ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ವಾರ್ಷಿಕ 50 ರಿಂದ 60 ಸಾವಿರ ಉಳಿತಾಯ: ಡಿ.ಕೆ.ಶಿವಕುಮಾರ್

Date:

“ಗ್ಯಾರಂಟಿ ಯೋಜನೆಗಳಿಂದ ಒಂದು ಬಡ ಕುಟುಂಬಕ್ಕೆ ವಾರ್ಷಿಕ 50-60 ಸಾವಿರ ಉಳಿತಾಯವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಹೊರತಾಗಿ ವಿವಿಧ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹1.20 ಸಾವಿರ ಕೋಟಿ ಹಣವನ್ನು ಬಜೆಟ್‌ನಲ್ಲಿ ಮೀಸಲಿಟ್ಟಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು‌.

- Advertisement -

ಹಾಸನದಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು,” ₹1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್‌ ನೀಡುವುದರ ಜೊತೆಗೆ ₹1.50 ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಕುಮಾರಸ್ವಾಮಿ, ಆರ್‌. ಅಶೋಕ್‌ ಅವರು ಇದಕ್ಕೆ ಉತ್ತರಿಸಲಿ” ಎಂದು ಸವಾಲೆಸೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

“ವಸ್ತುಗಳ ಬೆಲೆ ಏರಿಕೆಯಾಗಿತ್ತು. ಬಿಜೆಪಿಯವರು ವಿದ್ಯುತ್‌ ಬೆಲೆ ಏರಿಕೆ ಮಾಡಿದ್ದರು. ನಾವು ಉಚಿತವಾಗಿ ವಿದ್ಯುತ್‌ ನೀಡುವುದರ ಜೊತೆಗೆ ಬೆಲೆ ಇಳಿಕೆ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ-ಸೊಸೆ ಜಗಳವಾಡುತ್ತಾರೆ ಎಂದು ಗುಲ್ಲೆಬ್ಬಿಸಿದರು. ಯಾವುದಾದರೂ ಮನೆಯಲ್ಲಿ ಜಗಳ ಉಂಟಾಗಿದೆಯೇ?” ಎಂದು ಕೇಳಿದರು.

“ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ಶಕ್ತಿ ಯೋಜನೆಯಿಂದ ದೇವಸ್ಥಾನಕ್ಕೆ ಜನ ಹೆಚ್ಚು ಬರುತ್ತಿದ್ದಾರೆ. ಹುಂಡಿ ತುಂಬಿ ತುಳುಕುತ್ತಿದೆ. ಸಿದ್ದರಾಮಯ್ಯ ಅವರ ಮತ್ತು ಡಿ.ಕೆ.ಶಿವಕುಮಾರ್‌ ಅವರ ಹೆಸರಿನಲ್ಲಿ ಮಹಿಳೆಯರು ಅರ್ಚನೆ ಮಾಡಿಸುತ್ತಿದ್ದಾರೆ ಎಂದು ಪತ್ರ ಬರೆದಿದ್ದರು. ಜನರ ಪ್ರಾರ್ಥನೆ ಎಂದಿಗೂ ಮೋಸ ಮಾಡುವುದಿಲ್ಲ. ಮಹಿಳೆಯರು ರಾಜ್ಯದ ನಾನಾ ದೇವಸ್ಥಾನಗಳನ್ನು ನೋಡುತ್ತಿದ್ದಾರೆ. ಮಕ್ಕಳನ್ನು ಕರೆದುಕೊಂಡು ಹೋಗಿ ದರ್ಶನ ಮಾಡಿಸುತ್ತಿದ್ದಾರೆ. ತವರು ಮನೆಗೆ ಹೋಗಿ ಬರುತ್ತಿದ್ದಾರೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

“ನಮ್ಮ ಯೋಜನೆಗಳಿಂದ ಆರ್ಥಿಕತೆಗೆ ಉತ್ತೇಜನ ನೀಡಲಾಗಿದೆ. ದುಡ್ಡು ಮತ್ತು ಬ್ಲಡ್‌ ಎರಡೂ ಚಲಾವಣೆಯಲ್ಲಿ ಇರಬೇಕು. ದುಡ್ಡು ಒಂದೇ ಕಡೆ ಇದ್ದರೆ ಕಳ್ಳರ, ಆದಾಯ ತೆರಿಗೆ ಅಧಿಕಾರಿಗಳ ಭಯ. ಬ್ಲಡ್‌ ಒಂದೇ ಕಡೆ ಇದ್ದರೆ ಅನಾರೋಗ್ಯ ಉಂಟಾಗುತ್ತದೆ. ನಾವು ಧರ್ಮವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದಿಲ್ಲ. ದೇವರು ಬೇರೆ, ರಾಜಕಾರಣ ಬೇರೆ. ಈ ಬಾರಿಯ ಸದನದಲ್ಲಿ ನಮ್ಮ ಸರ್ಕಾರ ಸಣ್ಣ ದೇವಸ್ಥಾನಗಳ ಅಭಿವೃದ್ಧಿಗೆ ಮತ್ತು ಅರ್ಚಕರಿಗೆ ಸಹಾಯ ಮಾಡುವ ಕಾನೂನು ತರಲು ಹೊರಟೆವು. ಆದರೆ ಬಿಜೆಪಿಯವರು ಅದಕ್ಕೆ ವಿರೋಧಿಸಿದರು” ಎಂದು ತಿಳಿಸಿದರು.

“ನಮಗೆ ಜಾತಿ ಮುಖ್ಯವಲ್ಲ ನೀತಿ ಮುಖ್ಯ. ನಾವು ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಭಾವನೆಗಳ ಮೇಲೆ ಅಲ್ಲ. ನಾವು ಕೇವಲ ದಲಿತ, ಹಿಂದುಳಿದ, ಅಲ್ಪಸಂಖ್ಯಾತರಿಗೆ ಮಾತ್ರ ಯೋಜನೆಗಳನ್ನು ನೀಡಿಲ್ಲ. ಎಲ್ಲರಿಗೂ ನೀಡಿದ್ದೇವೆ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಸಹಕಾರಿ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡಿದ್ದೆವು. ಆದರೆ ಆ ಹಣ ಬಿಡುಗಡೆಯಾಗಿರಲಿಲ್ಲ. ಸಿಎಂ ಮತ್ತು ರಾಜಣ್ಣ ಅವರ ಕಾಳಜಿಯಿಂದ ಈ ಹಣ ಬಿಡುಗಡೆ ಮಾಡಿ ಸಹಕಾರಿ ಸಂಘ ಮತ್ತು ರೈತರಿಗೆ ಬೆನ್ನೆಲುಬಾಗಿದ್ದೇವೆ. ಮುಂದಕ್ಕೂ ನೀವು ನಮ್ಮ ಕೈ ಹಿಡಿಯುತ್ತೀರಾ ಎಂದು ನಂಬಿದ್ದೇವೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಇದನ್ನು ಓದಿದ್ದೀರಾ? ಮೈಸೂರು | ಜನರ ವಿರುದ್ಧ ಕೇಂದ್ರ ಯುದ್ಧ ಘೋಷಿಸಿದೆ: ತೀಸ್ತಾ ಸೆಟಲ್ವಾಡ್‌

“ಹಾಸನ ಜಿಲ್ಲೆಯ ಜನಪ್ರತಿನಿಧಿಗಳು ಒಂದಷ್ಟು ಅನುದಾನಗಳ ಬಿಡುಗಡೆಗೆ ಮನವಿ ಸಲ್ಲಿಸಿದ್ದಾರೆ. ಇದರಲ್ಲಿ ನಮ್ಮ ಶಿವಲಿಂಗೇಗೌಡರು ಬಂಪರ್‌ ಹೊಡೆದಿದ್ದಾರೆ. ಈ ವರ್ಷ ಮಳೆ ಬಿದ್ದು ನೀರು ಬಂದರೆ, ಎತ್ತಿನಹೊಳೆ ಮೂಲಕ ಎಲ್ಲ ಕೆರೆಗಳನ್ನು ತುಂಬಿಸುವ ಕೆಲಸವಾಗುತ್ತದೆ” ಎಂದು ಇದೇ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್ ಭರವಸೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

ಸಿಇಸಿ ಗ್ಯಾನೇಶ್ ಕುಮಾರ್ ವಜಾಗೆ ಪಟ್ಟು; ಸೆ.26ರಿಂದ ದೇಶಾದ್ಯಂತ ಪ್ರತಿಭಟನೆಗೆ ಎಡಪಕ್ಷಗಳು, SIR ವಿರೋಧಿ ಒಕ್ಕೂಟ ಕರೆ

ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತ್ರೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...