ಸಿಗದ ಆಹಾರ ಭದ್ರತೆ; 79 ಲಕ್ಷ ಫಲಾನುಭವಿಗಳಿಗೆ ದೊರೆಯುತ್ತಿಲ್ಲ ಉಚಿತ ಪಡಿತರ; ನಿಖರ ಸಂಖ್ಯೆ ಇನ್ನೂ ಅಧಿಕ

Date:

ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ (NFSS) ಅಡಿಯಲ್ಲಿ ದೇಶಾದ್ಯಂತ 81.35 ಕೋಟಿ ಫಲಾನುಭವಿಗಳಿಗೆ ಆಹಾರ ಒದಗಿಸುವ ಗುರಿ ಇದೆ. ಆದಾಗ್ಯೂ, 80.56 ಕೋಟಿ ಫಲಾನುಭವಿಗಳನ್ನು ರಾಜ್ಯಗಳು ಗುರುತಿಸಿವೆ. ಇನ್ನೂ, ಸುಮಾರು 79 ಲಕ್ಷ ಫಲಾನುಭವಿಗಳು ಪಡಿತರ ಯೋಜನೆಯಡಿ ಉಚಿತ ಆಹಾರ ಧಾನ್ಯಗಳನ್ನು ಪಡೆಯಲಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

- Advertisement -

ರಾಜ್ಯಸಭೆಯಲ್ಲಿ ಪ್ರಶ್ನೋತ್ತರದ ವೇಳೆ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಅವರು ‘ಬಡತನ ರೇಖೆಗಿಂತ ಕೆಳಗಿರುವವರನ್ನು ಗುರುತಿಸಲು ಮತ್ತು ಅವರಿಗೆ ಪಡಿತರ ದೊರೆಯುವಂತೆ ಮಾಡಲು ಸರ್ಕಾರ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ’ ಎಂದು ಪ್ರಶ್ನಿಸಿದ್ದರು. ಅವರ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ, “ಫಲಾನುಭವಿಗಳನ್ನು ಗುರುತಿಸುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯು (NFSA) ಗ್ರಾಮೀಣ ಜನಸಂಖ್ಯೆಯ 75% ಮತ್ತು ನಗರ ಜನಸಂಖ್ಯೆಯ 50% ಜನರನ್ನು ಪಡಿತರ ವ್ಯವಸ್ಥೆಯ ವ್ಯಾಪ್ತಿಗೆ ತರಲು ಅವಕಾಶ ನೀಡುತ್ತದೆ. 2011ರ ಜನಗಣತಿಯ ಪ್ರಕಾರ 81.35 ಕೋಟಿ ಜನರು ಪಡಿತರ ವ್ಯಾಪ್ತಿಗೆ ಬರುತ್ತಾರೆ. ಆದಾಗ್ಯೂ, ಈವರೆಗೆ 80.56 ಕೋಟಿ ಫಲಾನುಭವಿಗಳನ್ನು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಗುರುತಿಸಿವೆ. 79 ಲಕ್ಷ ಜನರನ್ನು ಇನ್ನೂ ಉಚಿತ ಪಡಿತರ ವ್ಯವಸ್ಥೆಯ ವ್ಯಾಪ್ತಿಗೆ ತರಬೇಕಾಗಿದೆ” ಎಂದು ಹೇಳಿದ್ದಾರೆ.

“ಫಲಾನುಭವಿಗಳನ್ನು ಗುರುತಿಸುವುದು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ನಿರಂತರ ಪ್ರಕ್ರಿಯೆಯಾಗಿದೆ. ಇದರಲ್ಲಿ ಅನರ್ಹ/ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದು, ಸಾವು – ವಲಸೆ ಇತ್ಯಾದಿಗಳ ಕಾರಣದಿಂದಾಗಿ ಹೊರಗಿಡುವುದು ಹಾಗೂ ಪಡಿತರ ವ್ಯವಸ್ಥೆಯಿಂದ ಹೊರಗುಳಿದ ಅರ್ಹ ಕುಟುಂಬಗಳನ್ನು ಸೇರಿಸುವುದು ರಾಜ್ಯಗಳ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಆಹಾರದ ಸ್ವಾತಂತ್ರ್ಯವನ್ನು ಮನ್ನಿಸದ ಸಮಾಜದಲ್ಲಿ ಅರ್ಥಪೂರ್ಣ ಡೆಮಾಕ್ರಸಿಯಿದೆ ಎನ್ನಲಾಗದು

ಸಚಿವರ ಉತ್ತರಕ್ಕೆ ಪ್ರತಿಕ್ರಿಯಿಸಿರುವ ಜೈರಾಮ್ ರಮೇಶ್, “ಸಚಿವರ ಉತ್ತರಂತೆ ಉಚಿತ ಪಡಿತರವನ್ನು ಪಡೆಯಲು ಅರ್ಹರಾಗಿರುವ ಸುಮಾರು 80 ಲಕ್ಷ ಭಾರತೀಯರು ಇನ್ನೂ ಪಡಿತರವನ್ನು ಪಡೆಯಲಾಗುತ್ತಿಲ್ಲ. ಉದ್ದೇಶಿತ ಮತ್ತು ಗುರುತಿಸಲಾದ ಫಲಾನುಭವಿಗಳ ನಡುವಿನ ಈ ಅಂತರವನ್ನು ಹೇಗೆ ನಿಭಾಯಿಸಲಾಗುತ್ತದೆ” ಎಂದು ಕೇಳಿದರು.

ಅಲ್ಲದೆ, “2021ರ ಜನಗಣತಿ ಇನ್ನೂ ನಡೆಯದ ಕಾರಣ, ಪ್ರಸ್ತುತ ಸಂದರ್ಭದಲ್ಲಿ ಪಡಿತರ ವಂಚಿತರಾಗಿರುವ ನಿಖರ ಜನಸಂಖ್ಯೆ ಇನ್ನೂ ಹೆಚ್ಚಿದೆ. NFSA ಅಡಿಯಲ್ಲಿ ಅರ್ಹರಾಗಿರುವ ಸುಮಾರು 14 ಕೋಟಿ ಭಾರತೀಯರು ಪರಿತರವನ್ನು ಪಡೆಯುತ್ತಿಲ್ಲ. ಇದು ಸ್ಪಷ್ಟವಾಗಿ ತಿಳಿಸಬೇಕಾದರೆ 2021ರಲ್ಲಿ ಜನಗಣತಿ ನಡೆಯಬೇಕಿತ್ತು. ಇನ್ನೂ ನಡೆದಿಲ್ಲ. ಯಾವಾಗ ನಡೆಯುತ್ತದೆ” ಎಂದು ರಮೇಶ್‌ ಪ್ರಶ್ನಿಸಿದರು.

“ಸರಿಯಾದ ಫಲಾನುಭವಿಗಳನ್ನು ಹುಡುಕುವುದು ರಾಜ್ಯ ಸರ್ಕಾರದ ಕೆಲಸ. ನಾವು ರಾಜ್ಯ ಸರ್ಕಾರಕ್ಕೆ ಮತ್ತೆ ಮತ್ತೆ ನೆನಪಿಸುತ್ತಿದ್ದೇವೆ” ಎಂದು ಹೇಳಿದ ಸಚಿವ ಜೋಶಿ, ಹೊಣೆಗಾರಿಕೆಯನ್ನು ರಾಜ್ಯಗಳ ಮೇಲೆ ಹಾಕಿ, ಸುಮ್ಮನಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...