₹97 ಕೋಟಿ ಅವ್ಯವಹಾರ ಆರೋಪ; ಇದು ಶುದ್ಧ ಸುಳ್ಳು ಎಂದ ಬೈರತಿ ಬಸವರಾಜ್‌

Date:

  • ಬೈರತಿ ಬಸವರಾಜ್ ಸೇರಿ 10 ಮಂದಿ ವಿರುದ್ಧ ದೂರು
  • ಲೋಕಾಯುಕ್ತದಲ್ಲಿ ದೂರು ದಾಖಲಿಸಿದ ಟಿ ಕೆ ಅಬ್ರಾಹಂ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿರುವ ಹೊತ್ತಿನಲ್ಲಿ ರಾಜ್ಯ ಬಿಜೆಪಿ ಮೇಲಿಂದ ಮೇಲೆ ಮುಜುಗರಕ್ಕೀಡಾಗುತ್ತಿದೆ. ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನದ ಬೆನ್ನಲ್ಲೇ ಸಚಿವ ಬೈರತಿ ಬಸವರಾಜ್ ಅವರು ₹97 ಕೋಟಿ ಅವ್ಯವಹಾರ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಆರೋಪವನ್ನು ಸಚಿವರು ತಳ್ಳಿ ಹಾಕಿದ್ದಾರೆ.

ಕಾಮಗಾರಿ ಕೈಗೊಳ್ಳದೇ ₹97 ಕೋಟಿ ಅವ್ಯವಹಾರ ನಡೆಸಲಾಗಿದೆ ಎಂದು ಬೈರತಿ ಬಸವರಾಜ್ ಸೇರಿ 10 ಮಂದಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, “ನನ್ನ ಮೇಲೆ ಮಾಡಿರುವ ಆರೋಪಗಳು ಶುದ್ಧ ಸುಳ್ಳು. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಪ್ರಾಮಾಣಿಕವಾಗಿ ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿರುವೆ ಸುಖಾಸುಮ್ಮನೆ ನನ್ನ ಮೇಲೆ ಆಪಾದನೆ ಮಾಡುವ ಕೆಲಸವಾಗುತ್ತಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ: ವರುಣಾ ಮತ್ತು ಕೋಲಾರದಿಂದ ಸ್ಪರ್ಧೆ

“ಲೋಕಾಯುಕ್ತ ಪೊಲೀಸರು ಮತ್ತು ನ್ಯಾಯಾಲಯದ ಮೇಲೆ ನನಗೆ ಅಪಾರ ಗೌರವವಿದೆ. ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಿ ಅಗತ್ಯ ದಾಖಲೆಗಳನ್ನು ಒದಗಿಸುವೆ” ಎಂದು ಹೇಳಿದ್ದಾರೆ.

“ಚುನಾವಣೆ ಹತ್ತಿರ ಬರುತ್ತಿರುವುದರಿಂದ ಈ ರೀತಿ ಕುತಂತ್ರ ಮಾಡಲಾಗಿದ್ದು, ಮೊಸರಲ್ಲಿ ಕಲ್ಲು ಹುಡುಕುವ, ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡಿದ್ದು ನನಗೆ ತೀವ್ರ ಬೇಸರ ತರಿಸಿದೆ. ಚುನಾವಣೆಯಲ್ಲಿ ಜನರೇ ಪಾಠ ಕಲಿಸುವ ಮೂಲಕ ಉತ್ತರ ನೀಡಲಿದ್ದಾರೆ” ಎಂದಿದ್ದಾರೆ.

“ಕೆಆರ್ ಪುರ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಹಣ ಮಂಜೂರು ಮಾಡಿಸಿ ಕಾಮಗಾರಿ ಕೈಗೊಳ್ಳದೇ ಕಾಗದಪತ್ರದಲ್ಲೇ ಕಟ್ಟಡ ನಿರ್ಮಾಣ ಮಾಡಿಸಿರುವುದಾಗಿ ದಾಖಲೆ ಸೃಷ್ಟಿಸಿ ₹97 ಕೋಟಿ ವಂಚಿಸಿದ್ದಾರೆ” ಎಂಬುದು ಅಬ್ರಾಹಿಂ ಆರೋಪವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ...

ಮುಂಗಾರು ವಿಳಂಬ: ರಾಜ್ಯದ 11 ಜಲಾಶಯಗಳು ಖಾಲಿ!

ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಆತಂಕ ತಮಿಳುನಾಡಿನ ಜೊತೆ ಜಲಸಂಘರ್ಷ ಸೃಷ್ಟಿಯ ಭೀತಿ ಮುಂಗಾರು...