುಂದ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ’ ಎಂದು ತಿಳಿಸಿದರು.

PWD Order Copy

ತನಿಖೆಗೆ ಆದೇಶ ನೀಡಿರುವ ಪ್ರತಿ

ತನಿಖೆಗೆ ಆದೇಶ ನೀಡಿರುವ ಪ್ರತಿ ಈ ದಿನ.ಕಾಮ್‌ಗೆ ಲಭ್ಯವಾಗಿದ್ದು, ಇಲಾಖಾ ಅಧಿಕಾರಿಗಳ ಒಂದು ವಿಶೇಷ ತಂಡವನ್ನು ರಚಿಸಿ, ವಿಸ್ತೃತವಾದ ತನಿಖೆ ನಡೆಸಿ 30 ದಿನಗಳೊಳಗೆ ವಿವರವಾದ ವರದಿಯನ್ನು ನೀಡುವಂತೆ ಸರ್ಕಾರ ಸೂಚಿಸಿದೆ.

ಏನಿದು ಪ್ರಕರಣ?
ನರಗುಂದ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ, ಜಿಲ್ಲಾ ಪಂಚಾಯತ್, ಸಣ್ಣ, ನೀರಾವರಿ, ಜಲಸಂಪನ್ಮೂಲ ಮತ್ತು ಪೌರಾಡಳಿತ ಇಲಾಖೆ ಮೂಲಕ ಅಂದಾಜು ರೂ.500.00 ಕೋಟಿಗಿಂತಲೂ ಹೆಚ್ಚು ಮೊತ್ತದಲ್ಲಿ ವಿವಿಧ ಕಾಮಗಾರಿಗಳನ್ನು ಚುನಾವಣೆಗಿಂತ ಮೊದಲು ಒಂದು ವರ್ಷದಲ್ಲಿ ಅನುಷ್ಠಾನಗೊಳಿಸಿದ್ದು, ಅಧಿಕಾರದ ದುರುಪಯೋಗ ಹಾಗೂ ನಿಯಮಗಳ ಪಾಲನೆ ಮಾಡಿರುವುದಿಲ್ಲವೆಂದು ಆರೋಪಿಸಿ ನರಗುಂದ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಆರ್.ಯಾವಗಲ್‌ ಕಳೆದ ಜೂನ್ 30ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಲೋಕಾಯುಕ್ತ ಇಲ್ಲವೆ ಸಿಓಡಿ ತನಿಖೆ ಕೈಗೊಳ್ಳುವಂತೆ ವಿನಂತಿಸಿದ್ದರು.

cc patil

ಮಾಜಿ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್

ಈ ಮನವಿಯನ್ನು ಪರಿಗಣಿಸಿರುವ ಸರ್ಕಾರವು, ನರಗುಂದ ವಿಧಾನಸಭಾ ವ್ಯಾಪ್ತಿಯಲ್ಲಿ 2022- 23ನೇ ಸಾಲಿನಲ್ಲಿ ವಿವಿಧ ಇಲಾಖೆಯು ಕೈಗೊಂಡಿರುವ ಕಾಮಗಾರಿಗಳ ಅವಶ್ಯಕತೆ, ಕಾಮಗಾರಿಗಳ ಗುತ್ತಿಗೆ ನೀಡುವ ಬಗೆ, ನಿಯಮಗಳ ಪಾಲನೆ, ತಾಂತ್ರಿಕವಾಗಿ ಕಾಮಗಾರಿಗಳ ಗುಣಮಟ್ಟ ಪರಿಶೀಲನೆ, ಅಧಿಕಾರ ಹಾಗೂ ಹಣ ದುರುಪಯೋಗ, ಕಾಮಗಾರಿಗಳನ್ನು ನಿಯಮಾನುಸಾರ ಕೈಗೊಂಡು, ಪೂರ್ಣಗೊಳಿಸಿರುವ ವಿಷಯಗಳಿಗೆ ಸಂಬಂಧಿಸಿದಂತೆ ಇಲಾಖಾ ಅಧಿಕಾರಿಗಳ ಒಂದು ವಿಶೇಷ ತಂಡವನ್ನು ರಚಿಸಿ, ವಿಸ್ತೃತವಾದ ತನಿಖೆ ನಡೆಸಿ 30 ದಿನಗಳೊಳಗೆ ವಿವರವಾದ ವರದಿಯನ್ನು ನೀಡುವಂತೆ ಸರ್ಕಾರವು ಆದೇಶಿಸಿದೆ.

ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ತನಿಖೆ ಕೈಗೊಳ್ಳಲು ಪಿಡಬ್ಲ್ಯೂಡಿಯ ಗುಣ ಭರವಸೆ ವಲಯದ ಬೆಂಗಳೂರಿನ ಮುಖ್ಯ ಇಂಜಿನಿಯರ್ ನೇತೃತ್ವದಲ್ಲಿ ನಾಲ್ವರು ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಈ ಪ್ರಕರಣವು ಮಾಜಿ ಲೋಕೋಪಯೋಗಿ ಸಚಿವ ಹಾಗೂ ಪ್ರಸ್ತುತ ನರಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಸಿ ಪಾಟೀಲ್ ಅವರಿಗೆ ಮುಳುವಾಗುವ ಸಾಧ್ಯತೆ ಇದೆ.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...