ಮುಂದಿನ ವರ್ಷ ಜನತೆಯ ಜೇಬಿಗೆ 58 ಸಾವಿರ ಕೋಟಿ, ವಿರೋಧಿಗಳ ಟೀಕೆಗೆ ಡೋಂಟ್ ಕೇರ್: ಸಿದ್ದರಾಮಯ್ಯ

Date:

  • ವೀಣಾ ಕಾಶಪ್ಪನವರಿಗೆ ರಾಜಕೀಯವಾಗಿ ಒಳ್ಳೆ ಭವಿಷ್ಯ ಇದೆ: ಸಿಎಂ ಸಿದ್ದರಾಮಯ್ಯ ಅಭಯ
  • KAS-PSI ಪರೀಕ್ಷೆಯಲ್ಲಿ ಪಾಸಾಗಲು ವೀಣಾ ಕಾಶಪ್ಪನವರ್ ಫೌಂಡೇಶನ್ ನೆರವಾಗಲಿದೆ

ವೀಣಾ ಕಾಶಪ್ಪನವರಿಗೆ ರಾಜಕೀಯವಾಗಿ ಒಳ್ಳೆ ಭವಿಷ್ಯ ಇದೆ. ಗ್ರಾಮೀಣ ಮಕ್ಕಳೂ KAS-PSI ಪರೀಕ್ಷೆಯಲ್ಲಿ ಪಾಸಾಗಲು ವೀಣಾ ಕಾಶಪ್ಪನವರ್ ಫೌಂಡೇಶನ್ ನೆರವಾಗಲಿದೆ. ಈಗ 200 ಅಭ್ಯರ್ಥಿಗಳಿಂದ ಆರಂಭವಾಗಿ 1500 ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ವೀಣಾ ಕಾಶಪ್ಪನವರ್ ಫೌಂಡೇಷನ್ ನೆರಳಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಬಾಗಲಕೋಟೆಯ ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆಯ ತರಬೇತಿ ಕೇಂದ್ರ ಮತ್ತು ಅಕಾಡೆಮಿ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಾವಿರಾರು ವಿದ್ಯಾರ್ಥಿಗಳ KAS-IAS ಕನಸನ್ನು, ಅವಕಾಶ ವಂಚಿತ ವಿದ್ಯಾರ್ಥಿಗಳ PSI-IPS ಆಗುವ ಕನಸನ್ನು ನನಸು ಮಾಡುವ ಮೂಲಕ ಸಮಾಜದ ಋಣ ತೀರಿಸುವ ಕೆಲಸದಲ್ಲಿ ಕಾಶಪ್ಪನವರ್ ದಂಪತಿ ತೊಡಗಿದ್ದಾರೆ. ಇವರಿಗೆ ನಿಮ್ಮ ಆಶೀರ್ವಾದ ಇರಲಿ” ಎಂದರು.

“ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆಯಾಗಿ ಜಿಲ್ಲೆ ನೆನಪಿಡುವ ಕೆಲಸಗಳನ್ನು ವೀಣಾ ಅವರು ಮಾಡಿದ್ದಾರೆ. ಇವರ ಸಮಾಜಮುಖಿ ಕೆಲಸಗಳು ಈ KAS ಅಕಾಡೆಮಿ ಮೂಲಕ ಇನ್ನಷ್ಟು ವಿಸ್ತಾರವಾಗುತ್ತಿದೆ. ಪ್ರತಿಭೆ ಪ್ರತಿಯೊಬ್ಬರಲ್ಲೂ ಇರುತ್ತದೆ. ಈ ಪ್ರತಿಭೆಗೆ ಅವಕಾಶಗಳು ಬೇಕು. ಆ ಅವಕಾಶವನ್ನು ಸೃಷ್ಟಿಸುವ ಕೆಲಸವನ್ನು ವೀಣಾ ಕಾಶಪ್ಪ ದಂಪತಿ ಯಶಸ್ವಿಯಾಗಿ ಮಾಡುತ್ತಿದ್ದಾರೆ” ಮೆಚ್ಚುಗೆ ವ್ಯಕ್ತಪಡಿಸಿದರು.

58 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕುತ್ತೇವೆ

“ಬಡವರಿಗೆ ಜಾತಿ-ಧರ್ಮ ಎನ್ನುವುದು ಇಲ್ಲ. ಎಲ್ಲಾ ಜಾತಿ ಧರ್ಮದ ಬಡವರ, ಮಧ್ಯಮವರ್ಗದವರ ಸಂಕಟಗಳೂ ಒಂದೇ ಆಗಿವೆ. ಹೀಗಾಗಿ ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮವರ್ಗದವರ ಸಂಕಷ್ಟಕ್ಕೆ ಸ್ಪಂದಿಸಲು ಬಾವು ಗ್ಯಾರಂಟಿ ಯೋಜನೆಗಳ ಮೂಲಕ ಈ ವರ್ಷ 38 ಸಾವಿರ ಕೋಟಿ ರೂಪಾಯಿಯನ್ನು ಕನ್ನಡ ಜನತೆಯ ಜೇಬಿಗೆ ಹಾಕುವ ಕೆಲಸ ಮಾಡಿದ್ದೇವೆ. ಮುಂದಿನ ವರ್ಷ ಕನ್ನಡ ನಾಡಿನ ಜನತೆಯ ಜೇಬಿಗೆ 58 ಸಾವಿರ ಕೋಟಿ ರೂಪಾಯಿಯನ್ನು ಹಾಕುತ್ತೇವೆ. ವಿರೋಧಿಗಳ ಟೀಕೆಗೆ ಡೋಂಟ್ ಕೇರ್” ಎಂದರು.

ಬಂಜಾರ ಶಕ್ತಿಪೀಠದ ಕುಮಾರ ಮಹಾರಾಜರು ಸಾನಿಧ್ಯ ವಹಿಸಿದ್ದರು. ಶಾಸಕ ಎಚ್ ವಾಯ್ ಮೇಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ, ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ, ಹುನಗುಂದ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ್, ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ‌ ಶ್ರೀಗಳು, ಯಲ್ಲಾಲಿಂಗ ಶ್ರೀಮಠದ ಡಾ.ಮುರುಘರಾಜೇಂದ್ರ ಶ್ರೀಗಳು, ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಕೂಡಲಸಂಗಮ‌ ಪಂಚಮಸಾಲಿ ಜಗದ್ಗುರು ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...