ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯ ತಲೆತಗ್ಗಿಸುವಂಥ ನಿರ್ಣಯ: ವಿಶ್ವೇಶ್ವರ ಹೆಗಡೆ ಕಾಗೇರಿ

Date:

  • ‘ಡಿಕೆಶಿ ಪ್ರಕರಣ ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆಗೆ ಅಗೌರವ’
  • ‘ಕ್ಯಾಬಿನೆಟ್‍ನ ನಿರ್ಣಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ’

ಮೊನ್ನೆ ನಡೆದ ನಮ್ಮ ರಾಜ್ಯದ ಕ್ಯಾಬಿನೆಟ್‍ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಡೀ ದೇಶದಲ್ಲೇ ಕರ್ನಾಟಕವು ತಲೆತಗ್ಗಿಸುವಂತೆ ಮಾಡಿರುವ ನಿರ್ಣಯ ಅಂಗೀಕರಿಸಿದ್ದಾರೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

- Advertisement -

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಡಿ.ಕೆ.ಶಿವಕುಮಾರ್ ಅವರು ಗಳಿಸಿದ ಅಕ್ರಮ ಆಸ್ತಿ ಸಂಬಂಧ ಸಿಬಿಐ ತನಿಖೆ ನಡೆಯುತ್ತಿದೆ. ಸಿಬಿಐ ಮತ್ತು ಕೋರ್ಟ್‍ಗಳು ಅವರ ಮೇಲೆ ಚಾರ್ಜ್‍ಶೀಟ್ ಹಾಕಲು ಬೇಕಾದ ಪ್ರಕ್ರಿಯೆ ನಡೆಸುತ್ತಿವೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಮತ್ತು ಕರ್ನಾಟಕದ ಸಚಿವ ಸಂಪುಟವು ನಮ್ಮ ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆಗೇ ಅಗೌರವ ಆಗುವಂಥ ನಿರ್ಣಯವನ್ನು ಕ್ಯಾಬಿನೆಟ್‍ನಲ್ಲಿ ತೆಗೆದುಕೊಂಡಿದ್ದಾರೆ” ಎಂದು ಆಕ್ಷೇಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕ್ಯಾಬಿನೆಟ್‍ನ ಈ ನಿರ್ಣಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಆ ನಿರ್ಣಯ ಮಾಡಲು ಸ್ಪೀಕರ್ ಸ್ಥಾನವನ್ನು ಅವರು ಬಳಕೆ ಮಾಡಿಕೊಂಡಿರುವುದು ದುರ್ದೈವದ ಸಂಗತಿ. ಸ್ಪೀಕರ್ ಸ್ಥಾನವು ಸಂವಿಧಾನಬದ್ಧವಾಗಿ ತನ್ನದೇ ಆದ ಘನತೆ, ಗೌರವವನ್ನು ಇಟ್ಟುಕೊಂಡಿದೆ. ಸ್ಪೀಕರ್ ಅವರ ಅನುಮತಿಯ ವ್ಯಾಪ್ತಿಯಲ್ಲೇ ಬರದೆ ಇರುವ ವಿಷಯಕ್ಕೆ ಸ್ಪೀಕರ್ ಅವರು ಅನುಮತಿ ಕೊಟ್ಟಿಲ್ಲವೆಂದು ಕಾರಣವನ್ನು ಹೇಳಿ ಕ್ಯಾಬಿನೆಟ್ ನಿರ್ಣಯ ಮಾಡಿದ್ದು ಕಾಂಗ್ರೆಸ್ ಸರಕಾರದ ಅಕ್ಷಮ್ಯ ಅಪರಾಧ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಮರಳಿ ಹೋಗುವ ಬಗ್ಗೆ ಕನಸು ಮನಸಿನಲ್ಲೂ ಯೋಚಿಸಿಲ್ಲ: ಗಾಲಿ ಜನಾರ್ದನ ರೆಡ್ಡಿ

“ಸಿದ್ದರಾಮಯ್ಯನವರು ಹಿರಿತನ ಉಳ್ಳವರು; ಅವರು ಯಾವ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದು ವ್ಯಕ್ತವಾಗುತ್ತದೆ. ಅವರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಲಿ. ಅವರ ಹಿರಿತನ, ಅನುಭವಕ್ಕೆ ತಕ್ಕಂತೆ ಕೆಲಸ ಮಾಡಲಿ. ಈ ರೀತಿಯ ಒತ್ತಡಕ್ಕೆ ಮಣಿದು, ಅಸಹಾಯಕರಾಗಿ ಅಥವಾ ಬಿಜೆಪಿ ಮೇಲೆ ಇನ್ನೇನೋ ಸಿಟ್ಟು, ದ್ವೇಷ ಸಾಧನೆಗೆ ಈ ರೀತಿ ರಾಜ್ಯದ ಜನರು, ನಮ್ಮ ವ್ಯವಸ್ಥೆಯೇ ತಲೆತಗ್ಗಿಸುವಂಥ ನಿರ್ಣಯವನ್ನು ಸಿದ್ದರಾಮಯ್ಯನವರು ಮಾಡಬಾರದು” ಎಂದು ಆಗ್ರಹಿಸಿದರು.

“ಇಡೀ ಕ್ಯಾಬಿನೆಟ್ ಮತ್ತು ಮುಖ್ಯಮಂತ್ರಿಗಳು ಈ ನಿರ್ಣಯ ತೆಗೆದುಕೊಂಡಿರುವುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಸಿಬಿಐ ತನಿಖೆ ಮುಂದುವರಿಯಬೇಕು. ಇದರಲ್ಲಿ ಸ್ಪೀಕರ್ ಪಾತ್ರ ಏನೂ ಇಲ್ಲ. ಸ್ಪೀಕರ್ ಅವರ ವ್ಯಾಪ್ತಿಗೆ ಬರದೇ ಇರುವ ವಿಷಯವಿದು” ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...