ಅನ್ನಕ್ಕಾಗಿ ಜೀವತೆತ್ತ ಪ್ರಕರಣ | ಕಾಂಗ್ರೆಸ್‌ ಸರಕಾರವನ್ನು ಕಟಕಟೆಯಲ್ಲಿ ನಿಲ್ಲಿಸಿದೆ: ಕುಮಾರಸ್ವಾಮಿ ಕಿಡಿ

Date:

“ಅನ್ನಕ್ಕಾಗಿ ಜೀವತೆತ್ತ ಕುಟುಂಬದ ಪ್ರಕರಣ ಕಾಂಗ್ರೆಸ್‌ ಸರಕಾರವನ್ನು ಕಟಕಟೆಯಲ್ಲಿ ನಿಲ್ಲಿಸಿದೆ. ಈ ಯುವಕನ ಸಾವಿಗೆ ಕಾರಣ ಮತ್ತು ನೇರ ಹೊಣೆ ಈ ಸರ್ಕಾರ. ರಾಜ್ಯಕ್ಕೆ ಸಿದ್ದರಾಮಯ್ಯ ಅವರೇ ಸಮಜಾಯಿಷಿ ಕೊಡಬೇಕು ಹಾಗೂ ಶಾಂತವ್ವನಿಗೆ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಬೇಕು” ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈ ಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು ದಿನ ತಾಯಿ ಮಗ ಇಬ್ಬರೂ ಅನ್ನಕ್ಕಾಗಿ ಪರಿತಪಿಸಿದ್ದಾರೆ” ಎಂದಿದ್ದಾರೆ.

“ಹಳ್ಳ ಹಿಡಿದಿರುವ ನಿಮ್ಮ ಗ್ಯಾರಂಟಿಗಳನ್ನು ಸರಿದಾರಿಗೆ ತನ್ನಿ. ಅವುಗಳ ವೈಫಲ್ಯವನ್ನು ಪರಾಮರ್ಶೆ ಮಾಡಿ. ಅಧಿಕಾರಿಗಳ ಕಿವಿ ಹಿಂಡಿ ಕೆಲಸ ಮಾಡಿಸಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದ್ದರೆ ಮೊದಲು ಈ ಕೆಲಸ ಮಾಡಿ” ಎಂದು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅನ್ನಭಾಗ್ಯ, ಗೃಹಲಕ್ಷ್ಮೀ ಹೆಸರಿನಲ್ಲಿ ಲೋಕೋದ್ಧಾರ ಮಾಡಿದ್ದೇವೆ ಎಂದು ಸುಳ್ಳುಲೆಕ್ಕ ಕೊಟ್ಟು ಜನರ ತೆರಿಗೆ ಹಣದಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ನಿಮ್ಮ ಲೊಳಲೊಟ್ಟೆ ಬಯಲಾಗಿದೆ. ನುಡಿದಂತೆ ನಡೆದಿದ್ದೇವೆ ಎಂದರೆ ಇದೇನಾ ಮುಖ್ಯಮಂತ್ರಿಗಳೇ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಾಹುತಿ ಆಘಾತಕಾರಿ. ನಿಮ್ಮ ಪ್ರಚಾರಪ್ರಿಯ, ಖೊಟ್ಟಿ ಗ್ಯಾರಂಟಿಗಳ ಸರಕಾರದ ಆತ್ಮಸಾಕ್ಷಿಗೆ ಎದುರಾದ ದೊಡ್ಡ ಸವಾಲು” ಎಂದಿದ್ದಾರೆ.

“ಅಧಿಕಾರದ ಮದವೇರಿ ಮಂಪರು ಬಿದ್ದಿರುವ ನಿಮ್ಮ ಕಂಗಳು ಆ ನತದೃಷ್ಟನ ಪ್ರಾಣಾರ್ಪಣೆಯಿಂದಲಾದರೂ ತೆರೆದುಕೊಳ್ಳಲಿ. ಇಲ್ಲವಾದರೆ, ಆ ಯುವಕನ ಸಾವಿನ ಶಾಪ ನಿಮಗೆ ತಟ್ಟದೇ ಬಿಡದು.
ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ? ಇದ್ದರೆ ಈ ಧಾರುಣಕ್ಕೆ ರಾಜ್ಯ ಸಾಕ್ಷಿಯಾಗುತ್ತಿತ್ತಾ” ಎಂದು ಪ್ರಶ್ನಿಸಿದ್ದಾರೆ.

“ಗ್ಯಾರಂಟಿಗಳ ಮೂಲಕವೇ ಗತಿಗೆಟ್ಟ ಕಾಂಗ್ರೆಸ್‌ ಪಕ್ಷದ ಹೊಟ್ಟೆ ಹೊರೆಯುತ್ತಿರುವ ಮತಿಗೆಟ್ಟ ನಿಮ್ಮ ಸರಕಾರವು ಕಲ್ಯಾಣ ಕಾರ್ಯಕ್ರಮಗಳ ಕಪಟ ಪೋಷಾಕಿನಿಂದ ಮೆರೆಯುತ್ತಿದೆ. ಆ ಪೋಷಾಕು, ನಿಮ್ಮ ಢೋಂಗಿಧೀರತ್ವದ ಮುಖವಾಡ ಕಳಚಿ ನೆಲಕ್ಕೆ ಬಿದ್ದಿದೆ. ಇನ್ನಾದರೂ ಎಚ್ಚೆತ್ತುಕೊಳ್ಳಿ” ಎಂದು ಎಚ್ಚರಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮಾಜಿ ಜಾತ್ಯತೀತ ಮಾಜಿ ಮುಖ್ಯಮಂತ್ರಿ ಗಳೆ, ಅನ್ನಭಾಗ್ಯ ಯೋಜನೆಯಲ್ಲಿ ಐದು ಕೆಜಿ ಅಕ್ಕಿ ಹೆಚ್ಚುವರಿಯಾಗಿ ಕೊಡುವ ನಿರ್ಧಾರ ಸರ್ಕಾರ ಮಾಡಿದಾಗ,,, ನೀವು ನಿಮ್ಮ ಹೊಸ ಮೈತ್ರಿಯ ನಕಲಿ ದೇಶಭಕ್ತರು,,ದೇಶ ದಿವಾಳಿ ಆಗುವುದೆಂದು ಅರಚಿಕೊಂಡರು,,, ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ ನೀವೆಲ್ಲಾ ರಾಮಭಜನೆಯಲ್ಲಿ ಮುಳುಗಿರುವಿರಿ,, ಸಾವಿರಾರು ಜನರು ಜೀವಭಯವಿದ್ದರೂ ಕಟ್ಟಡ ಕಾರ್ಮಿಕರು ಯುದ್ಧಪೀಡಿತ ಇಸ್ರೇಲ್ ಗೆ ಹೋಗುತ್ತಿದ್ದಾರೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇದೆಯಾ,,,ಬರೀ ಕಾಂಗ್ರೆಸ್ ಸರ್ಕಾರ ಟೀಕಿಸುವ ಗುತ್ತಿಗೆ ಪಡೆದಿರುವಂತೆ ಮಾತಾಡಿದ್ರೆ ಜನರು ಪೆದ್ದರಿಲ್ಲ ,, ತೆರಿಗೆ ಪಾಲು ನಮ್ಮ ಹಕ್ಕು ಉತ್ತರ ಪ್ರದೇಶ ಒಂದು ರಾಜ್ಯಕ್ಕೆ ಕೊಟ್ಟ ಮೊತ್ತ ಇಡೀ ದಕ್ಷಿಣ ಭಾರತಕ್ಕೆ ಕೊಟ್ಟಿದ್ದಾರೆ,,, ಕಾನೂನು ಪ್ರಕಾರ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ಕೇಳುವ ತಾಕತ್ತು ಯಾಕಿಲ್ಲ ನಿಮಗೆ,, ಒಂದು ವೇಳೆ ನೀವೇ ರಾಜ್ಯದ ಮುಖ್ಯಮಂತ್ರಿ ಆಗಿದ್ದರೆ ಸುಮ್ಮನೇ ಇರುತ್ತಿದ್ರಾ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ

“ಅಮೃತ್ ಭಾರತ ನಿಲ್ದಾಣ ಯೋಜನೆಯಡಿ ₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275...

ಮಾನನಷ್ಟ ಪ್ರಕರಣಗಳಲ್ಲಿ ಪಕ್ಷವನ್ನೂ ಆರೋಪಿಯಾಗಿ ಮಾಡಬಹುದು: ಕರ್ನಾಟಕ ಹೈಕೋರ್ಟ್

ಮಾನನಷ್ಟ ಮೊಕದ್ದಮೆಗಳಲ್ಲಿ ಒಬ್ಬ ವ್ಯಕ್ತಿ ಮಾತ್ರವಲ್ಲ, ರಾಜಕೀಯ ಪಕ್ಷಗಳಂತಹ ಸಂಸ್ಥೆಗಳು ಸೇರಿದಂತೆ...

ಆನೇಕಲ್ | ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆ

ಬೆಂಗಳೂರಿನ ಆನೇಕಲ್‌ ಬಳಿಯ ಕಾಳನಾಯಕನಹಳ್ಳಿ ಸಮೀಪದ ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ...

ಬೆಂಗಳೂರು | ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಅಪಹರಣ: ಆರೋಪಿಗಳ ಬಂಧನ

ಪದೇಪದೆ ಡ್ರಗ್ಸ್‌ ಖರೀದಿ ಮಾಡುತ್ತಿದ್ದವನ ಬಳಿ ಹೆಚ್ಚು ಹಣ ಇರಬಹುದೆಂದು ಭಾವಿಸಿ...