5 ವರ್ಷಗಳಲ್ಲಿ 5,100 ಅಕ್ರಮ ಹಣ ವರ್ಗಾವಣೆ ಪ್ರಕರಣಗಳು ದಾಖಲು!

Date:

ಜಾರಿ ನಿರ್ದೇಶನಾಲಯ (ಇಡಿ) ಐದು ವರ್ಷಗಳಲ್ಲಿ 5,100ಕ್ಕೂ ಹೆಚ್ಚು ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಶೇಕಡ 95ರಷ್ಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ.

- Advertisement -

ಸಮಾಜವಾದಿ ಪಕ್ಷ(ಎಸ್‌ಪಿ) ರಾಮ್‌ಜಿ ಲಾಲ್ ಸುಮನ್ ಪ್ರಶ್ನೆಗೆ ಉತ್ತರಿಸಿದ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ, “2020-21 ಮತ್ತು 2025ರ ಡಿಸೆಂಬರ್ ನಡುವೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) 2002ರ ಅಡಿಯಲ್ಲಿ ತನಿಖೆಗಾಗಿ ಇಡಿ 5,158 ಪ್ರಕರಣಗಳನ್ನು ದಾಖಲಿಸಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್‌ಗೆ ಇಡಿ ಸಮನ್ಸ್

ಹಾಗೆಯೇ ಸಂಸ್ಥೆಯು ಪ್ರಕರಣಗಳ ರಾಜ್ಯವಾರು ಡೇಟಾವನ್ನು ಹೊಂದಿಲ್ಲ ಎಂದೂ ತಿಳಿಸಿದ್ದಾರೆ. 2021-22ರಲ್ಲಿ 1,116 ಪ್ರಕರಣ ದಾಖಲಾಗಿದ್ದು, ನಂತರ 2020-21ರಲ್ಲಿ 996 ಪ್ರಕರಣಗಳು ದಾಖಲಾಗಿವೆ. 2023-24ರಲ್ಲಿ ಈ ಸಂಖ್ಯೆ 698ಕ್ಕೆ ಇಳಿದಿದ್ದು, 2024-25ರಲ್ಲಿ ಮತ್ತೆ 775ಕ್ಕೆ ಏರಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ಡಿಸೆಂಬರ್ 2025ರವರೆಗೆ 620 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರದ ದಾಖಲೆ ಹೇಳಿದೆ.

2025ರ ಡಿಎಂಬರ್‌ನಲ್ಲಿ PMLA ಪ್ರಾರಂಭವಾದಾಗಿನಿಂದ ಇಡಿ ಒಟ್ಟು 8,391 ಇಸಿಐಆರ್‌ಗಳನ್ನು ದಾಖಲಿಸಿದೆ. ಆದಾಯವನ್ನು ವಶಪಡಿಸಿಕೊಳ್ಳಲು ಕೋರಿ ವಿಶೇಷ PMLA ನ್ಯಾಯಾಲಯಗಳಲ್ಲಿ 1,960 ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ದೂರುಗಳನ್ನು ಸಲ್ಲಿಸಲಾಗಿದೆ.

ವಿಶೇಷ ನ್ಯಾಯಾಲಯಗಳು ಇಲ್ಲಿಯವರೆಗೆ 58 ಹಣ ವರ್ಗಾವಣೆ ಪ್ರಕರಣಗಳಲ್ಲಿ ಅರ್ಹತೆಯ ಆಧಾರದ ಮೇಲೆ ತೀರ್ಪುಗಳನ್ನು ನೀಡಿವೆ. ಇದರ ಪರಿಣಾಮವಾಗಿ 55 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ, 123 ಆರೋಪಿಗಳು ಶಿಕ್ಷೆಗೊಳಗಾಗಿದ್ದಾರೆ ಎಂದು ಸರ್ಕಾರ ಹೇಳಿದೆ. ಅರ್ಹತೆಯ ಆಧಾರದ ಮೇಲೆ ನಿರ್ಧರಿಸಲಾದ ಪ್ರಕರಣಗಳಲ್ಲಿ ಶೇಕಡ 94.82ರಷ್ಟು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ರ‍್ಯಾಲಿಗೆ ತೆರಳುತ್ತಿದ್ದ TMC ಶಾಸಕನ ಕಾರಿಗೆ ಮೊಟ್ಟೆ, ಕಲ್ಲು ತೂರಾಟ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...