ಕಂದಾಯ ಇಲಾಖೆಯೊಳಗಿನ ಭ್ರಷ್ಟರ ಬೇಟೆಗೆ ಮುಂದಾದ ಸಚಿವರು, 67 ಅಧಿಕಾರಿ/ನೌಕರರಿಗೆ ಶಿಕ್ಷೆ

Date:

  • ‘ಭ್ರಷ್ಟರ ಬೇಟೆಗೆ ನಮ್ಮ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ’
  • ‘ವಿಚಾರಣಾ ಕಾಲಾವಧಿ ಅನಗತ್ಯವಾಗಿ ವಿಸ್ತರಣೆ ಮಾಡಕೂಡದು’

ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಮುಕ್ತ ಶುದ್ಧ ಆಡಳಿತ ನೀಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಅಧಿಕಾರಕ್ಕೆ ಬಂದ ಎರಡೇ ತಿಂಗಳಿನಲ್ಲಿ ಕಳೆದ ಐದು ವರ್ಷಗಳಿಂದ ಧೂಳು ಹಿಡಿದಿದ್ದ ಕಂದಾಯ ಇಲಾಖೆ ಅಧಿಕಾರಿ/ನೌಕರರ ಕಡತಗಳನ್ನು ಕೊಡವಿ, 67 ಭ್ರಷ್ಟ ಅಧಿಕಾರಿಗಳಿಗೆ ಶಿಕ್ಷೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “ದೊಡ್ಡ ಇಲಾಖೆಯೊಂದರಲ್ಲಿ ಸುಧಾರಣೆ ಸಾಧಿಸಿಬಿಡಬಹುದು, ಇಲಾಖೆಯನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಿ ಜನರಿಗೆ ಉತ್ತಮ ಸೇವೆ ನೀಡಬಹುದು ಎಂಬ ಭ್ರಮೆ ನಮಗಿಲ್ಲ. ಆದರೆ, ಭ್ರಷ್ಟರ ಬೇಟೆಗೆ ನಮ್ಮ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದೆ” ಎಂದು ತಿಳಿಸಿದ್ದಾರೆ.

“ಕಳೆದ ಕೆಲವು ವರ್ಷಗಳಿಂದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ/ಇಲಾಖಾ ವಿಚಾರಣೆ ಪ್ರಸ್ತಾವನೆ ವಿವಿಧ ಹಂತಗಳಲ್ಲಿ ಬಾಕಿ ಇವೆ. ಈ ಪೈಕಿ ಅನೇಕ ಪ್ರಕರಣ ಪ್ರಸ್ತಾವನೆ ಅಥವಾ ವಿಚಾರಣೆ ಹಂತಗಳಲ್ಲಿ ಬಹಳ ವಿಳಂಬವಾಗಿದ್ದು, ವರ್ಷಗಳೇ ಕಳೆದಿವೆ. ದುರುದ್ದೇಶದಿಂದ ಕಡತಗಳನ್ನು ಮರೆಮಾಚಿ, ವಿಳಂಬ ಮಾಡಿರುವ ಪ್ರಕರಣಗಳೂ ಕೂಡ ನಡೆದಿವೆ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವಿಳಂಬ ಮಾಡಿ ತಪ್ಪು ಮಾಡದ ಅಧಿಕಾರಿಗಳಿಗೆ ತೊಂದರೆ ನೀಡುವುದು ಒಂದು ಕಡೆಯಾದರೆ, ತಪ್ಪು ಮಾಡಿರುವ ಅಧಿಕಾರಿಗಳಿಗೆ ರಕ್ಷಣೆ ನೀಡುವುದು ಮತ್ತೊಂದು ಪರಿಣಾಮವಾಗಿರುತ್ತದೆ. ಇವರೆಡೂ ನ್ಯಾಯಕ್ಕೆ ವಿರುದ್ಧ. ಆಡಳಿತ ಸುಧಾರಣೆಯಾಗಬೇಕಾದರೆ ಸಮಯಕ್ಕೆ ಸರಿಯಾಗಿ ವಿಚಾರಣೆಗಳು ಜರುಗಿ ಅಮಾಯಕರನ್ನು ದೋಷಮುಕ್ತಗೊಳಿಸಿ, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಅವಶ್ಯಕ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ವಿವರಿಸಿದ್ದಾರೆ.

ಅಧಿಕಾರಿಗಳಿಗೆ ನೀಡಿದ ಸೂಚನೆಗಳು

  1. ವಿವಿಧ ಹಂತಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಪೂರ್ಣ ಪಟ್ಟಿ ತಯಾರಿಸುವುದು.
  2. ವಿಚಾರಣಾಧಿಕಾರಿಗಳು, ಮಂಡನಾಧಿಕಾರಿಗಳ ನೇಮಕ ಮತ್ತು ಇತರೆ ಪ್ರಕ್ರಿಯೆಗಳಲ್ಲಿ ವಿಳಂಬ ಆಗದಂತೆ ಮಾಡುವುದು. ಈ ಹಂತಗಳಲ್ಲಿ ಕಡತಗಳನ್ನು ಮರೆಮಾಚಲು ಅವಕಾಶ ನೀಡಬಾರದು. ವಿಳಂಬವಿಲ್ಲದೆ ವಿಚಾರಣೆಗೆ ಒಳಪಡಿಸುವುದು ಹಾಗೂ ಮುಕ್ತಾಯಗೊಳಿಸುವುದು.
  3. ಹಾಲಿ ಚಾಲ್ತಿಯಲ್ಲಿರುವ ವಿಚಾರಣೆಗಳನ್ನು ಮತ್ತು ಈ ನಂತರದ ಪ್ರಕರಣಗಳನ್ನು ನಿಗದಿತ ಸಮಯದೊಳಗೆ ಮುಕ್ತಾಯ ಮಾಡಲು ವಿಚಾರಣಾಧಿಕಾರಿಗಳನ್ನು ತಾಕೀತು ಮಾಡುವುದು.
  4. ವಿಚಾರಣಾ ಕಾಲಾವಧಿಯನ್ನು ಅನಗತ್ಯವಾಗಿ ವಿಸ್ತರಣೆ ಮಾಡಕೂಡದು. ಅನಿವಾರ್ಯವಿದ್ದ ಸಂದರ್ಭಗಳಲ್ಲಿ ಮಾತ್ರ ಒಂದು ವಿಸ್ತರಣೆ ನೀಡುವುದು, ವಿಸ್ತರಣೆಗಳ ಮೂಲಕ ವಿಳಂಬಕ್ಕೆ ದಾರಿ ಮಾಡಿಕೊಡಬಾರದು.
  5. ಪ್ರಕರಣಗಳು ಅನಿವಾರ್ಯ ಕಾರಣಗಳಿಂದಾಗಿ ನ್ಯಾಯಾಲಯದ ಮೆಟ್ಟಿಲನ್ನು ತಲುಪಿದಲ್ಲಿ, ಇಂತಹ ಪ್ರಕರಣಗಳ ಶೀಘ್ರ ಮತ್ತು ಪರಿಣಾಮಕಾರಿ ವಿಲೇವಾರಿಗಾಗಿ ಕಾನೂನು ಕ್ರಮ ವಹಿಸುವುದು.
  6. ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಈ ಪ್ರಕರಣಗಳ ವಿಲೇವಾರಿ/ಪ್ರಗತಿ ಕುರಿತು ಪರಿಶೀಲನೆ ಮಾಡುವುದು ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ಆಗ್ಗಿಂದಾಗ್ಗೆ ನೀಡುವುದು.
  7. ವಿಚಾರಣಾ ವರದಿಗಳನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರುವುದು. ಕಡತಗಳನ್ನು ವಿಚಾರಣೆಗೆ ಒಪ್ಪಿಸುವುದು ಹಾಗೂ ವಿಚಾರಣಾ ನಂತರ ಅಥವಾ ಯಾವುದೇ ಹಂತದಲ್ಲಿ ವಿಳಂಬ ಮಾಡಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವುದು.

“ರಾಜ್ಯದ ಜನತೆಗೆ ನಾವು ನೀಡಿದ ಭರವಸೆಗೆ ಬದ್ಧರಾಗಿದ್ದೇವೆ. ಹೀಗಾಗಿ ಕಂದಾಯ ಇಲಾಖೆಯ ಸೇವೆಯನ್ನು ಜನರಿಗೆ ಮತ್ತಷ್ಟು ಹತ್ತಿರ ಕೊಂಡೊಯ್ಯಲು, ನೇರ, ಶುದ್ಧ ಮತ್ತು ಪ್ರಗತಿಪರ ಆಡಳಿತ ನೀಡಲು ಎಲ್ಲ ಇಲಾಖೆಗಳ ಮಾತೃ ಇಲಾಖೆಯಾದ ಕಂದಾಯ ಇಲಾಖೆಯಲ್ಲಿ ಮತ್ತಷ್ಟು ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂಬುದನ್ನು ನಾನು ಈ ಮೂಲಕ ತಿಳಿಯಪಡಿಸಲು ಇಚ್ಛಿಸುತ್ತೇನೆ” ಎಂದು ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತರಿಗೆ ಮೀಸಲಿರುವ ಹಣ ಗ್ಯಾರಂಟಿಗಳಿಗೆ ಬಳಕೆಯಾದರೆ ಸರ್ಕಾರದ ವಿರುದ್ಧ ಹೋರಾಟ: ದಲಿತ ಸಂಘರ್ಷ ಸಮಿತಿ ಎಚ್ಚರಿಕೆ

ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು...

ಹರಿಯಾಣ ಚುನಾವಣೆ | ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಸೇರಿ 5 ಗ್ಯಾರಂಟಿ ಘೋಷಿಸಿದ ಎಎಪಿ

ಈ ವರ್ಷದ ಅಕ್ಟೋಬರ್‌ನಲ್ಲಿ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲ...

ಶಿರೂರು ಗುಡ್ಡ ಕುಸಿತ | ನೊಂದ ಕುಟುಂಬಗಳ ಜತೆ ಸರಕಾರ ನಿಲ್ಲಬೇಕು: ಎಚ್‌ ಡಿ ಕುಮಾರಸ್ವಾಮಿ

ರಾಜ್ಯ ಸರಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು...

ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ....