ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮುಂದುವರಿದ ಸಾವಿನ ಸರಣಿ: ಮತ್ತೆ ನಾಲ್ಕು ಮಕ್ಕಳ ಸಹಿತ 7 ಮಂದಿ ಮೃತ್ಯು

Date:

Advertisements
  • ಕಳೆದ 48 ಗಂಟೆಗಳಲ್ಲಿ 31ಕ್ಕೆ ಏರಿದ ಸಾವಿನ ಸಂಖ್ಯೆ; 16 ಮಂದಿ ಮಕ್ಕಳು ಮೃತ್ಯು
  • ವೈದ್ಯಕೀಯ ನಿರ್ಲಕ್ಷ್ಯದ ಆರೋಪವನ್ನು ತಳ್ಳಿ ಹಾಕಿದ ಆಸ್ಪತ್ರೆಯ ಡೀನ್

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿದ ನಂತರ ನಿನ್ನೆ ತಡರಾತ್ರಿ ಏಳು ರೋಗಿಗಳು ಮೃತಪಟ್ಟಿದ್ದು, ಕಳೆದ 48 ಗಂಟೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಈಗ ಶಂಕರರಾವ್ ಚವ್ಹಾಣ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಏಳು ಮಂದಿಯಲ್ಲಿ ನಾಲ್ವರು ಮಕ್ಕಳಿದ್ದು, ಈವರೆಗೆ ಮೃತಪಟ್ಟ 31 ರೋಗಿಗಳ ಪೈಕಿ 16 ಮಂದಿ ಮಕ್ಕಳು ಎಂದು ತಿಳಿದುಬಂದಿದೆ.

ವೈದ್ಯಕೀಯ ನಿರ್ಲಕ್ಷ್ಯದ ಆರೋಪವನ್ನು ಆಸ್ಪತ್ರೆಯ ಡೀನ್ ಡಾ.ಶ್ಯಾಮರಾವ್ ವಾಕೋಡೆ ತಳ್ಳಿಹಾಕಿದ್ದು, ಔಷಧಿಗಳು ಅಥವಾ ವೈದ್ಯರ ಕೊರತೆಯಿಲ್ಲ. ರೋಗಿಗಳಿಗೆ ಸರಿಯಾದ ಆರೈಕೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ.

Advertisements

ಸಾವಿನ ಕುರಿತು ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಛತ್ರಪತಿ ಸಂಭಾಜಿನಗರ ಜಿಲ್ಲೆಯಿಂದ ಮೂರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸಲ್ಲಿಸಲು ಆದೇಶ ನೀಡಲಾಗಿದೆ. ನಾನು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇನೆ” ಎಂದು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ನಿರ್ದೇಶಕ ಡಾ.ದಿಲೀಪ್ ಮಹೈಸೇಕರ್ ನಿನ್ನೆ ತಿಳಿಸಿದ್ದರು.

ಸರ್ಕಾರಿ ಆಸ್ಪತ್ರೆಯಲ್ಲಿನ ಸಾವಿನ ಸರಣಿ ವರದಿಯು ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದು, ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿದೆ.

“ಘಟನೆಯು ಅತ್ಯಂತ ನೋವಿನ, ಗಂಭೀರ ಮತ್ತು ಆತಂಕಕಾರಿ” ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿವರವಾದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಥಾಣೆಯ ಸರ್ಕಾರಿ ಆಸ್ಪತ್ರೆಯಲ್ಲಿ ಅಲ್ಪಾವಧಿಯಲ್ಲಿ 18 ರೋಗಿಗಳು ಸಾವನ್ನಪ್ಪಿದ್ದ ಘಟನೆಯನ್ನು ಇದೇ ವೇಳೆ ಖರ್ಗೆ ನೆನಪಿಸಿದ್ದಾರೆ.

ಮಹಾರಾಷ್ಟ್ರದ ಆಡಳಿತಾರೂಢ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿಯನ್ನು ಗುರಿಯಾಗಿರಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಬಿಜೆಪಿ ಸರಕಾರ ಪ್ರಚಾರಕ್ಕೆ ಸಾವಿರಾರು ಕೋಟಿ ಖರ್ಚು ಮಾಡುತ್ತದೆ, ಆದರೆ ಮಕ್ಕಳ ಔಷಧಿ ಖರೀದಿಸಲು ಹಣವಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಏಕನಾಥ್ ಶಿಂಧೆ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ನಾಂದೇಡ್ ಆಸ್ಪತ್ರೆಗೆ ತಕ್ಷಣ ಬೇಕಾದ ಎಲ್ಲ ರೀತಿಯ ನೆರವನ್ನು ಒದಗಿಸಲು ಪ್ರಾಶಸ್ತ್ಯ ನೀಡಬೇಕು” ಎಂದು ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಹೇಳಿದ್ದಾರೆ.

maharashtra hospital

ನಿನ್ನೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಆಸ್ಪತ್ರೆಯ ಡೀನ್ ಡಾ.ಶ್ಯಾಮರಾವ್ ವಾಕೋಡೆ, “ಸೆಪ್ಟೆಂಬರ್ 30-ಅಕ್ಟೋಬರ್ 1 ರಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ 12 ನವಜಾತ ಶಿಶುಗಳು 0-3 ದಿನಗಳ ವಯಸ್ಸಿನವರಾಗಿದ್ದಾರೆ ಮತ್ತು ತುಂಬಾ ಕಡಿಮೆ ತೂಕ ಹೊಂದಿದ್ದರು. ಮಕ್ಕಳ ವಿಭಾಗದಲ್ಲಿ 142 ದಾಖಲಾತಿಗಳಾಗಿದ್ದು, ಅದರಲ್ಲಿ 42 ಇನ್ನೂ ಗಂಭೀರ ಪ್ರಕರಣಗಳು. ಆಮ್ಲಜನಕ ಮತ್ತು ವೆಂಟಿಲೇಟರ್ ಸೌಲಭ್ಯಗಳಿವೆ. ರೋಗಿಗಳು ಹಿಂಗೋಲಿ, ಪರ್ಭಾನಿ ಮತ್ತು ವಾಶಿಮ್ ಸೇರಿದಂತೆ ನೆರೆಯ ಜಿಲ್ಲೆಗಳಿಂದ ಬಂದವರು. ಕೆಲವರು ನೆರೆಯ ತೆಲಂಗಾಣದ ಹಳ್ಳಿಗಳಿಂದ ಬಂದವರು” ಎಂದು ಅವರು ಹೇಳಿದರು ಎಂದು ಹೇಳಿದ್ದಾರೆ.

ಈಗಾಗಲೇ ಮೃತಪಟ್ಟಿರುವ 12 ವಯಸ್ಕರಲ್ಲಿ ಐವರು ಪುರುಷರು ಮತ್ತು ಏಳು ಮಹಿಳೆಯರ ಪೈಕಿ ನಾಲ್ವರು ವಯಸ್ಕರಿಗೆ ಹೃದಯ ಸಂಬಂಧಿ ಕಾಯಿಲೆಗಳು, ಒಬ್ಬರು ವಿಷಪ್ರಾಷಣ ಸಮಸ್ಯೆಯಿಂದ ಬಳಲುತ್ತಿದ್ದರು, ಒಬ್ಬರಿಗೆ ಯಕೃತ್ತಿನ ಸಮಸ್ಯೆ, ಇಬ್ಬರು ಕಿಡ್ನಿ ರೋಗಿಗಳು ಮತ್ತು ಒಂದು ಪ್ರಕರಣವು ಗರ್ಭಾವಸ್ಥೆಯಲ್ಲಿನ ತೊಡಕು ಹಾಗೂ ಮೂರು ಅಪಘಾತ ಪ್ರಕರಣಗಳಾಗಿತ್ತು ಎಂದು ನಾಂದೇಡ್ ಜಿಲ್ಲಾಡಳಿತ ನಿನ್ನೆ ಹೊರಡಿಸಿದ್ದ ಹೇಳಿಕೆಯಲ್ಲಿ ತಿಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X