62 ತಾಲೂಕು ಬರ ಘೋಷಣೆಗೆ ಅರ್ಹ, 529 ಕೋಟಿ ಅನುದಾನ ಎತ್ತಿಡಲಾಗಿದೆ : ಸಚಿವ ಕೃಷ್ಣಭೈರೇಗೌಡ

Date:

Advertisements
  • ಕಂದಾಯ ಸಚಿವ ಕೃಷ್ಣಭೈರೇಗೌಡ ಸಹಿತ ಮೂವರು ಸಚಿವರಿಂದ ಬರ ಪರಿಸ್ಥಿತಿ ವಿವರಣೆ
  • ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ವಿತರಿಸಲು ಪಶು ಸಂಗೋಪನೆ ಇಲಾಖೆಗೆ 20 ಕೋಟಿ ರೂ.

113 ತಾಲೂಕುಗಳ ಪೈಕಿ ಜಂಟಿ ಸಮೀಕ್ಷೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ 62 ತಾಲೂಕುಗಳು ಸದ್ಯ ಬರ ಘೋಷಣೆಗೆ ಅರ್ಹವಾಗಿವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಸಚಿವ ಸಂಪುಟದ ಉಪಸಮಿತಿಯ ಸಭೆಯ ಬಳಿಕ ವಿಧಾನಸೌಧದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಚಲುವರಾಯಸ್ವಾಮಿ ಜೊತೆಗೆ ಸುದ್ದಿಗೋಷ್ಠಿ ನಡೆಸಿದ ಕೃಷ್ಣಭೈರೇಗೌಡ, “2023ರ ಮಂಗಾರು ಆರಂಭದಲ್ಲಿಯೇ ದುರ್ಬಲಗೊಂಡು, ಜೂನ್ ತಿಂಗಳಿನಲ್ಲಿ ಶೇ 5ರಷ್ಟು ಮಳೆ ಕೊರತೆಯಾಗಿತ್ತು. ನಂತರ ಜುಲೈನಲ್ಲಿ ಉತ್ತಮವಾಗಿ ಮಳೆಯಾದರೂ, ಆಗಸ್ಟ್‌ ತಿಂಗಳಿನಲ್ಲಿ ಶೇಕಡಾ 73 ರಷ್ಟು ಮಳೆ ಕೊರತೆಯಾಗಿದೆ. ಒಟ್ಟಾರೆ ಪ್ರಸಕ್ತ ಮುಂಗಾರು ಜೂನ್ 1 ರಿಂದ ಸೆಪ್ಟೆಂಬರ್ 4 ರವರೆಗೆ ವಾಡಿಕೆಯಾಗಿ 711 ಮಿ.ಮಿ. ಮಳೆಯಾಗಬೇಕಿತ್ತು. ಆದರೆ ಕೇವಲ 526 ಮಿ.ಮೀ ಮಳೆಯಾಗಿದೆ. ಇದರಿಂದಾಗಿ ಶೇಕಡಾ 26ರಷ್ಟು ಮಳೆ ಕೊರತೆಯಾಗಿದ್ದರಿಂದ ಬರ ಪರಿಸ್ಥಿತಿ ತಲೆದೋರಿದೆ” ಎಂದು ವಿವರಿಸಿದರು.

ಬರ ಪರಿಸ್ಥಿತಿ ಬಗ್ಗೆ ನಿಗಾ ಮತ್ತು ನಿರ್ವಹಣೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ಈವರೆಗೆ 3 ಬಾರಿ ಸಭೆ ನಡೆಸಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಪರಾಮರ್ಶಿಸಿದೆ. ಇಂದಿನ ಸಭೆಯಲ್ಲಿ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಮಾತುಕತೆ ನಡೆಸಿದ್ದೇವೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

Advertisements

ರಾಜ್ಯದಲ್ಲಿ ಬರ ಪರಿಸ್ಥಿತಿ ಕಂಡುಬಂದಿರುವ 113 ತಾಲೂಕುಗಳನ್ನು ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣಕ್ಕಾಗಿ (Ground Truthning) ಜಂಟಿ ಸಮೀಕ್ಷೆ ಕೈಗೊಂಡು ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. 113 ತಾಲೂಕುಗಳ ಪೈಕಿ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ 62 ತಾಲೂಕುಗಳ ಬರ ಘೋಷಣೆಗೆ ಅರ್ಹವಾಗಿದೆ. ಆದರೆ, ಜಂಟಿ ಸಮೀಕ್ಷೆಯ ನಂತರ ಬೆಳೆ ಪರಿಸ್ಥಿತಿ ಮತ್ತೆ ಕುಸಿದಿದೆ ಎಂದು ವರದಿಗಳು ಬಂದಿದೆ. ಹಾಗಾಗಿ ಉಳಿದ 51 ತಾಲೂಕುಗಳಲ್ಲಿ ಮತ್ತೊಮ್ಮೆ ಜಂಟಿ ಸಮೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

ಉಳಿದ 51 ಮತ್ತು 83 ತಾಲೂಕುಗಳಲ್ಲಿ ಸಮೀಕ್ಷೆ ಮುಗಿಸಿ ಒಂದು ವಾರದೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ 134 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ವರದಿ ಆಧಾರದ ಅನುಸಾರ ಬರ ಘೋಷಣೆಯ ಬಗ್ಗೆ ತೀರ್ಮಾನಿಸಲಾಗುವುದು. ಜೊತೆಗೆ, ಘೋಷಣೆಯ ಬಳಿಕ ಕೇಂದ್ರ ಸರ್ಕಾರದಿಂದ ನೆರವಿಗಾಗಿ ಮನವಿ ಸಲ್ಲಿಸಲಿದ್ದೇವೆ ಎಂದು ಕೃಷ್ಣಭೈರೇಗೌಡ ಹೇಳಿದರು.

ಬರ ಘೋಷಣೆಯಾದ ದಿನದಿಂದ ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚಿಸಲು ತೀರ್ಮಾನಿಸಲಾಗಿದೆ. ಕುಡಿಯುವ ನೀರು ಕೊರತೆ ಕಂಡುಬಂದ ವಸತಿ ಪ್ರದೇಶಗಳಲ್ಲಿ ಟ್ಯಾಂಕರ್ ಮುಖಾಂತರ ಅಥವಾ ಬಾಡಿಗೆ ಬೋರ್‌ವೆಲ್ ಮುಖಾಂತರ ತುರ್ತು ಕುಡಿಯುವ ನೀರು ಒದಗಿಸುವ ಖರ್ಚು ವೆಚ್ಚವನ್ನು ಎಸ್‌ಡಿಆರ್ ಎಫ್ (SDRF) ಮುಖಾಂತರ ಭರಿಸಲು ಅನುಮತಿಸಲಾಗಿದೆ ಎಂದು ಕಂದಾಯ ಸಚಿವರು ಹೇಳಿದರು.

“ಹಾಲಿ ಮೇವು ಲಭ್ಯವಿದ್ದು ಮುಂದಿನ ದಿನಗಳಲ್ಲಿ ಮೇವಿನ ಕೊರತೆ ನಿಭಾಯಿಸಲು ನೀರಿನ ವ್ಯವಸ್ಥೆ ಇರುವ ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ವಿತರಿಸಲು ಪಶು ಸಂಗೋಪನೆ ಇಲಾಖೆಗೆ 20 ಕೋಟಿ ರೂ. ಮೊತ್ತ ವಿತರಿಸಲು ತೀರ್ಮಾನಿಸಲಾಗಿದೆ. ಬರ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಧಿಕಾರಿಗಳ ಬಳಿ ಈಗಾಗಲೇ 529 ಕೋಟಿ ಅನುದಾನ ಲಭ್ಯವಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X