ಬೆಂಗಳೂರು ಅಭಿವೃದ್ಧಿಗೆ 7,000 ಕೋಟಿ ರೂ. ಅನುದಾನ ಘೋಷಣೆ; ಬಜೆಟ್‌ನಲ್ಲಿ ರಾಜಧಾನಿಗೆ ಬೇರೇನಿದೆ?

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಅನ್ನು ಇಂದು ಮಂಡಿಸಿದ್ದು, ಬೆಂಗಳೂರು ಅಭಿವೃದ್ಧಿಗೆ 7,000 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. ಹಾಗೆಯೇ ಬೆಂಗಳೂರಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ಸಿಎಂ ಘೋಷಿಸಿದ್ದಾರೆ.

- Advertisement -

ರಾಜ್ಯ ರಾಜಧಾನಿಯಲ್ಲಿ ಸಂಚಾರದಟ್ಟಣೆ ಅತೀ ದೊಡ್ಡ ಸಮಸ್ಯೆಯಾಗಿ ಪರಿವರ್ತನೆಯಾಗಿದೆ. ಈ ಸಮಸ್ಯೆ ನಿವಾರಣೆಗೆ ಟನಲ್ ರಸ್ತೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ 40 ಸಾವಿರ ಕೋಟಿ ರೂಪಾಯಿ ಘೋಷಿಸಿದ್ದಾರೆ. ಹಾಗೆಯೇ ಇದಕ್ಕಾಗಿ 19 ಸಾವಿರ ಕೋಟಿ ರೂಪಾಯಿ ಗ್ಯಾರಂಟಿಯನ್ನು ಸರ್ಕಾರದಿಂದ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? Karnataka Budget 2025 | ಅಂಗನವಾಡಿ ಕಾರ್ಯಕರ್ತರು, ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳ

40,000 ಕೋಟಿ ರೂ. ವೆಚ್ಚದಲ್ಲಿ ಬಿಬಿಎಂಪಿಗೆ ಉತ್ತರ-ದಕ್ಷಿಣ ಮತ್ತು ಪೂರ್ವ-ಪಶ್ಚಿಮ ಸುರಂಗ ಮಾರ್ಗದ ಕಾರಿಡಾರ್‌ಗಳನ್ನು ನಿರ್ಮಿಸಲು ಅನುಕೂಲವಾಗುವಂತೆ 19,000 ಕೋಟಿ ರೂ. ಗ್ಯಾರಂಟಿಯನ್ನು ಸರ್ಕಾರ ನೀಡಿದೆ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

ಇನ್ನು 2025-26 ಹಣಕಾಸು ವರ್ಷದಲ್ಲಿ ಪಾಲಿಕೆಯ ಜಾಹೀರಾತು ಉಪ-ವಿಧಿಗಳು 2025ರ ಅನುಷ್ಠಾನದಿಂದ ವರ್ಷಕ್ಕೆ 750 ಕೋಟಿ ರೂಪಾಯಿ ಆದಾಯವನ್ನು ಪಡೆಯುವ ಅಂದಾಜು ಮಾಡಲಾಗಿದೆ.

ರಾಜ್ಯ ರಾಜಧಾನಿಗೆ ಬಜೆಟ್‌ನಲ್ಲಿ ದೊರಕಿದ್ದೇನು?

ಪ್ರತಿ ವರ್ಷ ನೀಡಲಾಗುತ್ತಿದ್ದ ಮೂರು ಸಾವಿರ ಕೋಟಿ ರೂಪಾಯಿ ಅನುದಾನವನ್ನು 7 ಸಾವಿರ ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ಈ ಅನುದಾನವನ್ನು ಬಳಸಿ ಬೃಹತ್ ಅಭಿವೃದ್ದಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಅನುಷ್ಠಾನ ಮಾಡಲಾಗುವುದು. ಅದಕ್ಕಾಗಿ ವಿಶೇಷ ಉದ್ದೇಶಿತ ಸಂಸ್ಥೆ ಸ್ಥಾಪಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ನಮ್ಮ ಮೆಟ್ರೋ ಹಂತ ಮೂರು ಯೋಜನೆ ಮೂಲಕ 8,916 ಕೋಟಿ ರೂಪಾಯಿ ವೆಚ್ಚದಲ್ಲಿ 40.50 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ರಸ್ತೆಯನ್ನು ನಿರ್ಮಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ. ದೇವನಹಳ್ಳಿಯವರೆಗೆ ಮೆಟ್ರೋ ವಿಸ್ತರಣೆ ಮಾಡಲು ಯೋಜಿಸಲಾಗಿದೆ.

ಇದನ್ನು ಓದಿದ್ದೀರಾ? ಕರ್ನಾಟಕ ಬಜೆಟ್ | ತೊಗರಿ ಖರೀದಿಗೆ ಹೆಚ್ಚುವರಿ ಪ್ರೋತ್ಸಾಹಧನ: ಸಿಎಂ ಸಿದ್ದರಾಮಯ್ಯ

ಪ್ರಸ್ತುತ ನಮ್ಮ ಮೆಟ್ರೋದಲ್ಲಿ ಪ್ರತಿದಿನ ಸರಾಸರಿ 8.5 ಲಕ್ಷ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. 68 ನಿಲ್ದಾಣಗಳ ಒಳಗೊಂಡಂತೆ 79.65 ಕಿ.ಮೀ. ಮಾರ್ಗದಲ್ಲಿ ನಮ್ಮ ಮೆಟ್ರೋ ಕಾರ್ಯಚರಿಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ 98.60 ಕಿ.ಮೀ ಮಾರ್ಗವನ್ನು ವಿಸ್ತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

ಬೆಂಗಳೂರು ನಗರದಲ್ಲಿ 120.ಕಿ.ಮೀ. ಉದ್ದದ ಮೇಲ್ಸೇತುವೆ ಮತ್ತು ಗ್ರೇಡ್ ಸೆಪರೇಟರ್‌ಗಳನ್ನು ನಿರ್ಮಿಸಲಾಗುವುದು.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ 460 ಕಿ.ಮೀ. ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆ ಜಾಲವನ್ನು 660 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಸಂಚಾರದಟ್ಟಣೆ ನಿವಾರಣೆಗಾಗಿ ಕಾಲುವೆಯ ಬಫರ್ ಪ್ರದೇಶವನ್ನು ಬಳಸಿಕೊಂಡು 3,000 ಕೋಟಿ ರೂ. ವೆಚ್ಚದಲ್ಲಿ 300 ಕಿ.ಮೀ. ಹೆಚ್ಚುವರಿ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಲಾಗುವುದು.

ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯನ್ನು ಬೆಂಗಳೂರು ಬಿಸ್‌ನೆಸ್ ಕಾರಿಡಾರ್ ಎಂದು ಮರುನಾಮಕರಣ ಮಾಡಿ 73 ಕಿ.ಮೀ ಉದ್ದದ ರಸ್ತೆಯನ್ನು ನಿರ್ಮಿಸಲು ಹುಡೋ ಬ್ಯಾಂಕ್ ನೆರವಿನೊಂದಿಗೆ 27,000 ಕೋಟಿ ರೂ. ಯೋಜನೆಯನ್ನು ರೂಪಿಸಲಾಗಿದೆ. ಇದಕ್ಕಾಗಿ ಈಗಾಗಲೇ ಪ್ರತ್ಯೇಕ ತಂಡಗಳನ್ನು ರಚಿಸಿ ಭೂಸ್ವಾದೀನ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.

ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ | ಉನ್ನತ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಸಿಎಂ ಕೊಟ್ಟಿದ್ದೇನು?

‘ಬ್ಯಾಂಡ್ ಬೆಂಗಳೂರು’ ಯೋಜನೆಯಡಿ 2024-25 ಸಾಲಿನಲ್ಲಿ ಅನುಮೋದನೆಗೊಂಡ 21 ಯೋಜನೆಗಳನ್ನು 1,800 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಹಾಗೆಯೇ ‘ಬ್ಯಾಂಡ್ ಬೆಂಗಳೂರು’ ಅಭಿಯಾನದ ಅಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ರೂ.ವೆಚ್ಚದಲ್ಲಿ ‘ಸಮಗ್ರ ಆರೋಗ್ಯ ಯೋಜನೆ’ಯನ್ನು ಜಾರಿಗೊಳಿಸಲಾಗುವುದು.

ಬೆಂಗಳೂರು ನಗರದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಪ್ರವಾಹಸ್ಥಿತಿ ಉಂಟಾಗಿತ್ತು. ಇಂತಹ ಪರಿಸ್ಥಿತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ಗಳನ್ನು ನಿರ್ಮಿಸಲು ಬಿಬಿಎಂಪಿ ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿಗೆ ಸುಮಾರು ಮೂರು ಸಾವಿರ ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ತಿಳಿಸಿದ್ದಾರೆ.

ಕಳೆದ ವರ್ಷ ಕುಡಿಯುವ ನೀರಿನ ಅಭಾವ ಉಂಟಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಂಡಿರುವಂತಿದೆ. 2024-25ನೇ ಸಾಲಿನಲ್ಲಿ 5,550 ಕೋಟಿ ರೂ. ಮೊತ್ತದಲ್ಲಿ 775 ಎಂಎಲ್‌ಡಿ ಹೆಚ್ಚುವರಿ ನೀರಿನ ಸಾಮರ್ಥ್ಯವನ್ನು ಹೊಂದಿರುವ ಕಾವೇರಿ 5ನೇ ಹಂತದ ಯೋಜನೆಯನ್ನು ಲೋಕಾರ್ಪಣೆ ಮಾಡಲಾಗುವುದು. ಈ ಯೋಜನೆಯಿಂದಾಗಿ 110 ಹಳ್ಳಿಗಳಲ್ಲಿರುವ 50 ಲಕ್ಷ ನಿವಾಸಿಗಳಿಗೆ ನೀರು ಲಭ್ಯವಾಗಲಿದೆ. ಕಾವೇರಿ ಹಂತ-6 ಅನುಷ್ಠಾನಕ್ಕಾಗಿ ವಿಸ್ಕೃತ ಯೋಜನಾ ವರದಿಯನ್ನು ತಯಾರಿಸಲಾಗುತ್ತಿದೆ.

ಬಿಡಬ್ಲ್ಯೂಎಸ್‌ಎಸ್‌ಬಿ ವತಿಯಿಂದ ಎಸ್.ಟಿ.ಪಿ ಘಟಕಗಳ ತ್ಯಾಜ್ಯವನ್ನು ಬಳಸಿ ಬಯೋಗ್ಯಾಸ್-ಆಧಾರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್‌ಗಳ ಉಪಯೋಗವನ್ನು ಪಡೆಯುವ ನಿಟ್ಟಿನಲ್ಲಿ ಪಿಪಿಪಿ ಮಾದರಿಯಲ್ಲಿ ಯೋಜನೆ ರೂಪಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...