660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಶೀಘ್ರ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

Date:

ಪಿಎಸ್ಐ ಮರು ಪರೀಕ್ಷೆ ಸುಗಮವಾಗಿ ನಡೆದಿದ್ದು, ಆದಷ್ಟು ಬೇಗ ಮೌಲ್ಯಮಾಪನ ಮುಗಿಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಯಾವುದೇ ರೀತಿಯ ಘಟನೆ ನಡೆದಿಲ್ಲ. ಬ್ಲೂಟೂತ್ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಲು ಸಾಧ್ಯವಾಗಿಲ್ಲ. ಇದಕ್ಕೆ ಯಾರು ಸಹ ಪ್ರಯತ್ನಿಸಿಲ್ಲ ಎಂದು ಭಾವಿಸಿದ್ದೀನಿ. 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಿತ್ತು. ಕೆಲವರು ಗೈರಾಗಿದ್ದಾರೆ. ಆದಷ್ಟು ಬೇಗ ಮೌಲ್ಯಮಾಪನವನ್ನು ಮುಗಿಸಿ, ಆಯ್ಕೆ‌ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು”‌ ಎಂದರು.

ಭರ್ಜರಿ ನೇಮಕಾತಿ‌

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮುಂದಿನ ಹಂತದಲ್ಲಿ 403 ಪರೀಕ್ಷೆ ನಡೆಸಲಾಗುವುದು. ಅದನ್ನು ಸಹ ಕೆಇಎ ಅವರಿಗೆ ವಹಿಸಲಾಗುವುದು. ನೋಟಿಫಿಕೇಷನ್ ಆಗಿ, ದೈಹಿಕ ಪರೀಕ್ಷೆ ಸಹ ಮುಗಿದಿದೆ. ಪರೀಕ್ಷೆ ಬಾಕಿ ಇದೆ‌. ಈ ಎರಡು ನೇಮಕಾತಿ ಪ್ರಕ್ರಿಯೆ ಮುಗಿದರೆ ಇಲಾಖೆಗೆ ಒಟ್ಟು 948 ಪಿಎಸ್ಐ ಸಿಗುತ್ತಾರೆ‌” ಎಂದು ತಿಳಿಸಿದರು.

“403 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಕರ್ನಾಟಕ‌ ಪರೀಕ್ಷಾ ಪ್ರಾಧಿಕಾರದವರಿಗೆ ವಹಿಸುವ ಬಗ್ಗೆ ಚಿಂತನೆ ಇದೆ. ಯಾವುದೇ ರೀತಿಯ ಗೊಂದಲಗಳಾಗದಂತೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಿದ ಕೆಇಎ ನಿರ್ದೇಶಕಿ ರಮ್ಯಾ ಅವರಿಗೆ ಧನ್ಯವಾದ. ಮುಂದಿನ ನೇಮಕಾತಿಗಳಲ್ಲಿಯೂ ಇದೇ ರೀತಿ ಪರೀಕ್ಷೆ ನಡೆಸಿಕೊಡಲಿ” ಎಂದರು.

“ಈ ಎರಡು ನೇಮಕಾತಿ ಪ್ರಕ್ರಿಯೆ ಮುಗಿದ ನಂತರ 660 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು. ಈಗಾಗಲೇ ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದ್ದು, ಹಂತ ಹಂತವಾಗಿ ನೇಮಕಾತಿ‌ ಮಾಡಿಕೊಳ್ಳಲಾಗುವುದು. ಮುಂದಿನ ಎರಡು ವರ್ಷದೊಳಗೆ ಈ ಎಲ್ಲ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಗಿಸಲಾಗುವುದು” ಎಂದು ತಿಳಿಸಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾವುದು ರಾಮರಾಜ್ಯ? ಗಾಂಧೀಜಿ ಹೇಳಿದ್ದೇ, ಪ್ರಧಾನಿ ಪಾಲಿಸುತ್ತಿರುವುದೇ?

ತನಿಖೆ ಬಳಿಕ ಸುಮ್ಮನಾಗ್ತಾರೆ

“ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ‌. ಕೃತ್ಯದ ಉದ್ದೇಶ ಏನು ಎಂಬುದು ತನಿಖೆಯಿಂದ ಹೊರಬರಬೇಕಿದೆ. ಈ ರೀತಿಯ ಘಟನೆ ನಡೆದಾಗ ಯಾವುದಾದರೂ ಉದ್ದೇಶ ಇದ್ದೇ ಇರುತ್ತದೆ. ಅವರ ಉದ್ದೇಶ ಏನಾಗಿತ್ತು ಎಂಬುದನ್ನು ತಿಳಿದುಕೊಳ್ಳಬೇಕು. ಯಾರಾದದರೂ ಕುಮ್ಮಕ್ಕು ಇದೆಯಾ? ಎಂಬುದು ಗೊತ್ತಾಗಲಿದೆ” ಎಂದರು.

ಬಿಜೆಪಿಯವರು ಪ್ರತಿಭಟನೆ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಪ್ರಕರಣದ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ. ಯಾರು ಮಾಡಿದ್ದಾರೆ ಎಂಬುದು ಗೊತ್ತಾದ ಮೇಲೆ ತಾವೇ ಸುಮ್ಮನಾಗುತ್ತಾರೆ. ನಾನು ಈಗಲೇ ಊಹಾತ್ಮಕವಾಗಿ ಯಾರು ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಎಂದು ಹೇಳುವುದಿಲ್ಲ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲವನ್ನು ಪರೀಶೀಲನೆ ನಡೆಸಲಾಗುವುದು. ಸಾರ್ವಜನಿಕವಾಗಿ ಯಾರು ಅಂತ ಹೇಳುವುದಕ್ಕೆ ಬರುವುದಿಲ್ಲ. ಸಾಕ್ಷ್ಯಧಾರಗಳ ಸಮೇತ ಉತ್ತರಿಸಲಾಗುವುದು” ಎಂದು ಹೇಳಿದರು.

ಹೆಚ್ಚು ಸ್ಥಾನ ಗೆಲ್ತಿವಿ

ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಇದ್ದರೆ ನಮಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇರುತ್ತಾ ಎಂಬ ಸಚಿವ ರಾಜಣ್ಣ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಲೋಕಸಭೆ ಚುಮಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಈ ಹಿಂದೆ 27 ಸ್ಥಾನ ಗೆದ್ದಿದ್ದನ್ನು ಸ್ಮರಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ವಾತಾವರಣ ಇದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಂದ ಒಳ್ಳೆ‌ ಪ್ರತಿಕ್ರಿಯೆ ಲಭ್ಯವಾಗುತ್ತಿದೆ. ಎಂಟು ತಿಂಗಳಲ್ಲಿ ಜನಪರ ಆಡಳಿತ ನೀಡಿರುವುದರಿಂದ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕುಡಿಯುವ ನೀರಿಗಾಗಿ ಬಂಗಾರಪ್ಪನಗರ ನಿವಾಸಿಗಳ ಪರದಾಟ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ...

ಚಿತ್ರದುರ್ಗ | ಹಾಳಾಗಿದೆ ಆರೋಗ್ಯ ಉಪಕೇಂದ್ರ; ಗ್ರಾಮಸ್ಥರಿಗೆ ಆರೋಗ್ಯ ಸೇವೆಯೂ ದೂರ

ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ...

ಗದಗ | ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಹೊಸ ಕಾನೂನು ಜಾರಿ: ಸಚಿವ ಎಚ್‌.ಕೆ ಪಾಟೀಲ್

ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾರ್ಚ್ 4ರಂದು ರಾಜ್ಯಾದ್ಯಂತ ನೂತನ...

ಬೆಂಗಳೂರು | ಪ್ರಿಯಕರನೊಂದಿಗೆ ಸೇರಿ ಎರಡು ವರ್ಷದ ಮಗುವಿಗೆ ಚಿತ್ರಹಿಂಸೆ ನೀಡಿದ ತಾಯಿ

ಹೆತ್ತ ತಾಯಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಎರಡು ವರ್ಷದ ಮಗುವನ್ನು ಮನೆಯಲ್ಲಿ...