ಶಿಕ್ಷಕಿಯಿಂದ ಧರ್ಮ ನಿಂದನೆ ಪ್ರಕರಣ | ತನಿಖೆ ನಡೆಸಲು ಐಎಎಸ್ ಅಧಿಕಾರಿ ನೇಮಕ: ದಿನೇಶ್‌ ಗುಂಡೂರಾವ್

Date:

Advertisements

ಮಂಗಳೂರು ನಗರದ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಧರ್ಮ ನಿಂದನೆ ಮಾಡಿದ್ದಾರೆ ಎನ್ನಲಾದ ಪ್ರಕರಣ ಹಾಗೂ ಅದರ ನಂತರದ ಬೆಳವಣಿಗೆಗಳ ಕುರಿತು ತನಿಖೆ ನಡೆಸಲು ಐಎಎಸ್ ಅಧಿಕಾರಿಯೊಬ್ಬರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಲಾ ಶಿಕ್ಷಣ‌ ಇಲಾಖೆ ಕಲಬುರಗಿಯ ಹೆಚ್ಚುವರಿ ಆಯುಕ್ತರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಈ ಸಂಬಂಧ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಶೀಘ್ರ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ” ಎಂದು ಹೇಳಿದರು.

“ಶಿಕ್ಷಕಿ ಪಾಠ ಮಾಡುವಾಗ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಶಾಸಕರು, ಮಕ್ಕಳನ್ನು ಬೀದಿಯಲ್ಲಿ ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ಇದು ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು. ಅವರ ನಡವಳಿಕೆಯಿಂದ ಬೇಸರವಾಗಿದೆ. ಘಟನೆ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಶಾಸಕರ ಮೇಲೆ ಪ್ರಕರಣ ದಾಖಲಿಸಲಾಗಿದೆ” ಎಂದರು.

Advertisements

“ಬಿಜೆಪಿಯವರು ಹೇಳಿದಾಕ್ಷಣ ಪ್ರಕರಣ ಹಿಂಪಡೆಯಲಾಗದು. ತನಿಖೆ ನಡೆಯುತ್ತಿದ್ದು, ತಪ್ಪು ಎಸಗಿದ್ದು ದೃಢಪಟ್ಟರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ” ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಆಶಾಕಿರಣ’ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

“ಭಾನುವಾರ ಹಾವೇರಿಯಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ‘ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಎಂಬ ಧ್ಯೇಯ ವಾಕ್ಯದಲ್ಲಿ ಯೋಜನೆ ಜಾರಿಯಾಗಲಿದೆ” ಎಂದು ಸಚಿವರು ತಿಳಿಸಿದರು.

“ಮಗುವಿನಿಂದ ಹಿಡಿದು ಎಲ್ಲಾ ವಯೋಮಾನದವರಿಗೆ ಕಣ್ಣಿನ ತಪಾಸಣೆ ಮಾಡಲಾಗುತ್ತೆ. ದೃಷ್ಟಿದೋಷ ಇರುವವರಿಗೆ ಉಚಿತ ಕನ್ನಡಕ ವಿತರಣೆ ಮಾಡುತ್ತೇವೆ. ಅವಶ್ಯಕತೆ ಇರುವವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡುತ್ತೇವೆ. ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಚಾಮರಾಜನಗರ, ಹಾವೇರಿ ಜಿಲ್ಲೆಯಲ್ಲಿ ಈ ಯೋಜನೆ ಜಾರಿ ಮಾಡಿದ್ದೇವೆ” ಎಂದರು.

“ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರಕನ್ನಡ ಜಿಲ್ಲೆಯಲ್ಲಿ ಆಶಾಕಿರಣ ಅಭಿಯಾನ ಆರಂಭವಾಗುತ್ತದೆ. ಮುಂದೆ ಹಂತ ಹಂತವಾಗಿ ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಈ ಯೋಜನೆ ವಿಸ್ತರಣೆ ಆಗುತ್ತೆ. ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡುತ್ತಾರೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X