ವಂಚನೆ ಪ್ರಕರಣ | ಚೈತ್ರಾ ಸೇರಿದಂತೆ 9 ಆರೋಪಿಗಳ ವಿರುದ್ಧ 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

Date:

ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಮೂಲದ ಚೈತ್ರಾ ಸೇರಿದಂತೆ 9 ಮಂದಿ ಆರೋಪಿಗಳ ವಿರುದ್ಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

- Advertisement -

ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡು ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ವ್ಯವಹಾರ​ಗಳು, ಸಾಂದರ್ಭಿಕ ಸಾಕ್ಷಿಗಳು, ಹಾಲಶ್ರೀ ಸ್ವಾಮೀಜಿ ಕಾರು ಚಾಲಕ ಹಣ ಇಟ್ಟುಹೋಗಿದ್ದ ಬಗ್ಗೆ ಸೇರಿದಂತೆ ಸ್ದಳ ಮಹಜರು ನಡೆಸಿ ಹಣ ವಶಪಡಿಸಿಕೊಂಡ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.

ಚೈತ್ರಾ ಕುಂದಾಪುರ ಬಾಬು ಪೂಜಾರಿ
ಚೈತ್ರಾ ಕುಂದಾಪುರ -ಬಾಬು ಪೂಜಾರಿ

ಅಲ್ಲದೇ ಚೈತ್ರಾ ವಂಚನೆ ಪ್ರಕರಣದಲ್ಲಿ‌ ಈವರೆಗೆ ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿ ವಸೂಲಿ ಮಾಡಲಾಗಿದೆ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ ಸ್ವಾಮೀಜಿ, ಧನರಾಜ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ದೂರುದಾರ ಗೋವಿಂದ ಬಾಬು ಪೂಜಾರಿ ಬಳಿಯಲ್ಲಿದ್ದ ಎಲ್ಲ ಆಡಿಯೋ, ವಿಡಿಯೋವನ್ನು ಸಿಸಿಬಿ ಪೊಲೀಸರು ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಗೋವಿಂದ ಬಾಬು ಪೂಜಾರಿ ಬಳಿಯೇ ಡೀಲ್ ಸಂಬಂಧ 10 ವಿಡಿಯೋ ಪಡೆಯಲಾಗಿದ್ದು, ಆರೋಪಿಗಳ ಮೊಬೈಲ್‌ಗಳ ಡೇಟಾ ರಿಟ್ರೀವ್ ಮಾಡಿರುವುದನ್ನು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೈತ್ರಾ ವಂಚನೆ ಮಾಡಿದ್ದ ಸಂಬಂಧ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಸಂಘಪರಿವಾರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಚೈತ್ರಾ ಬಂಧನವಾಗುತ್ತಿದ್ದಂತೆಯೇ, ಇದು ರಾಜ್ಯಾದ್ಯಂತ ಬಹಳಷ್ಟು ಸುದ್ದಿಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...