ಆಶಾ ಕಾರ್ಯಕರ್ತೆಯರಿಗೆ 7 ಸಾವಿರ ಗೌರವಧನ ಖಾತ್ರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ

Date:

Advertisements
  • ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರಿಂದ ಧರಣಿ
  • ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಮನವಿ ಸ್ವೀಕರಿಸಿದ ಸಚಿವ ದಿನೇಶ್ ಗುಂಡೂರಾವ್

“ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಖಾತ್ರಿಯಾಗಿ ಪಾವತಿಯಾಗುತ್ತಿದ್ದ 5 ಸಾವಿರದ ಬದಲು 7 ಸಾವಿರ ನೇರ ವರ್ಗಾವಣೆಗೆ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧ ಇದೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರಿಗೆ ಭರವಸೆ ನೀಡಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರ ಅಹವಾಲುಗಳನ್ನು ಆಲಿಸಿದ ಬಳಿಕ ಸಚಿವರು ಭರವಸೆ ನೀಡಿದ್ದು, ಆಶಾ ಕಾರ್ಯಕರ್ತೆಯರ ಪರ ಸರ್ಕಾರವಿದೆ. ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು.

Gundu Rao 1

 

“ಆಶಾ ಕಾರ್ಯಕರ್ತೆಯರ ಕುಂದುಕೊರತೆಗಳ ನಿವಾರಣೆಯ ನಿಟ್ಟಿನಲ್ಲಿ ನಮ್ಮ ಸರ್ಕಾರ ಮತ್ತು ಇಲಾಖೆಯು ಮುಕ್ತ ಮನಸ್ಸಿನಲ್ಲಿದ್ದು, ತ್ವರಿತ ಪ್ರತಿಸ್ಪಂದನೆಗೆ ಸದಾ ಸಿದ್ಧವಿದೆ  ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನದ ವಿತರಣೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ತಾನು ಗಳಿಸಿದ ಪ್ರೋತ್ಸಾಹ ಧನದ ವಿವರಗಳನ್ನು ಗಮನಿಸಲು ಆಶಾ ನಿಧಿ ತಂತ್ರಾಂಶದಲ್ಲಿ “ASHA View My Incentive” ಎಂಬ ಹೊಸ ಆ್ಯಪ್ ಅನ್ನು ರಚಿಸಲಾಗಿದ್ದು, ಆಶಾ ಕಾರ್ಯಕರ್ತೆಯರು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪಡೆದ ಪ್ರೋತ್ಸಾಹಧನದ ವಿವರಗಳನ್ನು ವೀಕ್ಷಿಸಬಹುದಾಗಿದೆ” ಎಂದು ತಿಳಿಸಿದರು.

Advertisements

“ಆಶಾ ಕಾರ್ಯಕರ್ತರಿಗೆ ಮಾಸಿಕವಾಗಿ ರಾಜ್ಯ ಸರ್ಕಾರ ನೀಡುವ 5 ಸಾವಿರದ ಜೊತೆಗೆ 2 ಸಾವಿರ ಸೇರಿಸಿ ಒಟ್ಟು 7 ಸಾವಿರ ಖಾತ್ರಿ ಪಡಿಸುವುದಾಗಿ ಘೋಷಿಸಿದರು.‌ ಉಳಿದಂತೆ ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನ ಪರಗಣಿಸಿ ಪ್ರೋತ್ಸಾಹ ಧನವನ್ನ ಪಾರದರ್ಶಕವಾಗಿ ನೀಡಲಾಗುವುದು” ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

“ಒಂದು ವೇಳೆ ಯಾರಿಗೆ ತಮ್ಮ ಚಟುವಟಿಕೆಗಳ ಪ್ರಕಾರ ಪ್ರೋತ್ಸಾಹಧನ ದೊರೆಯುವುದಿಲ್ಲ ಅದನ್ನ 6 ತಿಂಗಳ ಕಾಲಮಿತಿಯೊಳಗೆ ಪರಿಹರಿಸಬೇಕು. ಕಾಲಮಿತಿಯೊಳಗೆ ಪರಿಹಾರವಾಗದಿದ್ದರೆ ಕಾರ್ಯಕರ್ತೆಯರಿಗೆ ನೇರವಾಗಿ ಸಿಗಬೇಕಾದ ಪ್ರೋತ್ಸಾಹಧನ ವರ್ಗಾವಣೆಯಾಗುವಂತೆ ವ್ಯವಸ್ಥೆ ಕಲ್ಪಿಸಲಾಗುವುದು” ಎಂದು ಭರವಸೆ ನೀಡಿದರು.

asha workers

“ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಚಟುವಟಿಕೆಗಳಿಗೆ ನೀಡುವ ಟೀಮ್ ಬೇಸ್ಟ್ ಇನ್ಸೆಂಟಿವ್ ಅನ್ನು ಆಶಾ ನಿಧಿ ತಂತ್ರಾಂಶದ ಮುಖೇನವೇ ನೇರವಾಗಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವುದು. ಆಶಾ ಕಾರ್ಯಕರ್ತೆಯರು ತಾವು ನಿರ್ವಹಿಸಿದ ಚಟುವಟಿಕೆಗಳನ್ನು ದಾಖಲಿಸಲು ಪ್ರತ್ಯೇಕವಾದ ಮೊಬೈಲ್ ಅಪ್ಲಿಕೇಷನ್ ಅನ್ನು ವಿನ್ಯಾಸ ಮಾಡಲಾಗುವುದು. ಆಶಾ ಕಾರ್ಯಕರ್ತೆಯರೇ ತಾವು ನಿರ್ವಹಿಸಿದ ಕಾರ್ಯ ಚಟುವಟಿಕೆಗಳು ಹಾಗೂ ಸಿಗಬೇಕಾದ ಪ್ರೋತ್ಸಾಹಧನವನ್ನ ಆ್ಯಪ್ ಅಲ್ಲಿ ನೋಡಿಕೊಳ್ಳಲು ಅವಕಾಶ ಕಲ್ಪಿಸುವಂತಹ ಪಾರದರ್ಶಕ ಕ್ರಮಗಳನ್ನ ಕೈಗೊಳ್ಳುತ್ತಿದ್ದೇವೆ” ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

“ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ವೇತನ ನಿಗದಿ ಮಾಡುವ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸುತ್ತೇನೆ. ಆದರೆ ಸದ್ಯಕ್ಕೆ ಇರುವ ಸಮಸ್ಯೆಗಳನ್ನ ಪರಿಹರಿಸುವ ಕೊಡುವ ಜವಾಬ್ದಾರಿ ಆರೋಗ್ಯ ಸಚಿವನಾಗಿ ನನ್ನ ಕರ್ತವ್ಯ. ಈ ನಿಟ್ಟಿನಲ್ಲಿ ತಾಂತ್ರಿಕ ಸಮಸ್ಯೆಗಳನ್ನ ಸರಿಪಡಿಸಲಾಗುತ್ತಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬಜೆಟ್‌ ಅಧಿವೇಶನ | ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ: ಚಲುವರಾಯಸ್ವಾಮಿ

“ಸರ್ಕಾರದಿಂದ ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ನೀಡುವ 2 ಸಾವಿರ ರೂ. ಆಶಾ ಕಾರ್ಯಕರ್ತೆಯರಿಗೂ ಅನ್ವಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. 5 ಲಕ್ಷ ಆರೋಗ್ಯ ವಿಮೆಯನ್ನು ಆಶಾ ಕಾರ್ಯಕರ್ತೆಯರಿಗೆ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಮಹಿಳೆಯರ ಪರವಾಗಿದೆ. ಹಾಗಾಗಿ, ಪ್ರತಿಭಟನೆ ನಡೆಸುವ ಅಗತ್ಯತೆ ಇಲ್ಲ” ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X