ಫಲಪ್ರದ ನೀಡದ ಆರ್ ಅಶೋಕ್‌ ಭೇಟಿ; ಕಾಂಗ್ರೆಸ್‌ನತ್ತ ಜೆ ಸಿ ಮಾಧುಸ್ವಾಮಿ!

Date:

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ಗಾಗಿ ಸಾಕಷ್ಟು ಪ್ರಯತ್ನ ನಡೆಸಿ, ಕೊನೆಗೆ ಬಿಜೆಪಿಯಿಂದ ಟಿಕೆಟ್‌ ವಂಚಿರಾಗಿರುವ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಶೀಘ್ರದಲ್ಲೇ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ದಟ್ಟವಾಗಿ ಕೇಳಿಬರುತ್ತಿವೆ.

- Advertisement -

ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಬಿಜೆಪಿ ನಾಯಕ ಜೆ ಸಿ ಮಾಧುಸ್ವಾಮಿ ಪಕ್ಷ ತೊರೆಯಲು ನಿರ್ಧರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಕಳೆದ ವಿಧಾನಸಭೆ ಸೋಲಿನ ನಂತರ ಲೋಕಸಭೆಗೆ ಸ್ಪರ್ಧಿಸಲು ಸಜ್ಜಾಗಿದ್ದರು. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರು ಟಿಕೆಟ್ ಕೊಡಿಸುತ್ತಾರೆ ಎಂದು ನಂಬಿದ್ದರು. ಕೊನೆಗೆ ಮಾಜಿ ಸಚಿವ ವಿ.ಸೋಮಣ್ಣಗೆ ಟಿಕೆಟ್ ಸಿಗುತ್ತಿದ್ದಂತೆ ತೀವ್ರ ಅಸಮಾಧಾನ ಹೊರಹಾಕಿದ್ದರು.

ಜಿಲ್ಲೆಯವರನ್ನು ಬಿಟ್ಟು ಹೊರಗಿನವರಿಗೆ ಅವಕಾಶ ನೀಡದಂತೆ ಬಹಿರಂಗವಾಗಿಯೇ ಬಿಜೆಪಿ ವರಿಷ್ಠರನ್ನು ಆಗ್ರಹಿಸಿದ್ದರು. ಮಾಧುಸ್ವಾಮಿಯ ಮನವೊಲಿಸಲು ಸೋಮಣ್ಣ ಮುಂದಾಗುತ್ತಿದ್ದಂತೆ, “ಸೋಮಣ್ಣ, ತಮ್ಮ ಮನೆಗೆ ಬರುವುದು ಬೇಡ” ಎಂದು ಕಡ್ಡಿ ಮುರಿದಂತೆ ಮಾಧ್ಯಮಗಳ ಮುಂದೆ ಬಂದು ಹೇಳಿಕೆ ನೀಡಿದರು.

ಸಿಎಂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಮಾಧುಸ್ವಾಮಿಗೆ ಆಹ್ವಾನ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮಾಧುಸ್ವಾಮಿ ಅಧಿಕೃತವಾಗಿ ಕಾಂಗ್ರೆಸ್‌ಗೆ ಬಂದರೆ ನಿಯೋಜಿತ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ ಬದಲಾಗಿ ಅವರನ್ನೇ ಕಣಕ್ಕೆ ಇಳಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಮಾಧುಸ್ವಾಮಿ ಕಾಂಗ್ರೆಸ್‌ಗೆ ಬರುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಮತ್ತಷ್ಟು ಬಲ ಬರಲಿದೆ ಎನ್ನುವ ವಿಶ್ಲೇಷಣೆ ವ್ಯಕ್ತವಾಗಿದೆ.

ಲೋಕಸಭೆಗೆ ಟಿಕೆಟ್ ಕೊಡುವುದಾದರೆ ಪಕ್ಷ ಸೇರುವುದಾಗಿ ಮಾಧುಸ್ವಾಮಿ ಷರತ್ತು ಹಾಕಿದ್ದಾರೆ ಎನ್ನಲಾಗಿದೆ. ಲೋಕಸಭೆಗೆ ಟಿಕೆಟ್ ನೀಡಲು ಸಾಧ್ಯವಾಗದಿದ್ದರೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ಭರವಸೆ ಕಾಂಗ್ರೆಸ್‌ ನೀಡಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

ಫಲಪ್ರದ ನೀಡದ ಆರ್.ಅಶೋಕ್‌ ಭೇಟಿ

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆ ಸಿ ಪುರದಲ್ಲಿರುವ ಮಾಧುಸ್ವಾಮಿ ಮನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ನಾಯಕರು ಸೋಮವಾರ ರಾತ್ರಿ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಿ‌ದ್ದಾರೆ.

ಈ ಸಂದರ್ಭದಲ್ಲಿ ಪಕ್ಷದ ವರಿಷ್ಠರ ವಿರುದ್ಧ ಮಾಧುಸ್ವಾಮಿ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. “ಇಷ್ಟೆಲ್ಲ ಆದಮೇಲೆ ನಿಮ್ಮ ಪಕ್ಷದಲ್ಲಿ ಯಾವುದೇ ಕಾರಣಕ್ಕೂ ಇರುವುದಿಲ್ಲ” ಎಂದು ನೇರವಾಗಿಯೇ ಅಶೋಕ್‌ಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಮಾಧುಸ್ವಾಮಿ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಜೆಡಿಎಸ್‌ನ ಸಿ ಬಿ ಸುರೇಶ್‌ಬಾಬು ವಿರುದ್ಧ ಸೋತಿದ್ದರು. ತಮ್ಮ ಸೋಲಿಗೆ ಸ್ವಪಕ್ಷದ ಮುಖಂಡರೇ ಕಾರಣ ಎನ್ನುವ ಆರೋಪಗಳನ್ನು ಮಾಧುಸ್ವಾಮಿ ಮಾಡಿದ್ದರು. 2018ರಲ್ಲಿ ಇದೇ ಕ್ಷೇತ್ರದಿಂದ ಸುರೇಶ್ ಬಾಬು ಅವರನ್ನು ಮಾಧುಸ್ವಾಮಿ ಸೋಲಿಸಿದ್ದರು.

ಚಿಕ್ಕನಾಯಕನಹಳ್ಳಿಯಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಾಧುಸ್ವಾಮಿ ಈ ಹಿಂದೆ ಜನತಾ ದಳದಲ್ಲಿದ್ದವರು. ಬಿ ಎಸ್ ಯಡಿಯೂರಪ್ಪ ಅವರ ಕೆಜೆಪಿ ಸೇರಿ ನಂತರ ಬಿಜೆಪಿ ಪಾಳಯಕ್ಕೆ ತೆರಳಿದ್ದರು. ಅವರು 2023ರ ವಿಧಾನಸಭೆ ಚುನಾವಣೆ ಸೋಲಿನ ನಂತರ ಬಿಜೆಪಿಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...