- ಅರಸೀಕೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರ ಅರ್ಪಣೆ
- ಉಚಿತ ಪ್ರಯಾಣಕ್ಕೆ ಕಾನೂನು ವಿದ್ಯಾರ್ಥಿನಿಯ ವಿನೂತನ ಶೈಲಿಯ ಧನ್ಯತೆ
ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್‌ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಕಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಅವರು ಫ್ರೀ ಟಿಕೆಟ್ ಹಾರವನ್ನು ಅರ್ಪಿಸಿದ್ದಾರೆ.
ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಕಿದರು. @siddaramaiah ಅವರು @INCKarnataka ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ವಿಶೇಷ ಹಾರವನ್ನು ಅರ್ಪಿಸಿದರು. pic.twitter.com/PGdYy965FK
— eedina.com (@eedinanews) April 22, 2024
ಮುಖ್ಯಮಂತ್ರಿಗಳಿಗೆ ಹಾರ ಅರ್ಪಿಸುತ್ತಾ ಜಯಶ್ರೀ ಅವರು, “ನೀವು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಕೊಟ್ಟ ಉಚಿತ ಪ್ರಯಾಣದ ಫಲವಾಗಿ ನಾನು ಕಾನೂನು ವಿದ್ಯಾಭ್ಯಾಸವನ್ನು ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ. ಹೀಗಾಗಿ ಎಲ್ಲ ಫ್ರೀ ಟಿಕೆಟ್‌ಗಳನ್ನು ಜೋಡಿಸಿಟ್ಟುಕೊಂಡು ಹಾರ ಮಾಡಿದ್ದೆ. ನಿಮಗೆ ಅರ್ಪಿಸುವುದಕ್ಕೆ ತಿಂಗಳುಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದೆ. ಇವತ್ತು ಅರಸೀಕೆರೆಗೆ ಬರ್ತಾ ಇದ್ದೀರಿ ಅಂತ ಗೊತ್ತಾಯ್ತು. ಒಂದೇ ಉಸಿರಲ್ಲಿ ಹಾರ ಹಿಡ್ಕೊಂಡು ಓಡಿ ಬಂದಿದ್ದೇನೆ” ಎನ್ನುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯತೆ ಅರ್ಪಿಸಿ ಆಶೀರ್ವಾದ ಪಡೆದುಕೊಂಡರು.
ಅರಸೀಕೆರೆಯ ಕಾನೂನು ವಿದ್ಯಾರ್ಥಿನಿ ಎಂ.ಎ.ಜಯಶ್ರೀ ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್‌ಗಳಿಂದ ಮಾಡಿದ್ದ ವಿಶೇಷ ಹಾರವನ್ನು ಸಿಎಂ ಸಿದ್ದರಾಮಯ್ಯರಿಗೆ ಅರ್ಪಿಸಿದ್ದಾರೆ. ಉಚಿತ ಬಸ್ ಪ್ರಯಾಣದಿಂದ ನನ್ನ ವಿದ್ಯಾಭ್ಯಾಸ ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ ಎಂದು ಸಿಎಂಗೆ ಧನ್ಯವಾದ ತಿಳಿಸಿದರು.@RLR_BTM @KSRTC_Journeys pic.twitter.com/0JjdOTSQXU
— eedina.com (@eedinanews) April 22, 2024
