ಬಿಆರ್‌ಎಸ್‌ ನಾಯಕ ಕೆಟಿಆರ್ ಸೇರಿದಂತೆ 8 ನಾಯಕರಿಗೆ ‘ಗೃಹಬಂಧನ’

Date:

ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ, ತೆಲಂಗಾಣ ಮಾಜಿ ಸಚಿವ ಕಲ್ವಕುಂಟ್ಲ ತಾರಕ ರಾಮರಾವ್ (ಕೆಟಿಆರ್), ಹರೀಶ್ ರಾವ್ ಮತ್ತು ಇತರ ಆರು ಮಂದಿ ಬಿಆರ್‌ಎಸ್‌ ನಾಯಕರನ್ನು ಮಂಗಳವಾರ ಬೆಳಿಗ್ಗೆ ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದಾರೆ ಎಂದು ಪಕ್ಷ ತಿಳಿಸಿದೆ.

- Advertisement -

ಫಾರ್ಮುಲಾ ಇ ರೇಸ್ ಪ್ರಕರಣದ ತನಿಖೆ ನಡೆಸುತ್ತಿರುವ ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕರ ಪಾತ್ರವಿದೆ ಎಂದು ಆರೋಪಿಸಿದೆ. ಆದರೆ, ಆರೋಪವನ್ನು ಬಿಆರ್‌ಎಸ್‌ ನಾಯಕರು ನಿರಾಕರಿಸಿದ್ದಾರೆ. ಆರೋಪವು ‘ಕ್ಷುಲ್ಲಕ’ ಮತ್ತು ‘ಕಾನೂನು ಪ್ರಕ್ರಿಯೆಯ ದುರುಪಯೋಗ’ ಎಂದು ಕೆಟಿಆರ್‌ ಕರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ನಡುವೆ, ಸೋಮವಾರ, ಬಿಆರ್‌ಎಸ್‌ ಶಾಸಕ ಪಾಡಿ ಕೌಶಿಕ್ ರೆಡ್ಡಿ ಅವರನ್ನು ಪೊಲೀಸರು ಬಂಧಿಸಿದ್ದರು. ಇದೀಗ, ಹೈದರಾಬಾದ್‌ನ ಗಚಿಬೌಲಿಯಲ್ಲಿರುವ ಕೆಟಿಆರ್ ಅವರ ನಿವಾಸದ ಹೊರಗೆ ಭಾರೀ ಪೊಲೀಸರನ್ನು ನಿಯೋಜಿಸಲಾಗಿದ್ದು, ಕೆಟಿಆರ್ ಅವರನ್ನು ಮನೆಯಲ್ಲಿಯೇ ಬಂಧನದಲ್ಲಿರಿಸಲಾಗಿದೆ.

ಫಾರ್ಮುಲಾ-ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 9ರಂದು ಎಸಿಬಿ ಮುಂದೆ ಕೆಟಿಆರ್‌ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಮಾತನಾಡಿದ್ದ ಕೆಟಿಆರ್, “ಆರೋಪಗಳಿಗೆ ಯಾವುದೇ ಗಣನೀಯ ಪುರಾವೆಗಳಿಲ್ಲ. ಆದರೂ, ಏಳು ಗಂಟೆಗಳಿಗೂ ಹೆಚ್ಚು ಕಾಲ ನನ್ನನ್ನು ಪುನರಾವರ್ತಿತ ಪ್ರಶ್ನೆಗಳನ್ನು ಪದೇ ಪದೇ ಕೇಳಲಾಗಿದೆ” ಎಂದು ಹೇಳಿಕೊಂಡಿದ್ದರು.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವು ‘ಕ್ಷುಲ್ಲಕ’ ಮತ್ತು ‘ಕಾನೂನುಬಾಹಿರ’ವಾಗಿವೆ. ರಾಜ್ಯ ಸರ್ಕಾರದ ವಿರುದ್ಧ ಬಿಆರ್‌ಎಸ್ ಹೋರಾಡುತ್ತಿದ್ದು, ಕಾರಣಕ್ಕಾಗಿ ತಮ್ಮ ಮೇಲೆ ಇಂತಹ ಆರೋಪ ಹೊರಿಸಲಾಗಿದೆ ಎಂದು ಕೆಟಿಆರ್ ಪ್ರತಿಪಾದಿಸಿದ್ದರು.

ಈ ವರದಿ ಓದಿದ್ದೀರಾ?: 70 ಗಂಟೆ, 90 ಗಂಟೆ ಕೆಲಸ: ಉದ್ಯೋಗಿಗಳ ರಕ್ತ ಹೀರುವುದು ಲಾಭಕೋರ ಬಂಡವಾಳಿಗರ ಸಂಚು

“ಇದರಲ್ಲಿ ಭ್ರಷ್ಟಾಚಾರ ಎಲ್ಲಿದೆ ಎಂದು ನಾನು ಅವರನ್ನು (ಎಸಿಬಿ) ಕೇಳಿದೆ. ಹೈದರಾಬಾದ್ ಮತ್ತು ತೆಲಂಗಾಣವನ್ನು ವಿಶ್ವ ವೇದಿಕೆಯಲ್ಲಿ ಇರಿಸಲು ನಾನು ಸಚಿವನಾಗಿ ಏನು ಮಾಡಿದ್ದೇನೆಯೋ ಅದನ್ನು ಪೂರ್ಣ ಪ್ರಜ್ಞೆಯಿಂದ ಮಾಡಿದ್ದೇನೆ. ನೀವು ನನ್ನ ಮೇಲೆ ಆರೋಪ ಮಾಡಿ ಪ್ರಕರಣವನ್ನು ಹೇರಲು ಮುಂದಾದರೆ, ಅದು ಬಹುಶಃ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಸಂತೋಷವಾಗಬಹುದು. ಹೊರತಾಗಿ, ಬೇರೇನು ಅಗದು” ಎಂದು ಕೆಟಿಆರ್‌ ಹೇಳಿದ್ದಾರೆ.

“ರಾಜಕೀಯ ವಿರೋಧವನ್ನು ನಿಗ್ರಹಿಸಲು ಸರ್ಕಾರವು ಆರೋಪ-ಪ್ರಕರಣವನ್ನು ಸಾಧನವಾಗಿ ಬಳಸುತ್ತಿದೆ. ನಾನು ಕಾನೂನುಬದ್ಧವಾಗಿ ಹೋರಾಡುತ್ತೇನೆ. ನಾನು ಎಲ್ಲ ರೀತಿಯ ಕಾನೂನು ಪರಿಹಾರಗಳನ್ನು ಹುಡುಕುತ್ತೇನೆ. ಸತ್ಯ ಹೊರ ಬರುತ್ತದೆ. ನ್ಯಾಯವು ಮೇಲುಗೈ ಸಾಧಿಸುತ್ತದೆ ಎಂದು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಈ ನಡುವೆ, ತಮ್ಮ ವಿರುದ್ಧ ದಾಖಲಾಗಿರುವ ಫಾರ್ಮುಲಾ ಇ ರೇಸ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೆಟಿಆರ್ ಸಲ್ಲಿಸಿದ್ದ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

2023ರ ಫೆಬ್ರವರಿಯಲ್ಲಿ ಹೈದರಾಬಾದ್‌ನಲ್ಲಿ ನಡೆದ ಫಾರ್ಮುಲಾ ಇ ರೇಸ್‌ಗೆ ಸಂಬಂಧಿಸಿದಂತೆ ಹಣಕಾಸು ಅಕ್ರಮಗಳು ನಡೆದಿವೆ. ಕೆಟಿಆರ್‌ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣವನ್ನು ತೆಲಂಗಾಣದ ಎಸಿಬಿ ತನಿಖೆ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...